ಬೆಂಗಳೂರು | ಪತ್ನಿಯ ಹತ್ಯೆಗೈದ ಪತಿ ಬಂಧನ

Date:

  • ತನಿಖೆ ನಡೆಸುವ ವೇಳೆ ಮೃತಳ ಗಂಡನ ಅಸಲಿ ಕಥೆ ಬಯಲು
  • ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಎರಡನೇ ಪತ್ನಿಯನ್ನು ತಾನೇ ಕೊಂದು, ಅವಳು ಮಾತನಾಡುತ್ತಿಲ್ಲ ಎಂದು ಗೋಳಾಡುತ್ತ ಆಸ್ಪತ್ರೆಗೆ ಸೇರಿಸಿದ್ದ ದುರುಳ ಪತಿಯನ್ನು ತನಿಖೆ ಬಳಿಕ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಯಶವಂತಪುರದಲ್ಲಿ ಈ ಘಟನೆ ನಡೆದಿದೆ. ಶರತ್ ಎಂಬುವವನು ಈ ಹಿಂದೆ ಮದುವೆ ಆಗಿದ್ದರೂ ಕೂಡಾ ಪ್ರೀಯಾ ಎಂಬುವವರನ್ನು ಎರಡನೇ ಮದುವೆಯಾಗಿದ್ದನು. ಮೊದಲನೇ ಹೆಂಡತಿಯ ಮನೆಗೆ ಹೋಗುತ್ತೀಯಾ ಎಂಬ ವಿಚಾರಕ್ಕೆ ದಂಪತಿ ಮಧ್ಯೆ ಪದೇಪದೆ ಜಗಳವಾಗುತ್ತಿತ್ತು. ಪ್ರಿಯಾ ಸಾವಿನ ಎರಡು ದಿನಗಳ ಹಿಂದೆ ಕೂಡ ದಂಪತಿಯ ಮಧ್ಯೆ ಜಗಳವಾಗಿತ್ತು.

ಜಗಳದ ಸಮಯದಲ್ಲಿ ಶರತ್ ತನ್ನ ಎರಡನೇ ಪತ್ನಿ ಪ್ರೀಯಾಳಿಗೆ ಥಳಿಸಿದ್ದನು. ಗಲಾಟೆ ವೇಳೆ ಪ್ರೀಯಾ ಕೆಳಗೆ ಬಿದ್ದು, ಅಲ್ಲೇ ಸಾವನ್ನಪ್ಪಿದ್ದಳು. ಪತ್ನಿ ಸಾವನ್ನಪ್ಪಿರುವುದನ್ನು ಕಂಡು ಭಯಬೀತನಾದ ಶರತ್ ಈ ಕೊಲೆಯನ್ನು ಮರೆಮಾಚಲು ಅವಳು ಮಾತನಾಡುತ್ತಿಲ್ಲ ಎಂದು ಗೋಳಾಡುತ್ತ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದನು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ನಿರೂದ್ಯೋಗವನ್ನು ಬಂಡವಾಳ ಮಾಡಿಕೊಂಡ ಆರೋಪಿಯ ಬಂಧನ

ಗಂಡ ಶರತ್‌ನ ಗೋಳಾಟ ನೋಡಲಾಗದೆ ವೈದ್ಯರು ಪ್ರೀಯಾಳಿಗೆ ಚಿಕಿತ್ಸೆ ನೀಡಲು ಕರೆದುಕೊಂಡು ಹೋಗಿದ್ದಾರೆ. ಚಿಕಿತ್ಸೆ ನೀಡುವ ವೇಳೆ ಪ್ರೀಯಾ ಮೃತಳಾಗಿರುವುದು ಬೆಳಕಿಗೆ ಬಂದಿದೆ. ಬಳಿಕ ಪೊಲೀಸರು ಇದು ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುವ ವೇಳೆ ಮೃತಳ ಗಂಡನ ಅಸಲಿ ಕಥೆ ಬೆಳಕಿಗೆ ಬಂದಿದೆ. ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಶರತ್​ನನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ತನಿಖೆ ವೇಳೆ ನಡೆದ ಘಟನೆ ಬಗ್ಗೆ ಬಾಯಿ ಬಿಟ್ಟಿದ್ದಾನೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನರಲ್ಲಿ ಡೆಂಘೀ ಜಾಗೃತಿ: ರಾಜಧಾನಿಯಲ್ಲಿ ಸ್ವತಃ ಫೀಲ್ಡಿಗಿಳಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಡೆಂಘೀ ರೋಗ ಹೆಚ್ಚಳವಾಗುತ್ತಿದೆ. ಎಲ್ಲ ಜಿಲ್ಲೆಗಳಲ್ಲಿ ಈ ಬಗ್ಗೆ ಜನರಲ್ಲಿ...

ಬೀದರ್-ಬೆಂಗಳೂರು ವಿಮಾನ ಸೇವೆ: 2 ವಾರದಲ್ಲಿ ವರದಿ ಸಲ್ಲಿಸಲು ಸಚಿವ ಎಂ.ಬಿ.ಪಾಟೀಲ್ ಸೂಚನೆ

ಬೀದರ್–ಬೆಂಗಳೂರು ನಡುವೆ ನಾಗರಿಕ ವಿಮಾನಯಾನ ಸೇವೆ ಪುನ: ಆರಂಭಿಸುವ ಕುರಿತಂತೆ ವಿವಿಧ...

ಜು. 19: ಬ್ಯಾರಿ ಅಕಾಡೆಮಿ ಅಧ್ಯಕ್ಷ-ಸದಸ್ಯರ ಪದಗ್ರಹಣ; ‘ಪಿರ್ಸಪ್ಪಾಡ್‌’ ಬ್ಯಾರಿ ಸಾಂಸ್ಕೃತಿಕ ಸಂಭ್ರಮ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ವತಿಯಿಂದ ಪಿರ್ಸಪ್ಪಾಡ್‌ (ಬ್ಯಾರಿ ಸಾಂಸ್ಕೃತಿಕ ಸಂಭ್ರಮ)...

ಬೆಂಗಳೂರು | ‘ಸಂವಾದ’ದಿಂದ ವೃಷಭಾವತಿ ನದಿ ಉಳಿಸಿ ಆಂದೋಲನ

ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಹೆಚ್ಚಾಗುತ್ತಿದೆ. ಜೊತೆಗೆ ನೀರಿನ ಮೂಲ ನದಿ, ಕೆರೆಗಳನ್ನು...