ಬೆಂಗಳೂರು | ಮನೆ ಮುಂದೆ ನಿಲ್ಲಿಸಿದ್ದ ಕಾರು, ಬೈಕ್​ ಧ್ವಂಸಗೊಳಿಸಿದ ಆರು ಕಿಡಿಗೇಡಿಗಳ ಬಂಧನ

Date:

ರಸ್ತೆ ಬದಿ ಪಾರ್ಕ್‌ ಮಾಡಿದ್ದ ಕಾರು ಮತ್ತು ಬೈಕ್‌ಗಳನ್ನು ಧ್ವಂಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಂಗಳೂರಿನ ರಾಜಗೋಪಾಲನಗರ ಠಾಣಾ ಪೊಲೀಸರು ಆರು ಆರೋಪಿಗಳನ್ನು ಬಂಧಿಸಿದ್ದಾರೆ.

- Advertisement -

ಬಂಧಿತ ವ್ಯಕ್ತಿಗಳು ಏರಿಯಾದಲ್ಲಿ ಹವಾ ಇಡಲು, ಕಂಠಪೂರ್ತಿ ಕುಡಿದು ಬೈಕ್​ಗಳಲ್ಲಿ ಬಂದು ಮನಬಂದಂತೆ ರಾಡ್ ಮತ್ತು ಲಾಂಗ್​ಗಳಿಂದ 15 ಕಾರು ಹಾಗೂ ಬೈಕ್​ಗಳ ಗ್ಲಾಸ್ ಪುಡಿ ಪುಡಿ ಮಾಡಿ ಪರಾರಿಯಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಏನಿದು ಘಟನೆ?

ಬೆಂಗಳೂರಿನ ಲಗ್ಗೆರೆಯಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ 15 ಕಾರು ಮತ್ತು ಬೈಕ್‌ಗಳನ್ನು ದೊಣ್ಣೆ, ಲಾಂಗುಗಳಿಂದ ಕಾರಿನ ಗಾಜು ಪುಡಿ ಪುಡಿ ಮಾಡಿ ಹಾನಿ ಮಾಡಿದ್ದರು.

ಮುಖಕ್ಕೆ ಗೂಬೆ ಮುಖದ ಮಾಸ್ಕ್ ಧರಿಸಿದ್ದ ಪುಂಡರ ಗುಂಪು ಈ ಕೃತ್ಯ ಎಸಗಿತ್ತು. ಲಗ್ಗೆರೆಯ ರಾಜೀವ್ ಗಾಂಧಿನಗರದಲ್ಲಿ ನವೆಂಬರ್ 10 ರಂದು (ಶುಕ್ರವಾರ) ಬೆಳಗಿನ ಜಾವ 3 ಗಂಟೆಗೆ ಈ ಘಟನೆ ನಡೆದಿದೆ. ಪುಂಡರ ಅಟ್ಟಹಾಸಕ್ಕೆ 15 ಕಾರು, ಬೈಕ್, ಆಟೋರಿಕ್ಷಾ ಸೇರಿ 17 ವಾಹನಗಳು ಜಖಂಗೊಂಡಿದ್ದವು.

ಪುಂಡರ ಗುಂಪೊಂದು ಮಾರಕಾಸ್ತ್ರ ಹಿಡಿದು ರಾಜೀವ್ ಗಾಂಧಿ ನಗರಕ್ಕೆ ಬಂದಿದ್ದು, ಈ ವೇಳೆ ರಸ್ತೆಗೆ ಹೊಂದಿಕೊಂಡಂತೆ ಮನೆಗಳ ಬಳಿ ನಿಲುಗಡೆ ಮಾಡಿದ್ದ ಕಾರುಗಳು ಹಾಗೂ ಆಟೋ ರಿಕ್ಷಾಗಳ ಮೇಲೆ ಮಾರಕಾಸ್ತ್ರಗಳಿಂದ ಹೊಡೆದಿದ್ದಾರೆ. ಅದರಿಂದ ವಾಹನಗಳ ಗಾಜುಗಳು ಪುಡಿಯಾಗಿ ವಾಹನಗಳಿಗೆ ಹಾನಿಯಾಗಿದೆ.

ಈ ಸುದ್ದಿ ಓದಿದ್ದೀರಾ? ‘ವಿದ್ಯುತ್ ಕಳ್ಳ ಕುಮಾರಸ್ವಾಮಿ’ ಪೋಸ್ಟರ್‌ ಪ್ರಕರಣ: ಮೂವರ ವಿರುದ್ಧ ಎಫ್‌ಐಆರ್ ದಾಖಲು

ಘಟನಾ ಸ್ಥಳದ ಸುತ್ತಮುತ್ತಲ ಕಟ್ಟಡಗಳ ಸಿಸಿ ಕ್ಯಾಮೆರಾ ದೃಶ್ಯಾವಳಿ ಪರಿಶೀಲಿಸಲಾಗಿದೆ. ದುಷ್ಕರ್ಮಿಗಳು ಮುಖಕ್ಕೆ ಗೂಬೆ ಮುಖದ ಮಾಸ್ಕ್ ಧರಿಸಿಕೊಂಡು ಈ ಕೃತ್ಯ ಎಸಗಿದ್ದಾರೆ.

ಸ್ಥಳಕ್ಕೆ ಶಾಸಕ ಮುನಿರತ್ನ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದರು. ಸ್ಥಳಕ್ಕೆ ರಾಜಗೋಪಾಲನಗರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದರು. ಘಟನೆ ಸಂಬಂಧ ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...