ಬೆಂಗಳೂರು | 38 ವರ್ಷದ ಹಿಂದೆ ಸೈಕಲ್ ಕಳ್ಳತನ ಮಾಡಿದ್ದ ಆರೋಪಿಯ ಬಂಧನ

Date:

38 ವರ್ಷದ ಹಿಂದೆ ಕಳ್ಳತನ ಮಾಡಿದ್ದ ಆರೋಪಿಯನ್ನು ಕೊನೆಗೂ ಬೆಂಗಳೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿ ಪಾಷಾ ಜಾನ್ ಎಂಬುವವರು ತಾವು 22 ವರ್ಷ ವಯಸ್ಸಿನಲ್ಲಿದ್ದಾಗ, ಅಂದರೆ 1985ರಲ್ಲಿ, ಸೈಕಲ್ ಕಳ್ಳತನ ಮಾಡಿದ್ದರು. ಈ ಕಳ್ಳತನ ನಡೆದ ಒಂದೇ ತಿಂಗಳಿಗೆ ಕೆಜಿಎಫ್‌ ಪೊಲೀಸರು ಬಂಧಿಸಿದ್ದರು.

ಪೊಲೀಸ್‌ ಬಂಧನದ ಬಳಿಕ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ, ಆರೋಪಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಬಳಿಕ ಪಾಷಾ ಜಾನ್ ನಾಪತ್ತೆಯಾಗಿದ್ದರು. ಅವರ ಹೆಸರಿನಲ್ಲಿ ಸುಮಾರು 200 ವಾರಂಟ್‌ ಹೊರಡಿಸಲಾಗಿತ್ತು ಎಂದು ವಕೀಲರೊಬ್ಬರು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಆರೋಪಿ ಪಾಷಾ ಜಾನ್ ಅವರು ಕೆಜಿಎಫ್‌ನಿಂದ ಬೆಂಗಳೂರಿಗೆ ಬಂದು ಇಲ್ಲಿಯೇ ನೆಲೆಸಿದ್ದರು. ನಗರದಲ್ಲಿ ಆಟೋ ರಿಕ್ಷಾ ಓಡಿಸಿ ಜೀವನ ನಡೆಸುತ್ತಿದ್ದರು. ಇದೀಗ ಇವರಿಗೆ 60 ವರ್ಷ ತುಂಬಿದೆ.

ಪಾಷಾ ಅವರು ಕೆಜಿಎಫ್‌ನಿಂದ ಬೆಂಗಳೂರಿಗೆ ಬಂದು ನೆಲೆಸಿದ್ದ ಕಾರಣದಿಂದ ಪೊಲೀಸರು ಅವರನ್ನು ಬಂಧಿಸಲು ಸಾಧ್ಯವಾಗಿರಲಿಲ್ಲ.

ಈ ಸುದ್ದಿ ಓದಿದ್ದೀರಾ? ಗೋಲ್ ಗುಂಬಜ್ ಎಕ್ಸ್‌ಪ್ರೆಸ್‌ ರೈಲು ಸೇವೆ ಪಂಢರಪುರದವರೆಗೆ ವಿಸ್ತರಣೆ

ಆರೋಪಿ ಪತ್ತೆಗಾಗಿ ಮೂವರು ಪೊಲೀಸರ ತಂಡ ಕಾರ್ಯಾಚರಣೆ ನಡೆಸಿದ್ದು, ಆರೋಪಿಯ ಸಂಬಂಧಿಕರೊಬ್ಬರು ಆರೋಪಿ ಕೆ.ಆರ್‌.ಪುರಂನಲ್ಲಿ ನೆಲೆಸಿರುವುದಾಗಿ ಮಾಹಿತಿ ನೀಡಿದ್ದಾರೆ. ಆರೋಪಿ ಮನೆಗೆ ತೆರಳಿ ಪೊಲೀಸರು ಆತನನ್ನು ಹಿಡಿದಿದ್ದಾರೆ.

ಈ ವೇಳೆ ಆರೋಪಿಯು, ‘ನಾನು ಕಳ್ಳತನ ಮಾಡಿಲ್ಲ, ತಪ್ಪಾಗಿ ತಿಳಿದುಕೊಳ್ಳಲಾಗಿದೆ’ ಎಂದು ಪೊಲೀಸರಿಗೆ ಹೇಳಿದಾಗ, ಪೊಲೀಸ್ ತಂಡ ಜಾನ್‌ ಅವರ ಬೆರಳಚ್ಚು ಸಂಗ್ರಹಿಸಿ ಆತನೇ ಆರೋಪಿ ಎಂದು ಖಚಿತಪಡಿಸಿಕೊಂಡು ನಂತರ ಆತನನ್ನು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಲಸೆ ಕಾರ್ಮಿಕರ ಮಕ್ಕಳ ಮಾರ್ಗದರ್ಶಿಯಾಗಿದ್ದ ಬೆಂಗಳೂರು ಎಸ್ಐ ಈಗ ಐಎಎಸ್ ಅಧಿಕಾರಿ

ತಮ್ಮ ಸರ್ಕಾರಿ ವೃತ್ತಿಯ ಜೊತೆ ವಲಸೆ ಕಾರ್ಮಿಕರ ಮಕ್ಕಳ ಮಾರ್ಗದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ...

ಬೆಂಗಳೂರು | ಡಾ. ಸುನಿಲ್ ಕುಮಾರ್ ಹೆಬ್ಬಿ ಮೇಲೆ ಮಾರಣಾಂತಿಕ ಹಲ್ಲೆ; ಪೊಲೀಸ್ ರಕ್ಷಣೆಗೆ ಆಗ್ರಹ

ಯಲಹಂಕದ ಕೇಂದ್ರೀಯ ವಿಹಾರ ಬಹು ಮಹಡಿ ಕಟ್ಟಡಗಳ ಸಂಕೀರ್ಣದಲ್ಲಿ ವಾಸ ಮಾಡುತ್ತಿರುವ...

ಕುಮಾರಸ್ವಾಮಿ ವಿರುದ್ಧ ಪ್ರಕರಣ ದಾಖಲಿಸಿ: ಚುನಾವಣಾ ಆಯೋಗಕ್ಕೆ ಡಿ.ಕೆ. ಸುರೇಶ್ ಆಗ್ರಹ

"ಕುಮಾರಸ್ವಾಮಿ ಅವರ ಹೇಳಿಕೆ ಮಹಿಳಾ ಕುಲಕ್ಕೆ ಮಾಡಿದ ಅಪಮಾನವಾಗಿದ್ದು ಕುಮಾರಸ್ವಾಮಿ ವಿರುದ್ಧ...

ಬೆಂಗಳೂರಿನಲ್ಲಿ ನೀರು ಸೋರಿಕೆ ಪತ್ತೆ ಹಚ್ಚಲಿವೆ ರೊಬೋಟ್‌ಗಳು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸದ್ಯ ನೀರಿನ ಸಮಸ್ಯೆ ತಲೆದೂರಿದೆ. ಈ ಹಿನ್ನೆಲೆ,...