ಬೆಂಗಳೂರು | ಹೆಚ್ಚು ಕೆಲಸ ಮಾಡು ಎಂದ ಸಹೋದ್ಯೋಗಿ ಕೊಲೆಗೈದ ಆರೋಪಿ ಬಂಧನ

Date:

‘ನಿನಗೆ ಕೆಲಸದ ಅನುಭವವಿದೆ ಹಾಗಾಗಿ, ಹೆಚ್ಚು ಕೆಲಸ ಮಾಡು’ ಎಂದು ಹೇಳಿದ ಸಹೋದ್ಯೋಗಿಯ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಸದ್ಯ ಆರೋಪಿಯನ್ನು ಬೇಗೋರು ಪೊಲೀಸರು ಬಂಧಿಸಿದ್ದಾರೆ.

- Advertisement -

ಗುಲ್ಫಾಮ್ ಮೃತ ವ್ಯಕ್ತಿ. ಈತನು ಮೂಲತಃ ಉತ್ತರ ಪ್ರದೇಶದ ಬರೇಲಿಯ ಮುರ್ಷಿದಾಬಾದ್‌ ಗ್ರಾಮದವನು. ದಿಲ್ಖುಷ್ ಬಂಧಿತ ಆರೋಪಿ. ಈತನು ಕಳೆದ ಮೂರು ತಿಂಗಳ ಹಿಂದೆ ಬೆಂಗಳೂರಿಗೆ ಬಂದು ನೆಲೆಸಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು...

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ ಮತ ಬಾಚುವ ಕಣ್ಣು ಮುಚ್ಚಿ ತನ್ಮ ಕರ್ತವ್ಯದ ಕಣ್ಣು ತೆರೆದು ನೋಡುವುದು ಅಗತ್ಯ. ಬೈಗಾ ಸಮುದಾಯದಂತಹ ಅಪರೂಪದ ಬುಡಕಟ್ಟು ಸಂತತಿಯನ್ನು...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಬಂಧಿತ ಆರೋಪಿ ಫ್ಯಾಬ್ರಿಕೇಟರ್‌ ಆಗಿ ದೇವರಚಿಕ್ಕನಹಳ್ಳಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದನು. ಮೃತ ವ್ಯಕ್ತಿಯೂ ಅಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದನು.

ನಿನಗೆ ಕೆಲಸದ ಅನುಭವವಿದೆ ಹಾಗಾಗಿ, ನೀನು ಹೆಚ್ಚು ಕೆಲಸ ಮಾಡು ಎಂದು ಮೃತ ಗುಲ್ಫಾಮ್, ದಿಲ್ಖುಷ್ ಮೇಲೆ ಒತ್ತಡ ಹೇರುತ್ತಿದ್ದನು. ಈ ವಿಚಾರವಾಗಿ ಇಬ್ಬರ ಮಧ್ಯೆ ಆಗಾಗ ಜಗಳವಾಗುತ್ತಿತ್ತು ಎಂದು ತಿಳಿದುಬಂದಿದೆ. ಒಂದು ದಿನ ಗುಲ್ಫಾಮ್ ಮಲಗಿದ್ದಾಗ ಆತನ ಮೇಲೆ ದಿಲ್ಖುಷ್ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಪರಾರಿಯಾಗಿದ್ದನು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಗೀಸರ್‌ ಗ್ಯಾಸ್‌ ಸೋರಿಕೆಯಿಂದ ಯುವತಿ ಸಾವು

ಘಟನಾ ಸ್ಥಳಕ್ಕೆ ಆಗಮಿಸಿ ಬೇಗೋರು ಪೊಲೀಸರು ಪರಿಶೀಲನೆ ನಡೆಸಿ, ತನಿಖೆ ಮುಂದುವರೆಸಿದ್ದರು. ಈ ವೇಳೆ, ಘಟನೆ ನಡೆದ ಬಳಿಕ ಗುಲ್ಫಾಮ್ ಜತೆಗೆ ಮಲಗುತ್ತಿದ್ದ ವ್ಯಕ್ತಿ ದಿಲ್ಖುಷ್ ವಾರಾಣಾಸಾಗಿ ತೆರಳಿದ್ದನು. ಇದರಿಂದ ಅನುಮಾನಗೊಂಡ ಪೊಲೀಸರು ವಾರಣಾಸಿಗೆ ತೆರಳಿ ದಿಲ್ಖುಷ್​ನನ್ನು ಅವನ ನಿವಾಸದಲ್ಲಿ ಬಂಧಿಸಿದ್ದಾರೆ. ಆತನ ಕೂಡ ಪೊಲೀಸರ ಮುಂದೆ ತಪ್ಪು ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

ಬೇಗೂರು ಪೊಲೀಸ್‌ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರವಾರ | ನಾಗರಮಡಿ ಫಾಲ್ಸ್‌ನಲ್ಲಿ ಪ್ರವಾಸಿಗರು–ಸ್ಥಳೀಯರ ನಡುವೆ ಗಲಾಟೆ; ದೂರು ಪ್ರತಿದೂರು ದಾಖಲು

ಕಾರವಾರ: ತಾಲೂಕಿನ ಚೆಂಡಿಯಾ ಸಮೀಪದ ನಾಗರಮಡಿ ಫಾಲ್ಸ್‌ನಲ್ಲಿ ಬಾಟಲಿ ಎಸೆದ ವಿಚಾರಕ್ಕೆ...

ಬಳ್ಳಾರಿ | ಮತದಾರರ ಹೆಸರು ತೆಗೆದುಹಾಕಲು ಸಂಚು: ಕಾರ್ಪೊರೇಟರ್, ಪಾಲಿಕೆ ಅಧಿಕಾರಿಗಳ ವಿರುದ್ಧ FIR

ಬಳ್ಳಾರಿ ನಗರ ಕ್ಷೇತ್ರದ ಮತದಾರರ ಪಟ್ಟಿಯಿಂದ ಮತದಾರರ ಹೆಸರುಗಳನ್ನು ತೆಗೆದು ಹಾಕಲು...

ಕಲಬುರಗಿ | ಗಾಂಧೀಜಿ ಆದರ್ಶಗಳು ಯುವಕರಿಗೆ ದಾರಿದೀಪ: ಪವನಕುಮಾರ ವಳಕೇರಿ

ಬ್ರಿಟಿಷರ ವಿರುದ್ಧ ಶಾಂತಿ, ಅಹಿಂಸೆ ಹಾಗೂ ತಾಳ್ಮೆಯ ಮಾರ್ಗದಲ್ಲಿ ಹೋರಾಡಿ ದೇಶಕ್ಕೆ...

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...