- ಸಿಸಿಬಿ ದಾಳಿ ವೇಳೆ 54 ಜನ ಗ್ರಾಹಕರು ವಶಕ್ಕೆ, 19 ಯುವತಿಯರ ರಕ್ಷಣೆ
- ಕರ್ತವ್ಯಲೋಪ ಕಂಡುಬಂದಿದ್ದರಿಂದ ಇನ್ಸ್‌ಪೆಕ್ಟರ್ ಅಮಾನತು
ಕಳೆದ ಹಲವು ದಿನಗಳಿಂದ ಅಶೋಕ್‌ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿದ್ದರೂ ಕರ್ತವ್ಯ ನಿರ್ವಹಿಸದೆ ನಿರ್ಲಕ್ಷ್ಯ ವಹಿಸಿದ ಆರೋಪದಡಿ ಠಾಣೆಯ ಇನ್ಸ್‌ಪೆಕ್ಟರ್ ಶ್ರೀಕಾಂತ್ ಎಫ್ ತೋಟಗಿ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಆದೇಶ ಹೊರಡಿಸಿದ್ದಾರೆ.
ಹಲವು ದಿನಗಳಿಂದ ಅಕ್ರಮ ಚಟುವಟಿಕೆ ನಡೆಯುತ್ತಿದ್ದರೂ ಇನ್ಸ್‌ಪೆಕ್ಟರ್ ಶ್ರೀಕಾಂತ್ ಕ್ರಮಕೈಗೊಳ್ಳದ ಬಗ್ಗೆ ಸಿಸಿಬಿ ವರದಿ ನೀಡಿತ್ತು. ವರದಿ ಆಧರಿಸಿ ತನಿಖೆ ನಡೆಸಿ ಕೇಂದ್ರ ವಿಭಾಗ ಡಿಸಿಪಿ ಶ್ರೀನಿವಾಸ್ ಗೌಡ ಅವರು ಇನ್ಸ್‌ಪೆಕ್ಟರ್ ವಿರುದ್ಧ ಕಮಿಷನರ್‌ಗೆ ವರದಿ ನೀಡಿದ್ದರು.
ನಗರದ ನಾನಾ ಸ್ಥಳಗಳಲ್ಲಿ ಖಾಸಗಿ ಹೋಟೆಲ್‌ಗಳು, ಬಾರ್‌ಗಳು, ಪಬ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಅಶೋಕ್ ನಗರ ಠಾಣಾ ವ್ಯಾಪ್ತಿಯ ‘ದಿ ಪ್ರೈಡ್’ ಹೋಟೆಲ್ ಮೇಲೆ ಸಿಸಿಬಿ ತಂಡ ಇತ್ತೀಚೆಗೆ ದಾಳಿ ಮಾಡಿತ್ತು.
ದಾಳಿ ವೇಳೆ, ರಾತ್ರಿ ಅವಧಿ ಮೀರಿ ಪಾರ್ಟಿ ಮಾಡುತ್ತಿದ್ದರು, ಆದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಹೋಟೆಲ್‌ನಲ್ಲಿ ಯುವತಿಯರನ್ನು ಕರೆತಂದು ಅಕ್ರಮ ಚಟುವಟಿಕೆ ನಡೆಸುತ್ತಿದ್ದ ಬಗ್ಗೆ ಆರೋಪಗಳು ಕೇಳಿಬಂದಿದ್ದವು. ಹೊರ ರಾಜ್ಯದ ಯುವತಿಯರಿಂದ ಗ್ರಾಹಕರಿಗೆ ಲೈಂಗಿಕ ಪ್ರಚೋದನೆ ನೀಡುತ್ತಿದ್ದ ಆರೋಪದಡಿ ಮೂವರನ್ನು ಬಂಧಿಸಿದ್ದರು. ಸಿಸಿಬಿ ದಾಳಿಯ ವೇಳೆ 54 ಜನ ಗ್ರಾಹಕರನ್ನು ವಶಕ್ಕೆ ಪಡೆದು 19 ಯುವತಿಯರನ್ನು ರಕ್ಷಿಸಲಾಗಿತ್ತು.
ಈ ಸುದ್ದಿ ಓದಿದ್ದೀರಾ? ನಾಡಪ್ರಭು ಕೆಂಪೇಗೌಡರ 514ನೇ ಜಯಂತಿ ಆಚರಣೆ ; ಗಣ್ಯರಿಂದ ಶುಭಾಶಯ
ವರದಿ ಪರಿಶೀಲಿಸಿ ಕರ್ತವ್ಯಲೋಪ ಕಂಡುಬಂದಿದ್ದರಿಂದ ಇನ್ಸ್‌ಪೆಕ್ಟರ್ ಶ್ರೀಕಾಂತ್ ತೋಟಗಿರನ್ನ ಅಮಾನತು ಮಾಡಿ ಪೊಲೀಸ್ ಕಮಿಷನರ್ ದಯಾನಂದ್ ಅವರು ಆದೇಶ ಹೊರಡಿಸಿದ್ದಾರೆ.