ಬೆಂಗಳೂರು | ಕರ್ತವ್ಯ ನಿರತ ಸಂಚಾರ ಪೊಲೀಸ್‌ ಮೇಲೆ ಹಲ್ಲೆ: ಬಂಧನ

Date:

ರೋಡ್‌ನಿಂದ ಪಕ್ಕಕ್ಕೆ ಹೋಗು ಎಂದ ಬೆಂಗಳೂರು ಸಂಚಾರ ಪೊಲೀಸ್‌ ಕಾನ್‌ಸ್ಟೆಬಲ್ ಗೆ ವ್ಯಕ್ತಿಯೊಬ್ಬ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ಹಲ್ಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ರಾಜು ಬಂಧಿತ ಆರೋಪಿ. ನಗರದ ಕೆ.ಎಸ್.ಲೇಔಟ್ ಸಂಚಾರ ಠಾಣೆ ಕಾನ್‌ಸ್ಟೆಬಲ್ ಕರಿಬಸವಯ್ಯ ಅವರು ಉತ್ತರಹಳ್ಳಿ ಬಳಿಯ ಹರೇಹಳ್ಳಿ ಸಮೀಪ ಡಿಸೆಂಬರ್ 23ರಂದು ಎಂದಿನಂತೆ ಟ್ರಾಫಿಕ್ ನಿರ್ವಹಣೆ ಕೆಲಸ ಮಾಡುತ್ತಿದ್ದರು. ಈ ವೇಳೆ, ಬಂಧಿತ ಆರೋಪಿ ರಾಜುಗೆ ಕಾನ್‌ಸ್ಟೆಬಲ್ ರೋಡ್‌ನಿಂದ ಪಕ್ಕಕ್ಕೆ ತೆರಳುವಂತೆ ಹೇಳಿದ್ದರು.

ಇದಕ್ಕೆ ಕೋಪಗೊಂಡ ರಾಜು ಕಾನ್‌ಸ್ಟೆಬಲ್ ಕರಿಬಸಯ್ಯ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾನೆ. ಬಳಿಕ ರಾಜು ಕಾನ್‌ಸ್ಟೆಬಲ್ ಕರಿಬಸಯ್ಯ ಅವರಿಗೆ ಹಲ್ಲೆ ಮಾಡಿದ್ದಾರೆ. ಈ ವೇಳೆ, ಇಬ್ಬರು ಕೈ ಕೈ ಮಿಲಾಯಿಸಿದ್ದಾರೆ. ಬಳಿಕ, ಆರೋಪಿ ಪರಾರಿಯಾಗುವುದನ್ನು ಗಮನಿಸಿದ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹಳೆ ವೈಷಮ್ಯ: ಸಚಿವರ ಮನೆ ಸಮೀಪ ರೌಡಿಶೀಟರ್​ ಬರ್ಬರ ಹತ್ಯೆ

ಸದ್ಯ ಆರೋಪಿ ವಿರುದ್ಧ ಸುಬ್ರಮಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಮೋದಿ ದುರಾಡಳಿತ ಕೊನೆಗಾಣಿಸಬೇಕು: ಅಪ್ಪಾಸಾಹೇಬ ಯರನಾಳ

ಮೋದಿ ಹಿಟ್ಲರ್ ಶಾಹಿ ಆಡಳಿತ ಕೊನೆಗೊಳ್ಳುವ ಸಮಯ ಬಂದಿದೆ, ಮೋದಿ ಈ...

ತುಮಕೂರು | ಸ್ಟ್ರಾಂಗ್ ರೂಮ್ ಪರಿಶೀಲಿಸಿದ ಜಿಲ್ಲಾಧಿಕಾರಿ

ತುಮಕೂರು ಲೋಕಸಭಾ ಕ್ಷೇತ್ರದ ಚುನಾವಣೆ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಕ್ಷೇತ್ರ ವ್ಯಾಪ್ತಿಗೆ ಒಳಪಡುವ...

ಚಿಕ್ಕಬಳ್ಳಾಪುರ | ಅನುಚಿತ ಪ್ರಭಾವ, ಲಂಚ, ಭ್ರಷ್ಟಾಚಾರ ಪ್ರಕರಣದಡಿ ಕೆ.ಸುಧಾಕರ್ ವಿರುದ್ಧ ಎಫ್‌ಐಆರ್

ಚುನಾವಣೆಯಲ್ಲಿ ಮತದಾರರಿಗೆ ಲಂಚ ನೀಡಲು ಮನೆಯೊಂದರಲ್ಲಿ ಅಕ್ರಮವಾಗಿ ಹಣ ದಾಸ್ತಾನು ಮಾಡಿದ್ದ...

ದ್ವಿತೀಯ ಪಿಯುಸಿ ಪರೀಕ್ಷೆ-2 ಏಪ್ರಿಲ್ 29 ರಿಂದ ಆರಂಭ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಕಳೆದ ತಿಂಗಳಷ್ಟೇ ಪಿಯುಸಿ...