ಬೆಂಗಳೂರು | ಕರ್ತವ್ಯನಿರತ ಸಂಚಾರ ಪೊಲೀಸ್​ ಸಿಬ್ಬಂದಿ ಮೇಲೆ ಹಲ್ಲೆ; ಬಂಧನ

Date:

ಬೆಂಗಳೂರಿನ ಬಾಣಸವಾಡಿ ಸಂಚಾರ ಠಾಣೆಯ ಪೇದೆಯೊಬ್ಬರು ನೋ ಪಾರ್ಕಿಂಗ್‌ನಲ್ಲಿ ಕಾರು ನಿಲ್ಲಿಸಿದಕ್ಕೆ ಕ್ಲಾಂಪ್ ಹಾಕಿದ್ದರು. ಇದಕ್ಕೆ ಕೋಪಗೊಂಡ ಕಾರು ಮಾಲೀಕ ಕರ್ತವ್ಯನಿರತ ಪೊಲೀಸ್‌ ಸಿಬ್ಬಂದಿ ಮೇಲೆ ನಡುರಸ್ತೆಯಲ್ಲೇ ಹಲ್ಲೆ ಮಾಡಿದ್ದ. ಇದೀಗ ಕೃತ್ಯವೆಸಗಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿ, ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ.

ಉಮೇಶ್ ಹಲ್ಲೆಗೊಳಗಾದ ಬಾಣಸವಾಡಿ ಸಂಚಾರ ಠಾಣೆಯ ಪೇದೆ. ಈ ಬಗ್ಗೆ ಗುರುವಾರ ಬಾಣಸವಾಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಸುಲೇಮಾನ್​ ಬಂಧಿತ ಆರೋಪಿ.

ಏನಿದು ಘಟನೆ?

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಜು.11 ರಂದು ಸಂಜೆ 6 ಗಂಟೆ ಸುಮಾರಿಗೆ ಕರ್ತವ್ಯದಲ್ಲಿದ್ದ ಬಾಣಸವಾಡಿ ಸಂಚಾರ ಪೊಲೀಸ್‌ ಉಮೇಶ್ ನೋ ಪಾರ್ಕಿಂಗ್‌ ಸ್ಥಳದಲ್ಲಿ ಕಾರು ನಿಲ್ಲಿಸಿದ್ದ ಹಿನ್ನಲೆ ಕ್ಲಾಂಪ್ ಹಾಕಿದ್ದರು. ಈ ಕಾರಣಕ್ಕೆ ನಡುರಸ್ತೆಯಲ್ಲಿಯೇ ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಮೇಲೆ ಕಾರು ಮಾಲೀಕ ಹಲ್ಲೆ ಮಾಡಿದ್ದ.

“ಬಾಣಸವಾಡಿ ಸಂಚಾರ ಠಾಣೆಯ ಕಾನ್‌ಸ್ಟೆಬಲ್ ಕರ್ತವ್ಯ ನಿರ್ವಹಿಸುತ್ತಿದ್ದಾಗ ಹಲ್ಲೆ ನಡೆಸಲಾಗಿದೆ. ಬಾಣಸವಾಡಿ ಪೊಲೀಸ್‌ ಠಾಣೆಯಲ್ಲಿ ಅಪರಾಧ ಪ್ರಕರಣ ದಾಖಲಾಗಿದೆ. ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ಹೆಚ್ಚಿನ ತನಿಖೆ ಮುಂದುವರೆದಿದೆ” ಎಂದು ಬೆಂಗಳೂರು ಜಂಟಿ ಪೊಲೀಸ್​ ಆಯುಕ್ತ ಎಂ ಎನ್​ ಅನುಚೇತ್​ ಅವರು ಟ್ಟೀಟ್​ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ಆರಂಭ: ಉತ್ಸಾಹದಿಂದ ಮತ ಚಲಾಯಿಸುತ್ತಿರುವ ಮತದಾರರು

ರಾಜ್ಯದ 14 ಕ್ಷೇತ್ರಗಳಲ್ಲಿ ಏ.26ರಂದು ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ....

ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ ಎಂದ ನಟಿ ಶೃತಿ: ಮಹಿಳಾ ಆಯೋಗದಿಂದ ನೋಟಿಸ್

“ಪ್ರೀ ಬಸ್ ಬಿಟ್ಟ ತಕ್ಷಣ ಹೆಣ್ಣುಮಕ್ಕಳು ತೀರ್ಥಯಾತ್ರೆ ಹೋಗ್ತೇವೆಂದು ಹೇಳಿ, ಎಲ್ಲಿಗೆ...

ಲೋಕಸಭಾ ಚುನಾವಣೆ | ಮತದಾನ ಮಾಡಲು ವಿಕಲಚೇತನರು, ಹಿರಿಯ ನಾಗರಿಕರಿಗೆ ಸೌಲಭ್ಯ

ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ...

ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿರುವ ಬಹುತೇಕ ನೌಕರರಿಗೆ ಸಿಗದ ಅಂಚೆ ಮತದಾನ

ಲೋಕಸಭಾ ಚುನಾವಣೆಯ ಕರ್ತವ್ಯಕ್ಕೆ ತೆರಳುವ ಬಹುತೇಕ ಸೇವಾ ಸಿಬ್ಬಂದಿಗಳು ಈ ಬಾರಿ...