ಬೆಂಗಳೂರು | ಕರಗ ಹೊತ್ತಿದ್ದ ಜ್ಞಾನೇಂದ್ರ ಕೊಲೆಗೆ ಯತ್ನ; ಆರೋಪಿ ಬಂಧನ

Date:

  • ಉತ್ಸವದ ವೇಳೆ ಖಾರದ ಪುಡಿ ಹಾಗೂ ರಾಸಾಯನಿಕ ದ್ರಾವಣ ಎರಚಿದ ಆರೋಪಿ
  • ಜೆಪಿ ನಗರ ನಿವಾಸಿ ಜಯನಗರದ ಆದಿನಾರಾಯಣ ಬಂಧಿತ ಆರೋಪಿ

ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಮಹೋತ್ಸವ ಅದ್ಧೂರಿಯಾಗಿ ನೆರವೇರಿದೆ. ಆದರೆ, ಕರಗವನ್ನು ಹೊತ್ತಿದ್ದ ಜ್ಞಾನೇಂದ್ರ ಅವರ ಕೊಲೆಗೆ ಯತ್ನ ನಡೆದಿದ್ದು, ಈ ಸಂಬಂಧ ಓರ್ವ ಆರೋಪಿಯನ್ನು ಹಲಸೂರು ಗೇಟ್‌ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಜೆಪಿ ನಗರ ನಿವಾಸಿ ಜಯನಗರದ ಆದಿನಾರಾಯಣ ಬಂಧಿತ ಆರೋಪಿ. ಈತನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಹಲವು ವರ್ಷಗಳಿಂದ ಕರಗ ಹೊರುವ ವಿಚಾರವಾಗಿ ಆದಿನಾರಾಯಣ ಹಾಗೂ ಜ್ಞಾನೇಂದ್ರ ಅವರ ನಡುವೆ ಮನಸ್ತಾಪವಿದೆ. ಈ ಸೇಡಿನಿಂದ ಆತ ಕೃತ್ಯ ಎಸಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.

ಏ. 6ರಂದು ನಡೆದ ಕರಗ ಉತ್ಸವದ ವೇಳೆ ಖಾರದ ಪುಡಿ ಹಾಗೂ ಬೆಳ್ಳಿ ವಸ್ತುಗಳಿಗೆ ಬಳಸಲಾಗುವ ಸೈನೆಡ್ ಪೆಟಲ್ಸ್ ಎಂಬ ರಾಸಾಯನಿಕ ದ್ರಾವಣವನ್ನು ಹೂವಿನಲ್ಲಿ ಬೆರೆಸಿ ಕರಗ ಹೊತ್ತಿದ್ದ ಜ್ಞಾನೇಂದ್ರ ಮೇಲೆ‌ ಆರೋಪಿ ಎರಚಿದ್ದನು. ಈ ಬಗ್ಗೆ ಕರಗ ಹೊತ್ತ ಅರ್ಚಕ ಜ್ಞಾನೇಂದ್ರ ಅವರು ಆರೋಪಿಸಿ ಹಲಸೂರು ಗೇಟ್‌ ಪೊಲೀಸ್‌ ಠಾಣೆಗೆ ಮಂಗಳವಾರ ದೂರು ನೀಡಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಬಿಜೆಪಿ ಶಾಸಕ ರಘು ಬೆಂಬಲಿಗರಿಂದ ಎಎಪಿ ಕಾರ್ಯಕರ್ತರ ಮೇಲೆ ಹಲ್ಲೆ; ದೂರು ದಾಖಲು

ಈ ದೂರಿನ ಮೇರೆಗೆ ಜಯನಗರದ ಆದಿನಾರಾಯಣ ವಿರುದ್ಧ ಕೊಲೆ ಯತ್ನ ಆರೋಪದಡಿ ಎಫ್‌ಐಆರ್‌ ದಾಖಲಾಗಿತ್ತು.

ಕರಗ ಉತ್ಸವದ ವೇಳೆ ಜ್ಞಾನೇಂದ್ರ ಮೇಲೆ ಆದಿನಾರಾಯಣ ಯಾವುದೋ ವಸ್ತು ಎಸೆಯುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದರಿಂದ ಜ್ಞಾನೇಂದ್ರ ಅವರ ಕುತ್ತಿಗೆ ಭಾಗ ಹಾಗೂ ದೇಹದ ನಾನಾ ಭಾಗಗಳಲ್ಲಿ ಸುಟ್ಟಗಾಯಗಳಾಗಿವೆ.

“ಕರಗ ಹೊರುವ ಪೂಜಾರಿ ಮೇಲೆ ರಾಸಾಯನಿಕ ಪದಾರ್ಥವನ್ನು ಎರಚಿದ್ದಾರೆ. ಕರಗ ಹೊರುವ ವಿಚಾರದಲ್ಲಿ ಅವರ ಮಧ್ಯೆ ವಿವಾದಗಳಿವೆ. ಆ ಕಾರಣಕ್ಕಾಗಿ ಈ ರೀತಿಯ ಘಟನೆ ನಡೆದಿದೆ. ಪ್ರಾಥಮಿಕ ತನಿಖೆ ವೇಳೆ ಈ ವಿಷಯ ತಿಳಿದುಬಂದಿದೆ. ದೂರು ದಾಖಲಾಗಿದೆ. ಘಟನೆ ಬಗ್ಗೆ ತನಿಖೆ ಕೈಗೊಳ್ಳಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ” ಎಂದು ಬೆಂಗಳೂರು ನಗರ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸಗೌಡ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು |ತಲಾ ₹1 ಲಕ್ಷ ದಂಡ ಬಾಕಿ ಉಳಿಸಿಕೊಂಡಿವೆ 123 ವಾಹನಗಳು

ಹಲವು ಬಾರಿ ಸಂಚಾರ ನಿಯಮ ಉಲ್ಲಂಘಿಸಿ, ಹೆಚ್ಚು ದಂಡಕ್ಕೆ ಗುರಿಯಾಗಿರುವ ವಾಹನಗಳನ್ನು...

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಡೀ ದಿನ ಕಳೆದೆ ಎಂದು ಸುಳ್ಳು ಹೇಳಿದ ಯೂಟ್ಯೂಬರ್‌ ಬಂಧನ

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರವೇಶಿಸಿ ವಿಡಿಯೋ ರೆಕಾರ್ಡ್ ಮಾಡಿ...

ಯಾವುದೇ ಆಮೀಷ, ಪ್ರೇರೇಪಣೆಗಳಿಗೆ ಒಳಗಾಗದೆ ಮತ ಚಲಾಯಿಸಿ: ತುಷಾರ್ ಗಿರಿನಾಥ್

ಪ್ರತಿಯೊಬ್ಬ ಯುವ ಮತದಾರರು ಚುಣಾವಣಾ ರಾಯಭಾರಿಗಳಾಗಿದ್ದು, ಯಾವುದೇ ಆಮೀಷ, ಪ್ರೇರೇಪಣೆಗಳಿಗೆ ಒಳಗಾಗದೆ...

ಬೆಂಗಳೂರು | ಕೈಬಿಟ್ಟ 1,412 ವಾಹನಗಳ ಪೈಕಿ 918 ವಾಹನಗಳ ವಿಲೇವಾರಿ

ರಾಜ್ಯ ರಾಜಧಾನಿ ಬೆಂಗಳೂರಿನ ಸಂಚಾರ ಪೊಲೀಸ್ ಠಾಣೆಗಳಲ್ಲಿ ರಚಿಸಲಾದ ವಿಶೇಷ ತಂಡಗಳು...