ಬೆಂಗಳೂರು | ₹12 ಕೋಟಿ ಮೌಲ್ಯದ ಕೊಕೇನ್ ಕಳ್ಳಸಾಗಣೆಗೆ ಯತ್ನ; ಮಹಿಳೆ ಬಂಧನ

Date:

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 1.02 ಕೆಜಿ ಹೈಗ್ರೇಡ್ ಕೊಕೇನ್ ಕಳ್ಳಸಾಗಣೆ ಮಾಡಲು ಯತ್ನಿಸಿದ ಕೀನ್ಯಾ ಮೂಲದ ಮಹಿಳೆಯನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಬಂಧಿಸಿದೆ.

- Advertisement -

ಆರೋಪಿ ಅಜೆಂಗ್ ಓ ಕ್ಯಾರೋಲಿನ್ ಅಗೋಲಾ ತನ್ನ ಖಾಸಗಿ ಭಾಗಗಳು ಮತ್ತು ಒಳ ಉಡುಪುಗಳಲ್ಲಿ ಕ್ಯಾಪ್ಸುಲ್‌ಗಳಲ್ಲಿ ನಿಷಿದ್ಧ ವಸ್ತುವನ್ನು ಬಚ್ಚಿಟ್ಟಿದ್ದಳು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋದಿಂದ ಆಕೆಯ ವಿರುದ್ಧ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟೆನ್ಸ್ (ಎನ್‌ಡಿಪಿಎಸ್) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಆರೋಪಿ ಅಡಿಸ್ ಅಬಾಬಾದಿಂದ ಇಥಿಯೋಪಿಯನ್ ಏರ್‌ಲೈನ್ಸ್ ವಿಮಾನದಲ್ಲಿ (ಇಟಿ 690) ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸೋಮವಾರ ಬೆಳಗ್ಗೆ 11.09ಕ್ಕೆ ಬಂದಿದ್ದರು.

“ಸಿಐಎಸ್ಎಫ್ ಪೋಲೀಸ್ ಲಕ್ಷ್ಮಿ ಮೀನಾ ಅವರು ಆರೋಪಿ ಅಗೋಲಾ ಅವರನ್ನು ಪರೀಕ್ಷಿಸುವಾಗ ಅನುಮಾನಗೊಂಡಿದ್ದಾರೆ. ಬಳಿಕ ಆಕೆಯನ್ನು ತಪಾಸಣೆ ಮಾಡಲು ಪ್ರತ್ಯೇಕ ಕೋಣೆಗೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಆಕೆಯ ಒಳ ಉಡುಪುಗಳಲ್ಲಿ ಅನೇಕ ಕ್ಯಾಪ್ಸುಲ್‌ಗಳು ಕಂಡುಬಂದಿವೆ. ಕ್ಯಾಪ್ಸೂಲ್‌ಗಳಲ್ಲಿ ಅತ್ಯಂತ ಗುಣಮಟ್ಟದ ಕೊಕೇನ್ ಅನ್ನು ಸಾಗಿಸುತ್ತಿದ್ದಳು. ಇದು ಸುಮಾರು ₹12 ಕೋಟಿ ಮಾರುಕಟ್ಟೆ ಮೌಲ್ಯವನ್ನು ಹೊಂದಿದೆ” ಎಂದು ಮೂಲಗಳು ತಿಳಿಸಿವೆ.

“ಆರೋಪಿ ಅಗೋಲಾಳನ್ನು ಆಸ್ಟರ್ ಮೆಡಿಕಲ್ ಸೆಂಟರ್‌ಗೆ ಕರೆದೊಯ್ಯಲಾಯಿತು. ಆಕೆಯನ್ನು ಸಂಪೂರ್ಣ ತಪಾಸಣೆ ಮಾಡಲಾಗಿದೆ. ನಂತರ, ವೈದ್ಯಕೀಯ ಸಿಬ್ಬಂದಿ ಆಕೆಯ ಖಾಸಗಿ ಭಾಗಗಳಲ್ಲಿ ಹೆಚ್ಚಿನ ಕ್ಯಾಪ್ಸುಲ್‌ಗಳನ್ನು ಮರೆಮಾಡಿರುವುದನ್ನು ಕಂಡುಕೊಂಡರು. ಇನ್ನೂ ಕೆಲವು ಕ್ಯಾಪ್ಸುಲ್‌ಗಳನ್ನು ನುಂಗಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾಳೆ. ಬಳಿಕ ಆಕೆಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆರೋಪಿಯ ಹೊಟ್ಟೆಯ ಅಲ್ಟ್ರಾಸೌಂಡ್ ಸ್ಕ್ಯಾನ್ ಮಾಡಲಾಯಿತು” ಎಂದು ತಿಳಿದುಬಂದಿದೆ. ಪತ್ತೆಯಾದ ಕ್ಯಾಪ್ಸುಲ್‌ಗಳ ಸಂಖ್ಯೆಯ ಮಾಹಿತಿಯನ್ನು ಒದಗಿಸಲಾಗಿಲ್ಲ.

ಈ ಸುದ್ದಿ ಓದಿದ್ದೀರಾ? ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2 ಫಲಿತಾಂಶ ಪ್ರಕಟ

“ಕೊಕೇನ್ ಅತ್ಯಂತ ಉತ್ತಮ ಗುಣಮಟ್ಟದ್ದಾಗಿದೆ. ಮಾರುಕಟ್ಟೆಯಲ್ಲಿ ಸುಮಾರು ₹12 ಕೋಟಿ ಮೌಲ್ಯವನ್ನು ಹೊಂದಿದೆ. ವಶಪಡಿಸಿಕೊಂಡ ವಸ್ತುವನ್ನು ಎನ್ಸಿಬಿಗೆ ಹಸ್ತಾಂತರಿಸಲಾಗಿದೆ. ಆರೋಪಿ ಸ್ವಂತವಾಗಿ ಕಾರ್ಯನಿರ್ವಹಿಸುತ್ತಿದ್ದಾರೋ ಅಥವಾ ಯಾವುದಾದರೂ ಗುಂಪು ದಂಧೆಯ ಭಾಗವಾಗಿದ್ದಾರೋ ಎಂಬುದನ್ನು ಪತ್ತೆಹಚ್ಚಲು ವಿಚಾರಣೆ ನಡೆಯುತ್ತಿದೆ” ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಾ ರೇಡ್: 33 ಸ್ಥಳಗಳಲ್ಲಿ ಶೋಧ, ರೂ. 29.60 ಕೋಟಿ ಅಕ್ರಮ ಆಸ್ತಿ ಪತ್ತೆ

ಕರ್ನಾಟಕದಾದ್ಯಂತ ಅಕ್ರಮ ಆಸ್ತಿ (ಡಿಎ) ಪ್ರಕರಣಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸೆಪ್ಟೆಂಬರ್...

ಬಿಡದಿ ಟೌನ್‌ಶಿಪ್ ವಿರುದ್ಧ ಹೋರಾಟ: ಉಪವಾಸನಿರತ ಮೂವರು ರೈತರು ತೀವ್ರ ಅಸ್ವಸ್ಥ

ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ – ಬಿಡದಿ ಟೌನ್‌ಶಿಪ್‌) ಯೋಜನೆ...

ಗುತ್ತಿಗೆ ಪದ್ಧತಿ ರದ್ದತಿಗೆ ಆಗ್ರಹ: ಸೆ. 23ಕ್ಕೆ ಫ್ರೀಡಂ ಪಾರ್ಕ್‌ನಲ್ಲಿ BWSSB ಕಾರ್ಮಿಕರ ಬೃಹತ್ ಹೋರಾಟ

ಬೆಂಗಳೂರು ನಗರದ ಕೋಟ್ಯಂತರ ಜನರಿಗೆ ಕುಡಿಯುವ ನೀರು ಪೂರೈಕೆ ಹಾಗೂ ಒಳಚರಂಡಿ...

ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ: ವಾಹನ ಸವಾರರ ಪರದಾಟ

ರಾಜಧಾನಿ ಬೆಂಗಳೂರಿನ ವಿವಿಧೆಡೆ ಸೋಮವಾರ ಸಂಜೆ ಏಕಾಏಕಿ ಹಠಾತ್‌ ಧಾರಾಕಾರ ಮಳೆಯಾಗಿದ್ದು,...