ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಸೆ.26 ರಂದು ‘ಬೆಂಗಳೂರು ಬಂದ್’ ನಡೆಯುತ್ತಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಬಂದ್ ಪರಿಣಾಮ ಬೀರಿದ್ದು, ನಗರಕ್ಕೆ 13 ದೇಶೀಯ ವಿಮಾನಗಳ ಆಗಮನ ಕೊನೆ ಕ್ಷಣದಲ್ಲಿ ರದ್ದಾಗಿದೆ ಎಂದು ತಿಳಿದುಬಂದಿದೆ.
ದೆಹಲಿ, ಕೊಚ್ಚಿ, ಮಂಗಳೂರು, ಮುಂಬೈ ಸೇರಿದಂತೆ ಇತರೆ 13 ವಿಮಾನಗಳ ಹಾರಾಟವನ್ನು ವಿವಿಧ ಏರ್ ಲೈನ್ಸ್ ಕೊನೆ ಕ್ಷಣದಲ್ಲಿ ರದ್ದು ಮಾಡಿವೆ.
ಹೊರ ರಾಜ್ಯಗಳಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಬೇಕಿದ್ದ ವಿಮಾನಗಳು ಬಂದ್ ಹಿನ್ನೆಲೆಯಲ್ಲಿ ಪ್ರಯಾಣಿಕರಿಲ್ಲದೆ ರದ್ದಾಗಿವೆ. ಈ ವಿಮಾನಗಳು ಸೆ.26 ರಂದು ಬೆಳಿಗ್ಗೆ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಬೇಕಿತ್ತು. ಒಟ್ಟು 13 ವಿಮಾನಗಳು ಕೊನೇ ಕ್ಷಣದಲ್ಲಿ ರದ್ದಾಗಿವೆ.
ವಿಮಾನಗಳ ಹಾರಾಟ ರದ್ದಾದ ಕಾರಣ ಟರ್ಮಿನಲ್ನಲ್ಲಿ ಪ್ರಯಾಣಿಕರ ಓಡಾಟದ ಸಂಖ್ಯೆ ಕಡಿಮೆ ಆಗಿದೆ. ಇದರಿಂದ ಕ್ಯಾಬ್ ಚಾಲಕರು ಏರ್ಪೋರ್ಟ್ ನಲ್ಲಿ ಗಂಟೆಗಟ್ಟಲೇ ಕಾಯುವ ಸಂದರ್ಭ ಎದುರಾಗಿದೆ.
ಪ್ರಯಾಣದ ಸಮಯ ಗಮನಿಸಿ
ಸೆಪ್ಟೆಂಬರ್ 26ರಂದು ನಾನಾ ಒಕ್ಕೂಟಗಳು ಮತ್ತು ಸಂಘಟನೆಗಳು ಬೆಂಗಳೂರು ಬಂದ್ಗೆ ಕರೆ ನೀಡಿವೆ. ಈ ಒಂದು ದಿನದ ಬೆಂಗಳೂರು ಬಂದ್ನಿಂದಾಗಿ, ಸಾರಿಗೆ ಸೇವೆಗಳಲ್ಲಿ ಅಡಚಣೆ ಉಂಟಾಗುವ ಸಾಧ್ಯತೆಯಿದೆ. ಹಾಗಾಗಿ, ಪ್ರಯಾಣಿಕರು ಪ್ರಯಾಣದ ಸಮಯವನ್ನು ಗಮನದಲ್ಲಿಟ್ಟುಕೊಂಡು ವಿಮಾನ ನಿಲ್ದಾಣಕ್ಕೆ ಬರುವಂತೆ ಸೂಚನೆ ನೀಡಿದೆ.
ಹೆಚ್ಚಿನ ಮಾಹಿತಿಗಾಗಿ ಆಯಾ ವಿಮಾನಯಾನ ಸಂಸ್ಥೆಗಳು, ಸರ್ಕಾರ ಮತ್ತು ಮಾಧ್ಯಮಗಳಿಂದ ಬಿಡುಗಡೆಯಾಗುವ ಸೂಚನೆಗಳನ್ನು ಅನುಸರಿಸುವಂತೆ ಪ್ರಯಾಣಿಕರನ್ನು ವಿನಂತಿಸಲಾಗಿದೆ.#ಕೆಂಪೇಗೌಡ_ಅಂತರಾಷ್ಟ್ರೀಯ_ವಿಮಾನ_ನಿಲ್ದಾಣ_ಬೆಂಗಳೂರು #BLRAirport #KempegowdaInternationalAirport pic.twitter.com/RB6N3Wy4b9
— BLR Airport (@BLRAirport) September 25, 2023
ಹೆಚ್ಚಿನ ಮಾಹಿತಿಗಾಗಿ ಆಯಾ ವಿಮಾನಯಾನ ಸಂಸ್ಥೆಗಳು, ಸರ್ಕಾರ ಮತ್ತು ಮಾಧ್ಯಮಗಳಿಂದ ಬಿಡುಗಡೆಯಾಗುವ ಸೂಚನೆಗಳನ್ನು ಅನುಸರಿಸುವಂತೆ ಪ್ರಯಾಣಿಕರಿಗೆ ವಿನಂತಿಸಿದೆ.