- ಮೇ 29ರಂದು ಜಗಳವಾಗಿ ಕೊಲೆಯಾಗಿರುವ ಶಂಕೆ
- ಮೇ 30ರಂದು ಕೆರೆಯಲ್ಲಿ ಅಪರಿಚಿತ ಶವ ಪತ್ತೆ
ಬೆಂಗಳೂರಿನಲ್ಲಿ ಮೇ 29ರಂದು ಕೂಲಿ ಕಾರ್ಮಿಕನನ್ನು ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ವಿವಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಆನಂದ್ ಕೊಲೆಯಾದ ದುರ್ದೈವಿ. ಅವರು ಕೆ.ಆರ್ ಮಾರ್ಕೆಟ್‌ನಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಮೇ 29ರಂದು ಜಗಳವಾಗಿ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.
ಕೆ ಆರ್ ರಸ್ತೆಯ ಬಸ್ ನಿಲ್ದಾಣದ ಬಳಿ ಆನಂದ್ ಶವ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ವಿವಿಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಬಳಿಕ ಕೊಲೆಯ ಬಗ್ಗೆ ಕಾರಣ ತಿಳಿದು ಬರಬೇಕಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮರಗಳ ಗಣತಿಗೆ ಮುಂದಾದ ಬಿಬಿಎಂಪಿ
ಕೆರೆಯಲ್ಲಿ ತೇಲಿ ಬಂತು ಅಪರಿಚಿತ ವ್ಯಕ್ತಿಯ ಶವ
ಬೆಂಗಳೂರಿನ ಬ್ಯಾಡರಹಳ್ಳಿಯ ಹೇರೊಹಳ್ಳಿ ಕೆರೆಯಲ್ಲಿ ಮೇ 30ರಂದು ಬೆಳಿಗ್ಗೆ ಕೆರೆಯಲ್ಲಿ ಅಪರಿಚಿತ ಶವವೊಂದು ಪತ್ತೆಯಾಗಿದೆ.
ಬೆಳಗಿನ ಜಾವ ಕೆರೆಯ ದಂಡೆಯಲ್ಲಿ ವಾಯುವಿಹಾರ ನಡೆಸುತ್ತಿರುವವರು ಈ ಬಗ್ಗೆ ಬ್ಯಾಡರಹಳ್ಳಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಬ್ಯಾಡರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಬ್ಯಾಡರಹಳ್ಳಿ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.
ಕೆರೆಯಲ್ಲಿ ಸಿಕ್ಕ ಮೃತ ಅಪರಿಚಿತ ವ್ಯಕ್ತಿಯ ಬಗ್ಗೆ ಇನ್ನೂ ತಿಳಿದಿಲ್ಲ. ಇತನು ಅಂದಾಜು 38-40ವರ್ಷದ ವ್ಯಕ್ತಿಯೆಂದು ಗುರುತಿಸಲಾಗಿದೆ.