ಬೆಂಗಳೂರು | ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿದ ಬಿಬಿಎಂಪಿ

Date:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಪೂರ್ವ, ಪಶ್ಚಿಮ, ಯಲಹಂಕ ಹಾಗೂ ದಕ್ಷಿಣ ವಲಯ ವ್ಯಾಪ್ತಿಯಲ್ಲಿರುವ ಪಾದಚಾರಿ ಮಾರ್ಗದಲ್ಲಿನ ಒತ್ತುವರಿ ತೆರವು ಕಾರ್ಯಾಚರಣೆ ಗುರುವಾರ ನಡೆಸಲಾಗಿದೆ ಎಂದು ಪಾಲಿಕೆ ತಿಳಿಸಿದೆ

- Advertisement -

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಿಬಿಎಂಪಿ, “ಪೂರ್ವ ವಲಯ ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗಗಳಲ್ಲಿ ಅನಧಿಕೃತ ಓ.ಎಫ್.ಸಿ. ಕೇಬಲ್‌ಗಳ ತೆರವು ಕಾರ್ಯಾಚರಣೆಯನ್ನು 6 ವಿಧಾನಸಭಾ ಕ್ಷೇತ್ರಗಳಾದ ಶಾಂತಿನಗರ, ಶಿವಾಜಿನಗರ, ಸಿ.ವಿ.ರಾಮನ್‌ನಗರ, ಪುಲಿಕೇಶಿನಗರ, ಸರ್ವಜ್ಞನಗರ ಮತ್ತು ಹೆಬ್ಬಾಳ ವ್ಯಾಪ್ತಿಯಲ್ಲಿ ನಡೆಸಲಾಗಿದೆ. ಪಾದಚಾರಿ ಮಾರ್ಗದಲ್ಲಿ ಒತ್ತುವರಿಯಾಗಿರುವ ಅಂಗಡಿ ಮಳಿಗೆಗಳ ಮೇಲ್ಚಾವಣಿ, ತಳ್ಳುವ ಗಾಡಿ ಹಾಗೂ ಅನಧಿಕೃತವಾಗಿ ಅಳವಡಿಸಿರುವ ಓ.ಎಫ್.ಸಿ. ಕೇಬಲ್‌ಗಳ ತೆರವು ಕಾರ್ಯಾಚರಣೆ ನಡೆಸಲಾಗಿದೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

“ಅದರಂತೆ, ಪೂರ್ವ ವಲಯ ವ್ಯಾಪ್ತಿಯಲ್ಲಿ 6 ವಿಧಾನಸಭಾ ಕ್ಷೇತ್ರಗಳಲ್ಲಿ ಪಾದಚಾರಿ ಮಾರ್ಗ ಹಾಗೂ ಓ.ಎಫ್.ಸಿ ಕೇಬಲ್ ತೆರವು ಕಾರ್ಯಾಚರಣೆ ನಡೆಸಲಾಗಿದ್ದು, ಈ ಪೈಕಿ 13 ಕಿ.ಮೀ ವ್ಯಾಪ್ತಿಯ ರಸ್ತೆಯಲ್ಲಿ 104 ತಳ್ಳುವ ಗಾಡಿ ಜಪ್ತಿ ಮಾಡಲಾಗಿದೆ. 54 ಪಾದಚಾರಿ ಮಾರ್ಗಕ್ಕೆ ಚಾಚಿಕೊಂಡ ಅಂಗಡಿ ಮುಂಗಟ್ಟುಗಳ ಮೇಲ್ಚಾವಣಿ, 19 ಅನಧಿಕೃತ ನಾಮಫಲಕಗಳು, 7000 ಮೀಟರ್ ಅನಧಿಕೃತ ಓ.ಎಫ್.ಸಿ ಕೇಬಲ್‌ಗಳು ಹಾಗೂ 5 ಅನಧಿಕೃತ ಪೆಟ್ಟೆಗೆ ಅಂಗಡಿಗಳನ್ನು ತೆರವುಗೊಳಿಸಲಾಗಿದೆ” ಎಂದು ಹೇಳಿದೆ.

ಸಾರ್ವಜನಿಕರ ಸುರಕ್ಷತೆ ಮತ್ತು ವಾಹನ ಸವಾರರ ಸಂಚಾರಕ್ಕೆ ಯಾವುದೇ ತೊಂದರೆಯಾಗದಿರಲು ಪಾದಚಾರಿ ಮಾರ್ಗದಲ್ಲಿ ಒತ್ತುವರಿಯಾಗಿರುವ ಅಂಗಡಿ ಮಳಿಗೆ, ತಳ್ಳುವ ಗಾಡಿ ಹಾಗೂ ಅನಧಿಕೃತ ಓ.ಎಫ್.ಸಿ ಕೇಬಲ್ ತೆರವುಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ಅನಧಿಕೃತ ಕೇಬಲ್‌ಗಳನ್ನು ಅಳವಡಿಸಿದಲ್ಲಿ ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಿ ಸಂಬಂಧಪಟ್ಟ ಸಂಸ್ಥೆಗಳ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು. ಜತೆಗೆ ಅನಧಿಕೃತ ಕೇಬಲ್ ತೆರವು ಕಾರ್ಯಾಚರಣೆಗೆ ಸಂಚಾರ ಪೊಲೀಸ್ ವಿಭಾಗ ಹಾಗೂ ಸಾರ್ವಜನಿಕರು ಸಹಕರಿಸುವಂತೆ ವಲಯ ಜಂಟಿ ಆಯುಕ್ತರಾದ ಕೆ.ಆರ್.ಪಲ್ಲವಿ ತಿಳಿಸಿದ್ದಾರೆ.

ಪಶ್ಚಿಮ ವಲಯ

ಪಶ್ಚಿಮ ವಲಯದ ಮಹಾಲಕ್ಷ್ಮೀಪುರಂ ವಿಭಾಗ ನಾಗಪುರ ವಾರ್ಡ್‌ನಲ್ಲಿ ಅನಧಿಕೃತವಾಗಿರುವ ಓ.ಎಫ್.ಸಿ.ಕೇಬಲ್‌ಗಳು ಹಾಗೂ ಪಾದಚಾರಿ ಮಾರ್ಗದಲ್ಲಿ ಒತ್ತುವರಿ ಮಾಡಿಕೊಂಡು ಅನಧಿಕೃತವಾಗಿ ನಡೆಸುತ್ತಿರುವ ಅಂಗಡಿಗಳನ್ನು ತೆರವು ಕಾರ್ಯಾಚರಣೆಯನ್ನು ನಡೆಸಲಾಯಿತು. ಜೊತೆಗೆ ಸಾಮೂಹಿಕ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಯಿತು.

ನಾಗಪುರ ವಾರ್ಡ್ 1ನೇ ಬ್ಲಾಕ್ ರಾಜಾಜಿನಗರ, 10ನೇ ಅಡ್ಡರಸ್ತೆ ಹಾಗೂ 19ನೇ ಮುಖ್ಯರಸ್ತೆ ಸೇರಿ 1.20 ಕಿ.ಮೀ ಅನಧಿಕೃತ ಓ.ಎಫ್.ಸಿ ಕೇಬಲ್‌ಗಳು ಹಾಗೂ ಅನಧಿಕೃತವಾಗಿ ಫುಟ್ ಪಾತ್ ಮೇಲೆ ನಡೆಸುತ್ತಿರುವ ಅಂಗಡಿಗಳನ್ನು ತೆರವುಗೊಳಿಸಲಾಗಿದೆ ಹಾಗೂ ರಸ್ತೆ ಬದಿಯಲ್ಲಿ ಶೇಖರಣೆಯಾಗಿರುವ ಕಲ್ಲು, ಮಣ್ಣು, ಜಾಹೀರಾತು ಫಲಕಗಳು ಹಾಗೂ ಅನುಪಯುಕ್ತ ವಸ್ತುಗಳನ್ನು ತೆರವುಗೊಳಿಸಲಾಗಿದೆ.

ಪಶ್ಚಿಮ ವಲಯ ಚಾಮರಾಜಪೇಟೆ ವಾರ್ಡ್ ನ 5ನೇ ಮುಖ್ಯರಸ್ತೆ, 6ನೇ ಅಡ್ಡರಸ್ತೆಯಿಂದ 9ನೇ ಅಡ್ಡರಸ್ತೆಯವರೆಗೆ ಒಟ್ಟು 0.80 ಕಿ.ಮೀ. ಅನಧಿಕೃತವಾಗಿ ಪಾದಚಾರಿ ಮಾರ್ಗದಲ್ಲಿ ನಡೆಸುತ್ತಿರುವ ಅಂಗಡಿಗಳನ್ನು ತೆರವುಗೊಳಿಸಲಾಗಿದೆ.

ಯಲಹಂಕ ವಲಯ:

ಯಲಹಂಕ ವಲಯ ವ್ಯಾಪ್ತಿಯಲ್ಲಿಂದು ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆಯನ್ನು ರೈತರ ಸಂತೆ, ಸಹಕಾರನಗರ ಮುಖ್ಯ ರಸ್ತೆ, ಕೊಡಿಗೇಹಳ್ಳಿ ಮುಖ್ಯ ರಸ್ತೆ, ಅಟ್ಟೂರು ಲೇಔಟ್ ಮುಖ್ಯ ರಸ್ತೆ, ಬಿ.ಇ.ಎಲ್ ಲೇಔಟ್ ವಿದ್ಯಾರಣ್ಯಪುರ ಹಾಗೂ ಎನ್.ಟಿ.ಐ ಲೇಔಟ್ ನಲ್ಲಿ ನಡೆಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರಸ್ತೆಯಲ್ಲಿ ಪತ್ನಿಗೆ ಕಿರುಕುಳ ನೀಡಿದ ಬಗ್ಗೆ ಟ್ವೀಟ್ ಮಾಡಿದ ಪತಿ

ದಕ್ಷಿಣ ವಲಯ

ದಕ್ಷಿಣ ವಲಯ ಪದ್ಮನಾಭನಗರ ವ್ಯಾಪ್ತಿಯ ಬನಶಂಕರಿ ಉಪವಿಭಾಗದ ಗಣೇಶ ಮಂದಿರ, ಬಿ.ಡಿ.ಎ ಕಾಂಪ್ಲೆಕ್ಸ್ ಸುತ್ತಮುತ್ತಲಿನ 24ನೇ ಅಡ್ಡರಸ್ತೆ, 21ನೇ ಮುಖ್ಯರಸ್ತೆ, 17ನೇ ಮುಖ್ಯರಸ್ತೆ, 22ನೇ ಅಡ್ಡರಸ್ತೆ ಮತ್ತು 23ನೇ ಅಡ್ಡರಸ್ತೆಯಲ್ಲಿದ್ದ ಪಾದಚಾರಿ ಮಾರ್ಗದಲ್ಲಿ ಅನಧಿಕೃತವಾಗಿ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯುಂಟಾಗುವಂತೆ ನಡೆಸುತ್ತಿದ್ದ ವ್ಯಾಪಾರ ವಹಿವಾಟುಗಳನ್ನು ತೆರವುಗೊಳಿಸಲಾಗಿದೆ.

ಈ ಕಾರ್ಯಾಚರಣೆಯಲ್ಲಿ ಪಾದಚಾರಿ ಮಾರ್ಗಗಳಲ್ಲಿ ಸಾರ್ವಜನಿಕ ಸಂಚಾರಕ್ಕೆ ತೊಂದರೆಯುಂಟಾಗಿದ್ದ 8 ತಳ್ಳುವ ಗಾಡಿ, 2 ಕೇಬಲ್, 10 ಆಟೋ ಕ್ರೇಟ್, 1 ಜಾಹಿರಾತು ಫಲಕಗಳು, 2 ಶೆಡ್‌ಗಳು ಹಾಗೂ 2 ಬ್ಯಾರಿಕೇಡ್‌ಗಳನ್ನು ತೆರವುಗೊಳಿಸಲಾಯಿತು ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕೃಷಿ ವಿವಿಯಲ್ಲಿ ವರ್ಗಾವಣೆ ಆದೇಶ: ಉಲ್ಲಂಘನೆ ಆರೋಪ

ಈಶಾನ್ಯ ಶಿಕ್ಷಕರ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ರಾಯಚೂರಿನ ಕೃಷಿ ವಿಜ್ಞಾನಗಳ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ ನಂಬಿಕೆಯ ಬಿಕ್ಕಟ್ಟು

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ....

ರಾಯಚೂರು | ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ 8 ಸೇತುವೆಗಳ ಕಾಮಗಾರಿ ತಕ್ಷಣ ಆರಂಭಿಸಲು ಒತ್ತಾಯ

ದೇವದುರ್ಗ ತಾಲ್ಲೂಕಿನ ಮನಗೂಳಿ–ಬಿಚ್ಚಾಲಿ–61 ರಾಜ್ಯ ಹೆದ್ದಾರಿಯ ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ ನಿರ್ಮಿಸಬೇಕಿರುವ...

ವಿಜಯನಗರ | SIR ರದ್ಧತಿ, ಜ್ಞಾನೇಶ್ ಕುಮಾರ್ ವಜಾಕ್ಕೆ ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...