ಬೆಂಗಳೂರು | ಏಕ ಬಳಕೆಯ ನಿಷೇಧಿತ ಪ್ಲಾಸ್ಟಿಕ್ ಬಳಸುತ್ತಿರುವ ಮಳಿಗೆಗಳಿಗೆ ಬೀಗ ಜಡಿದ ಬಿಬಿಎಂಪಿ

Date:

ಬೆಂಗಳೂರಿನ ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಬಳಸುತ್ತಿದ್ದ 6 ಮಳಿಗೆಗಳಲ್ಲಿ ಪ್ಲಾಸ್ಟಿಕ್ ವಶಪಡಿಸಿಕೊಂಡು ಮಳಿಗೆಗಳಿಗೆ ಬೀಗ ಹಾಕಿ ಸೀಲ್ ಮಾಡಲಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತಿಳಿಸಿದೆ.

- Advertisement -

“ರಾಜರಾಜೇಶ್ವರಿ ನಗರದ ಜೆ.ಪಿ ಪಾರ್ಕ್ ವಾರ್ಡ್‌ನ ಮೋಹನ್ ಕುಮಾರ್ ಮುಖ್ಯ ರಸ್ತೆಯಲ್ಲಿ ಬರುವ ಮಳಿಗೆಗಳು ಹಾಗೂ ರಾಜರಾಜೇಶ್ವರಿ ನಗರ ವಾರ್ಡ್‌ನ ಐಡಿಯಲ್ ಹೋಮ್ಸ್‌ನಲ್ಲಿನ ಜವಹಾರ್‌ಲಾಲ್ ನೆಹರು ರಸ್ತೆಯಲ್ಲಿರುವ ಮಳಿಗೆಗಳಿಗೆ ಏಕ ಬಳಕೆ ಪ್ಲಾಸ್ಟಿಕ್ ಬಳಸದಂತೆ ಈಗಗಾಲೇ ಸೂಚನೆ ನೀಡಲಾಗಿತ್ತು. ಆದರೂ ಡಿ.14 ರಂದು ಪರಿಶೀಲನೆ ನಡೆಸಿದ ವೇಳೆ ಏಕ ಬಳಕೆ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡಿರುವುದನ್ನು ಗಮನಿಸಿ ಜೆಪಿ ಪಾರ್ಕ್ ವಾರ್ಡ್‌ನಲ್ಲಿ ಆರ್.ಎಸ್ ವೆಜಿಟೆಬಲ್ ಮಳಿಗೆ, ಗ್ರೀನ್ ವಾಲಿ ಫಾರಂ, ಜಾಫರ್ ಫೋಟ್ ಶಾಪ್ ಹಾಗೂ ಆರ್.ಆರ್ ನಗರ ವಾರ್ಡ್‌ನಲ್ಲಿರುವ ಮಾತಾಜಿ ಡಿಪಾರ್ಟ್‌ಮೆಂಟಲ್ ಸ್ಟೋರ್ಸ್, ಸತೀಶ್ ಸ್ಟೋರ್ಸ್, ಕನಕಶ್ರೀ ಕ್ರೀಯೇಷನ್ಸ್ ಸೇರಿ 6 ಮಳಿಗೆಗಳಿಗೆ ಬೀಗ ಹಾಕಿ ಸೀಲ್ ಮಾಡಲಾಗಿದೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ರಾಜರಾಜೇಶ್ವರಿನಗರ ವಲಯ ಆಯುಕ್ತರು, ವಲಯ ಜಂಟಿ ಆಯುಕ್ತರ ಸೂಚನೆಯಂತೆ ಬೀಗ ಹಾಕಿ ಸೀಲ್ ಮಾಡಿರುವ ಮಳಿಗೆಗಳ ಮುಂಭಾಗದಲ್ಲಿ ‘ಈ ಅಂಗಡಿ ಮಳಿಗೆಯಲ್ಲಿ ಏಕ ಬಳಕೆ ನಿಷೇದಿತ ಪ್ಲಾಸ್ಟಿಕ್ ಬಳಸದಂತೆ ಈಗಾಗಲೇ ಈ ಹಿಂದೆ ಹಲವಾರು ಬಾರಿ ಸೂಚನೆ ನೀಡಿದರೂ ಸಹ ಏಕ ಬಳಕೆ ನಿಷೇಧಿತ ಪ್ಲಾಸ್ಟಿಕ್ ಬಳಸುತ್ತಿರುವುದು ದೃಢಪಟ್ಟಿರುವುದರಿಂದ ಪ್ಲಾಸ್ಟಿಕ್ ಬ್ಯಾನ್ ನೋಟಿಫಿಕೇಶನ್ ನಿಯಮ 4(ಸಿ), 4(ಡಿ) ಹಾಗೂ 14(1) ರ ಅನ್ವಯ ಹಾಗೂ ಹಸಿರು ನ್ಯಾಯಾಧಿಕರಣ ಮಂಡಳಿ ರಾಜ್ಯಮಟ್ಟದ ಸಮಿತಿ ರವರ ನಿರ್ದೇಶನಗಳಂತೆ ಈ ಅಂಗಡಿ ಮಳಿಗೆಯನ್ನು ಮುಂದಿನ ಆದೇಶದವರೆವಿಗೂ ಪಾಲಿಕೆಯ ವತಿಯಿಂದ ಮುಚ್ಚಲಾಗಿದೆ’ ಎಂಬ ಭಿತ್ತಿಪತ್ರವನ್ನು ಅಂಟಿಸಲಾಗಿದೆ.

₹44,400 ದಂಡ ವಸೂಲಿ

ಏಕ ಬಳಕೆ ಪ್ಲಾಸ್ಟಿಕ್ ಬಳಸುತ್ತಿದ್ದ ಬೀದಿ ಬದಿ ವ್ಯಾಪಾರಿಗಳು, ಅಂಗಡಿ ಮುಂಗಟ್ಟುಗಳು ಹಾಗೂ ಪಾದಚಾರಿ ಮಾರ್ಗ ಒತ್ತುವರಿ ಮಾಡಿಕೊಂಡಿದ್ದ ಮಳಿಗೆಗೆಗಳಿಂದ ಒಟ್ಟಾರೆ ₹44,400 ದಂಡ ವಸೂಲಿ ಮಾಡಲಾಗಿದೆ ಎಂದು ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಡಿ.17 ರಿಂದ ರಾಜ್ಯದ ನಾನಾ ಭಾಗಗಳಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಧ್ವನಿವರ್ಧಕಗಳ ಮೂಲಕ ಜಾಗೃತಿ

ಸಾರ್ವಜನಿಕರಿಗೆ ಮಾರ್ಷಲ್ ವಾಹನದ ಧ್ವನಿವರ್ಧಕದ ಮೂಲಕ ಹಾಗೂ ಪ್ರತಿದಿನ ಮನೆಮನೆಗಳಿಂದ ತ್ಯಾಜ್ಯ ಸಂಗ್ರಹಣೆ ಮಾಡುವ ಆಟೋಟಿಪ್ಪರ್‌ಗಳ ಧ್ವನಿವರ್ಧಕದ ಮೂಲಕ ನಿಷೇಧಿತ ಏಕ ಬಳಕೆಯ ಪ್ಲಾಸ್ಟಿಕ್ ಕೈಚೀಲವನ್ನು ಬಳಸದಂತೆ ಜಾಗೃತಿ ಮೂಡಿಸಿದರು.

ಪರಿಶೀಲನೆಯ ವೇಳೆ ಘನತ್ಯಾಜ್ಯ ನಿರ್ವಹಣೆ ವಿಭಾಗದ ಅಭಿಯಂತರರು ಮತ್ತು ಸಿಬ್ಬಂದಿ, ಕಾಮಗಾರಿ ವಿಭಾಗದ ಅಭಿಯಂತರರು, ಆರೋಗ್ಯ ವಿಭಾಗದ ಅಧಿಕಾರಿಗಳು, ಮಾರ್ಷಲ್‌ಗಳು ಹಾಗೂ ಸ್ಥಳೀಯ ಪೋಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...