ಬೆಂಗಳೂರು | ಬಳ್ಳಾರಿ ರಸ್ತೆ ವಿಸ್ತರಣೆ ಕಾಮಗಾರಿ 95% ಮುಗಿದಿದೆ ಎಂದ ಬಿಬಿಎಂಪಿ ; ವರದಿ ಕೇಳಿದ ಹೈಕೋರ್ಟ್‌

Date:

  • ಬಳ್ಳಾರಿ ರಸ್ತೆ ವಿಸ್ತರಣೆ ಕಾಮಗಾರಿ ವರದಿಯನ್ನು ಏಪ್ರಿಲ್ 18 ರೊಳಗೆ ಹೈಕೋರ್ಟ್‌ಗೆ ಸಲ್ಲಿಸಬೇಕು
  • ರಸ್ತೆ ಅಗಲೀಕರಣ ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ

ಬೆಂಗಳೂರಿನ ಬಳ್ಳಾರಿ ರಸ್ತೆ ವಿಸ್ತರಣೆ ಕಾಮಗಾರಿಗೆ ಸಂಬಂಧಿಸಿದಂತೆ, ಏಪ್ರಿಲ್ 18 ರೊಳಗೆ ಸಮಗ್ರ ವರದಿಯನ್ನು ಸಲ್ಲಿಸುವಂತೆ ಬುಧವಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಗೆ ಹೈಕೋರ್ಟ್ ಸೂಚಿಸಿದೆ.

ಸಮರ್ಪಣಾ ಸ್ವಯಂಸೇವಾ ಸಂಸ್ಥೆಯೂ ಬಳ್ಳಾರಿ ರಸ್ತೆ ಅಗಲೀಕರಣಕ್ಕೆ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡುವಂತೆ ಕೋರಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದರು.

ಈ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂಜಿಎಸ್‌ ಕಮಲ್ ಅವರ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.

ಈ ಸುದ್ದಿ ಓದಿದ್ದೀರಾ? ರಾಜ್ಯದಲ್ಲಿ ಮುಂದಿನ ಐದು ದಿನ ಗುಡುಗು ಸಹಿತ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಬಿಬಿಎಂಪಿಯು ನ್ಯಾಯಾಲಯಕ್ಕೆ ಕಾವೇರಿ ಚಿತ್ರಮಂದಿರ ಜಂಕ್ಷನ್‌ನಿಂದ ಮೇಕ್ರಿ ವೃತ್ತದವರೆಗೆ ಹಾಗೂ ಜಯಮಹಲ್‌ ರಸ್ತೆಯಲ್ಲಿ ಕೈಗೊಂಡಿರುವ ಕೆಲಸದ ಬಗ್ಗೆ ಅಫಿಡವಿಟ್‌ ಸಲ್ಲಿಸಿತು. ಈ ವೇಳೆ, “ಗಾಯತ್ರಿ ವಿಹಾರ್ ಗೇಟ್‌ನಿಂದ ಕಾವೇರಿ ಥಿಯೇಟರ್ ಜಂಕ್ಷನ್‌ವರೆಗೆ ಬಳ್ಳಾರಿ ರಸ್ತೆ ಯೋಜನೆಯ ಶೇ. 90ರಷ್ಟು ಪೂರ್ಣಗೊಂಡಿದೆ. ರಸ್ತೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಇನ್ನುಳಿದ ಕಾಮಗಾರಿಯನ್ನು ಒಂದೂವರೆ ತಿಂಗಳೊಳಗೆ ಪೂರ್ಣಗೊಳಿಸಲಾಗುವುದು” ಎಂದು ಬಿಬಿಎಂಪಿ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು.

“ಇಡೀ ರಸ್ತೆ ವಿಸ್ತರಣೆ ಯೋಜನೆಗೆ ಸಂಬಂಧಿಸಿದಂತೆ ಬಿಬಿಎಂಪಿ ಸಂಪೂರ್ಣ ವಿವರಗಳನ್ನು ನೀಡಬೇಕು. ಸಂಚಾರ ದಟ್ಟಣೆಯ ನಡುವೆಯೇ ರಸ್ತೆ ಕಾಮಗಾರಿ ನಡೆಸಲಾಗುತ್ತಿದ್ದು, ಬಿಬಿಎಂಪಿ ಕೈಗೊಂಡಿರುವ ಸುರಕ್ಷತಾ ಕ್ರಮಗಳ ಬಗ್ಗೆ ತಿಳಿಸಬೇಕು. ಯೋಜನೆಯನ್ನು ಪೂರ್ಣಗೊಳಿಸಲು ಎಷ್ಟು ಸಮಯದ ಅಗತ್ಯವಿದೆ ಎಂಬ ಬಗ್ಗೆ ಬಿಬಿಎಂಪಿ ನ್ಯಾಯಾಲಯಕ್ಕೆ ಮಾಹಿತಿ ನೀಡಬೇಕು” ಎಂದು ಹೈಕೋರ್ಟ್ ಸೂಚಿಸಿದೆ.

“ಬಿಬಿಎಂಪಿಯು ಸೂಕ್ತ, ಸಮಗ್ರ, ವಿಸ್ತೃತ ಪ್ರತಿಕ್ರಿಯೆಯನ್ನು ಅನುಪಾಲನಾ ಅಥವಾ ಸ್ಥಿತಿಗತಿ ವರದಿಯ ರೂಪದಲ್ಲಿ ಸಲ್ಲಿಸಬೇಕು. ಮೇಕ್ರಿ ವೃತ್ತದಿಂದ ಕಾವೇರಿ ಜಂಕ್ಷನ್‌ ಹಾಗೂ ಜಯಮಹಲ್‌ ರಸ್ತೆಯಿಂದ ಕಂಟೋನ್ಮೆಂಟ್‌ವರೆಗಿನ ಅಗತ್ಯವಾದ ಎಲ್ಲ ವಾಸ್ತವಿಕ ವಿಚಾರಗಳನ್ನು ಒಳಗೊಂಡ ಅಂಶಗಳೂ ಅದರಲ್ಲಿ ಸೇರಿರಬೇಕು” ಎಂದು ನ್ಯಾಯಾಲಯವು ಆದೇಶಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಆಟೋ ಚಾಲಕನ ಬರ್ಬರ ಹತ್ಯೆ

ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಆಟೋ ಚಾಲಕನೊಬ್ಬನನ್ನು ದುಷ್ಕರ್ಮಿಗಳು ಭೀಕರವಾಗಿ ಹತ್ಯೆಗೈದಿರುವ...

ಡಾ.ಬಿ.ಆರ್.ಅಂಬೇಡ್ಕರ್ ಅವರ 67ನೇ ಮಹಾಪರಿನಿಬ್ಬಾಣ ದಿನ ಗಣ್ಯರಿಂದ ನಮನ

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 67ನೇ ಮಹಾಪರಿನಿಬ್ಬಾಣ ದಿನ ಅಂಗವಾಗಿ ರಾಜಧಾನಿ...

ಬಿಸಿಯೂಟ ಯೋಜನೆಗೆ ಶಾಲಾ ಶಿಕ್ಷಕರ ಬಳಕೆಯಿಂದ ಶೈಕ್ಷಣಿಕ ಚಟುವಟಿಕೆಗಳಿಗೆ ಅಡ್ಡಿ: ರಮೇಶ್ ಬಾಬು

"ರಾಜ್ಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಡಿಯಲ್ಲಿ ಶಾಲಾ ಹಂತದಲ್ಲಿ...

ಬೆಂಗಳೂರು | ನವೆಂಬರ್‌ನಲ್ಲಿ ₹10,86 ಕೋಟಿ ಮೌಲ್ಯದ ಮಾದಕ ವಸ್ತು ವಶ : ಬಿ. ದಯಾನಂದ್

ಬೆಂಗಳೂರು ಸಿಟಿ ಕ್ರೈಂ ಬ್ರಾಂಚ್ (ಸಿಸಿಬಿ) 8 ಕಾನೂನು ಮತ್ತು ಸುವ್ಯವಸ್ಥೆ...