ಬೆಂಗಳೂರು | ಮರಗಳ ಗಣತಿಗೆ ಮುಂದಾದ ಬಿಬಿಎಂಪಿ

Date:

Advertisements
  • 60 ಲಕ್ಷದಿಂದ 1 ಕೋಟಿ ಮರಗಳಿವೆಯೆಂದು ಅಂದಾಜು
  • ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವ ಬಿಬಿಎಂಪಿ

ಇತ್ತೀಚೆಗೆ ಎರಡು-ಮೂರು ಬಾರಿ ಸುರಿದ ಮಳೆಗೆ ಬೆಂಗಳೂರು ನಲುಗಿಹೋಗಿದೆ. ನಗರದಲ್ಲಿ ಸುಮಾರು 50ಕ್ಕೂ ಹೆಚ್ಚು ಮರಗಳು ನೆಲಕ್ಕುರುಳಿವೆ. ಸುಮಾರು 400 ಮರಗಳ ಕೊಂಬೆಗಳು ಮುರಿದುಬಿದ್ದಿವೆ. ಈ ಬೆನ್ನಲ್ಲೇ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಮರಗಳ ಗಣತಿಗೆ ಮುಂದಾಗಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿರುವ ರಸ್ತೆ, ಉದ್ಯಾನವನ, ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳು ಹಾಗೂ ಖಾಸಗಿ ಜಾಗಗಳಲ್ಲಿ ಒಟ್ಟು 60 ಲಕ್ಷದಿಂದ 1 ಕೋಟಿ ಮರಗಳಿವೆ ಎಂದು ಅಂದಾಜಿಸಲಾಗಿದೆ. ನಿಖರವಾಗಿ ಎಷ್ಟು ಮರಗಳಿವೆ ಎಂದು ತಿಳಿಯಲು ಮರಗಳ ಗಣತಿ ನಡೆಸಲು ಬಿಬಿಎಂಪಿ ನಿರ್ಧರಿಸಿದೆ.

ಮರಗಳ ಗಣತಿ ಪ್ರಕ್ರಿಯೆಗಾಗಿ ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರದ ನೆರವಿನೊಂದು ಬಿಬಿಎಂಪಿ ಅಧಿಕಾರಿಗಳು ಆ್ಯಪ್‌ ಅಭಿವೃದ್ಧಿಪಡಿಸಿದ್ದಾರೆ. ಅದರಲ್ಲಿ, ಮರದ ಹೆಸರು, ಎತ್ತರ, ಗಾತ್ರ, ವಯಸ್ಸು ಸೇರಿದಂತೆ ಒಟ್ಟು 20 ರಿಂದ 25 ಅಂಶಗಳ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ ಎಂದು ಹೇಳಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ?: ಬೆಂಗಳೂರು | ಸೋರುತಿಹುದು ಹೊಸ ಮೆಟ್ರೋ ನಿಲ್ದಾಣದ ಮಾಳಿಗೆ

ಪ್ರತಿ ಮರಗಳಿಗೂ ನಂಬರ್‌ ಕೊಡಲಾಗುತ್ತದೆ. ಅಲ್ಲದೆ, ಕ್ಯೂಆರ್‌ ಕೋಡ್‌ ಅಂಟಿಸಲಾಗುತ್ತದೆ. ಈ ಕ್ಯೂಆರ್‌ ಕೋಡ್ ಸ್ಕಾನ್‌ ಮಾಡಿದರೆ, ಮರದ ಸಂಪೂರ್ಣ ಮಾಹಿತಿ ತೆರೆದುಕೊಳ್ಳುತ್ತದೆ.

ನಗರದಾದ್ಯಂತ ಮರಗಳ ಗಣತಿ ನಡೆಸಲು ಕನಿಷ್ಠ ಒಂದು ವರ್ಷ ಸಮಯ ಬೇಕಾಗುತ್ತದೆ. ಗಣತಿ ಪ್ರಕ್ರಿಯೆಗೆ ₹6-8 ಕೋಟಿ ಖರ್ಚಾಗಬಹುದು ಎಂದು ಬಿಬಿಎಂಪಿ ಹೇಳಿದೆ.

ಮರಗಣತಿಗಾಗಿ ಸರ್ಕಾರಕ್ಕೆ ಬಿಬಿಎಂಪಿ ಪ್ರಸ್ತಾವನೆ ಸಲ್ಲಿಸಿದೆ. ಸರ್ಕಾರದ ಅನುಮತಿ ದೊರೆತ ಬಳಿಕ ಗಣತಿ ಆರಂಭಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X