ಬೆಂಗಳೂರು | ಟ್ರಾಫಿಕ್ ಪೊಲೀಸ್‌ ಪೇದೆ ಮೇಲೆ ಹಲ್ಲೆ ನಡೆಸಿದ ಬೈಕ್ ಸವಾರನ ಬಂಧನ

Date:

  • ಪ್ರಿಮ್ರೋಸ್ ರಸ್ತೆಯಲ್ಲಿ ಏಕಮುಖವಾಗಿ ಸಂಚಾರ ಮಾಡಿ ಪೇದೆ ಮೇಲೆ ದೌರ್ಜನ್ಯ
  • ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದ ಪೊಲೀಸರು

ಏಕಮುಖ ರಸ್ತೆಯಲ್ಲಿ ವಿರುದ್ಧ ದಿಕ್ಕಿನಿಂದ ಬೈಕ್‌ ಚಲಾಯಿಸಿಕೊಂಡು ಬಂದು ಸಂಚಾರ ನಿಯಮ ಉಲ್ಲಂಘಿಸಿದ್ದನ್ನು ತನ್ನ ಮೊಬೈಲ್‌ನಲ್ಲಿ ಸೆರೆಹಿಡಿದ ಪೇದೆಯ ಮೇಲೆ ಬೈಕ್‌ ಸವಾರ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಪ್ರಿಮ್ರೋಸ್ ರಸ್ತೆಯಲ್ಲಿ ನಡೆದಿದೆ. 26 ವರ್ಷದ ಆರೋಪಿ ಬೈಕ್ ಸವಾರನನ್ನು ಪೊಲೀಸರು ಬಂಧಿಸಿದ್ದಾರೆ.

ಯಶ್ವಿನ್ ಗೌಡ ಕೆ ಬಂಧಿತ ಆರೋಪಿ. ಬೆಂಗಳೂರಿನ ಸುಬ್ರಹ್ಮಣ್ಯಪುರದ ಉತ್ತರಹಳ್ಳಿ ಮುಖ್ಯರಸ್ತೆಯ ಗೌಡನಪಾಳ್ಯದ ನಿವಾಸಿ. ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ಇವರು ವಾಹನದ ನೋಂದಣಿ ಸಂಖ್ಯೆ ಸಿಕೆಆರ್ 8240ರ ಯಮಹಾ ಆರ್ ಎಕ್ಸ್ 100 ಬೈಕ್‌ನಲ್ಲಿ ಪ್ರಿಮ್ರೋಸ್ ರಸ್ತೆಯಲ್ಲಿ ಏಕಮುಖವಾಗಿ ಪ್ರಯಾಣ ಮಾಡಿ, ಸಂಚಾರ ನಿಯಮವನ್ನು ಉಲ್ಲಂಘನೆ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವಿದ್ಯುತ್ ಪ್ರವಹಿಸಿ ಕೇರಳ ಮೂಲದ ವ್ಯಕ್ತಿ ಸಾವು

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅಶೋಕನಗರ ಸಂಚಾರಿ ಪೊಲೀಸ್ ಠಾಣೆಯ 59 ವರ್ಷದ ಪೊಲೀಸ್ ಪೇದೆ ರಾಜೇಂದ್ರ ಕುಮಾರ್ ಎಂ ಬಿರಾದಾರ್ ಅವರನ್ನು ಪ್ರಿಮ್ರೋಸ್ ರಸ್ತೆಯಲ್ಲಿ ಸ್ಟೇಷನ್ ಹೌಸ್ ಆಫೀಸರ್​ ಆಗಿ ನೇಮಿಸಲಾಗಿತ್ತು. ಏಕಮುಖವಾಗಿ ಬಂದ ಬೈಕ್ ಸವಾರರನ್ನು ತಡೆಯಲು ನಿಯೋಜಿಸಲಾಗಿತ್ತು. ಬೆಳಗ್ಗೆ 10.40ಕ್ಕೆ ಎಂ.ಜಿ.ರಸ್ತೆಯಿಂದ ಪ್ರಿಮ್ರೋಸ್ ರಸ್ತೆಗೆ ಆರೋಪಿ ತನ್ನ ಬೈಕ್‌ನಲ್ಲಿ ತಪ್ಪು ದಾರಿಯಲ್ಲಿ ಹೋಗುತ್ತಿರುವುದನ್ನು ಬಿರಾದಾರ್ ನೋಡಿದ್ದಾರೆ. ಬಳಿಕ ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ದಾಖಲಿಸಲು ಬೈಕ್‌ನೊಂದಿಗೆ ಫೋಟೋವನ್ನು ಕ್ಲಿಕ್ಕಿಸುತ್ತಿದ್ದಾಗ ಯಶ್ವಿನ್ ಗೌಡ ಕೆ ಎಂಬಾತ ಅವರನ್ನು ನಿಂದಿಸಿ ದೌರ್ಜನ್ಯ ಎಸಗಿದ್ದಾನೆ ಎಂದು ಬಿರಾದಾರ್ ತಮ್ಮ ಪೊಲೀಸ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸಾರ್ವಜನಿಕ ನೌಕರನ ಮೇಲೆ ತನ್ನ ಕರ್ತವ್ಯವನ್ನು ನಿರ್ವಹಿಸದಂತೆ ಗಾಯಗೊಳಿಸುವುದು ಮತ್ತು ಹಲ್ಲೆ ಮಾಡಿದ ಕಾರಣ ಆರೋಪಿ ಗೌಡ ಅವರ ಮೇಲೆ ದೂರು ದಾಖಲಾಗಿದೆ. ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಗೋವಾ ಕನ್ನಡಿಗರ ಮೇಲೆ ದೌರ್ಜನ್ಯ; ನ್ಯಾಯಕ್ಕಾಗಿ ರಾಷ್ಟ್ರಪತಿಗೆ ಕರವೇ ಮನವಿ

ಗೋವಾ ಕನ್ನಡಿಗರ ರಕ್ಷಣೆಗೆ ರಾಷ್ಟ್ರಪತಿಯರು ಮಧ್ಯೆ ಪ್ರವೇಶಿಸಿ ನ್ಯಾಯ ನೀಡಬೇಕು ಎಂದು...

ಲೋಕಸಭಾ ಚುನಾವಣೆ | ಬೆಂಗಳೂರಲ್ಲಿ ಏ.24 ರಿಂದ 26 ರವರೆಗೆ ಸೆಕ್ಷನ್ 144 ಜಾರಿ

ಲೋಕಸಭಾ ಚುನಾವಣೆ ಹಿನ್ನೆಲೆ, ಏಪ್ರಿಲ್ 24ರ ಸಂಜೆ 6ರಿಂದ ಏಪ್ರಿಲ್ 26ರವರ...

ಲೋಕಸಭೆ ಚುನಾವಣೆ | ಏ. 25, 26ರಂದು ನಂದಿ ಗಿರಿಧಾಮಕ್ಕೆ ಪ್ರವೇಶ ನಿರ್ಬಂಧ

ಏ.19 ರಿಂದ ದೇಶದಲ್ಲಿ ಮೊದಲ ಹಂತದ ಚುನಾವಣೆ ಆರಂಭವಾಗಿದೆ. ಕರ್ನಾಟಕದಲ್ಲಿ ಎರಡು...

ಬೆಂಗಳೂರು | ಹತ್ತಕ್ಕೂ ಹೆಚ್ಚು ಉದ್ಯಮಿಗಳ ಮನೆ ಮೇಲೆ ಐಟಿ ದಾಳಿ

ಒಂದೆಡೆ ಲೋಕಸಭಾ ಚುನಾವಣೆಯ ಕಾವು ಏರಿಕೆಯಾಗುತ್ತಿದ್ದರೆ, ಇನ್ನೊಂದೆಡೆ ಆದಾಯ ತೆರಿಗೆ ಇಲಾಖೆ...