ಬೆಂಗಳೂರು | ರಸ್ತೆಯಲ್ಲಿ ಜಗಳವಾಡುತ್ತ ನಿಂತಿದ್ದವರಿಗೆ ಬಿಎಂಟಿಸಿ ಬಸ್ ಡಿಕ್ಕಿ; ಇಬ್ಬರ ದುರ್ಮರಣ

Date:

ರಸ್ತೆ ಬದಿ ಜಗಳವಾಡುತ್ತ ನಿಂತಿದ್ದವರಿಗೆ ಬಿಎಂಟಿಸಿ ವೋಲ್ವೋ ಬಸ್ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಯಲಹಂಕದಲ್ಲಿ ನಡೆದಿದೆ.

- Advertisement -

ಮಂಗಳವಾರ ಮುಂಜಾನೆ, ಯಲಹಂಕ ಮೇಲುರಸ್ತೆಯಲ್ಲಿ ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದವರು ಲಾರಿ ಚಾಲಕನೊಂದಿಗೆ ಜಗಳಕ್ಕಿಳಿದಿದ್ದಾರೆ. ಈ ವೇಳೆ, ವೇಗವಾಗಿ ಬಂದ ವೋಲ್ವೋ ಬಸ್‌ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ, ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರು ಚಾಲಕನನ್ನು ಆಸ್ಪತ್ರೆಗೆ ರವಾನಿಸಲಾದರೂ, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಮೃತರನ್ನು ಲಾರಿ ಚಾಲಕ ಕುಲದೀಪ್ ಕುಮಾರ್ (42) ಮತ್ತು ಕಾರು ಚಾಲಕ ಜಗದೀಶ್ (40) ಎಂದು ಗುರುತಿಸಲಾಗಿದೆ.

ಘಟನೆಯಲ್ಲಿ ವೋಲ್ವೋ ಬಸ್‌ನ ಮುಂಭಾಗ ನಜ್ಜುಗುಜ್ಜಾಗಿದೆ. ಬಸ್ ಚಾಲಕ ಪುಟ್ಟಸ್ವಾಮಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಯಲಹಂಕ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋಮನಹಳ್ಳಿಯ ಸುಷ್ಮಗೆ ಸಂದ ಡಾಕ್ಟರೇಟ್ ಗೌರವ

ಬೆಂಗಳೂರು ವಿಶ್ವವಿದ್ಯಾಲಯದ ಗ್ರಾಮೀಣ ಅಭಿವೃದ್ಧಿ ಅಧ್ಯಯನ ಕೇಂದ್ರದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ...

ಬಿಡದಿ ಟೌನ್‌ಶಿಪ್ ವಿರುದ್ಧ ಹೋರಾಟ: ಉಪವಾಸನಿರತ ಮೂವರು ರೈತರು ತೀವ್ರ ಅಸ್ವಸ್ಥ

ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ – ಬಿಡದಿ ಟೌನ್‌ಶಿಪ್‌) ಯೋಜನೆ...

ಗುತ್ತಿಗೆ ಪದ್ಧತಿ ರದ್ದತಿಗೆ ಆಗ್ರಹ: ಸೆ. 23ಕ್ಕೆ ಫ್ರೀಡಂ ಪಾರ್ಕ್‌ನಲ್ಲಿ BWSSB ಕಾರ್ಮಿಕರ ಬೃಹತ್ ಹೋರಾಟ

ಬೆಂಗಳೂರು ನಗರದ ಕೋಟ್ಯಂತರ ಜನರಿಗೆ ಕುಡಿಯುವ ನೀರು ಪೂರೈಕೆ ಹಾಗೂ ಒಳಚರಂಡಿ...

ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ: ವಾಹನ ಸವಾರರ ಪರದಾಟ

ರಾಜಧಾನಿ ಬೆಂಗಳೂರಿನ ವಿವಿಧೆಡೆ ಸೋಮವಾರ ಸಂಜೆ ಏಕಾಏಕಿ ಹಠಾತ್‌ ಧಾರಾಕಾರ ಮಳೆಯಾಗಿದ್ದು,...