ಬೆಂಗಳೂರು | ಪೊಲೀಸರನ್ನು ಆಟವಾಡಿಸಲು ರಾಜಭವನಕ್ಕೆ ಬಾಂಬ್‌ ಬೆದರಿಕೆ: ಬಂಧನ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ರಾಜಭವನದಲ್ಲಿ ಬಾಂಬ್‌ ಇಟ್ಟಿರುವುದಾಗಿ ಬೆದರಿಕೆ ಕರೆ ಮಾಡಿದ್ದ ಆರೋಪಿಯನ್ನು ಇದೀಗ ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ.

- Advertisement -

ಭಾಸ್ಕರ್ ಬಂಧಿತ ಆರೋಪಿ. ಈತ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕು ವಡ್ಡಹಳ್ಳಿ ಗ್ರಾಮದವನು. ಬಿ.ಕಾಂ ಪದವೀಧರನಾದ ಈತ ಬಾಂಬ್‌ ಬೆದರಿಕೆ ಕರೆ ಮಾಡಿ ಬಂಧನ ಭೀತಿಯಿಂದ ಆಂಧ್ರಪ್ರದೇಶದ ಚಿತ್ತೂರಿಗೆ ಪರಾರಿಯಾಗಿದ್ದನು. ಆತನ ಮೊಬೈಲ್‌ ಕರೆಗಳ ಜಾಡು ಹಿಡಿದ ಪೊಲೀಸರು ಆತನನ್ನು ಚಿತ್ತೂರಿನಲ್ಲಿ ಬಂಧಿಸಿ ನಗರಕ್ಕೆ ಕರೆತಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಪೊಲೀಸರು ಈತನನ್ನು ಬಂಧಿಸಿ, ವಿಚಾರಣೆ ನಡೆಸುವ ವೇಳೆ ಈತ ಆಘಾತಕಾರಿ ವಿಷಯವೊಂದನ್ನು ಹೇಳಿಕೊಂಡಿದ್ದಾನೆ. ಏನೆಂದರೆ, ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಮೇಲ್ ಬಂದಿದ್ದು ಹಾಗೂ ಪೊಲೀಸರು ತೀವ್ರ ತನಿಖೆ ನಡೆಸುತ್ತಿರುವ ಸುದ್ದಿ ತಿಳಿದಿದ್ದ ಈತ ವೈಯಕ್ತಿಕ ಕೆಲಸದ ನಿಮಿತ್ತ ಸೋಮವಾರ ಬಸ್‌ನಲ್ಲಿ ಬೆಂಗಳೂರಿಗೆ ಬಂದಿದ್ದನು. ಕಾರ್ಪೊರೇಷನ್‌ ವೃತ್ತದಲ್ಲಿ ಇಳಿದು ರಾಜಭವನದತ್ತ ನಡೆದುಕೊಂಡು ಹೋಗಿದ್ದನು.

ಈ ವೇಳೆ, ಬೆಂಗಳೂರು ಪೊಲೀಸರನ್ನು ಆಟವಾಡಿಸಬೇಕೆಂದು ನಿರ್ಧಾರ ಮಾಡಿ, ಗೂಗಲ್‌ನಲ್ಲಿ ಎನ್‌ಐಎ ನಂಬರ್‌ ಸರ್ಚ್ ಮಾಡಿ ಪಡೆದುಕೊಂಡಿದ್ದಾನೆ.

ಅಜ್ಞಾತ ಸ್ಥಳದಿಂದ ಸೋಮವಾರ ರಾತ್ರಿ 11.30ರ ಸುಮಾರಿಗೆ ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ದೊಮ್ಮಲೂರಿನ ನಿಯಂತ್ರಣ ಕೊಠಡಿಗೆ ಕರೆ ಮಾಡಿ ‘ರಾಜಭವನದಲ್ಲಿ ಬಾಂಬ್‌ ಇಟ್ಟಿದ್ದೇವೆ. ಕೆಲವೇ ಕ್ಷಣದಲ್ಲಿ ಅದು ಸ್ಫೋಟಗೊಳ್ಳಲಿದೆ’ ಎಂದು ಬೆದರಿಕೆ ಹಾಕಿದ್ದಾನೆ. ಬೆದರಿಕೆ ಕರೆಯಿಂದ ಗಾಬರಿಯಾದ ಎನ್ಐಎ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ನಂತರ 12 ಗಂಟೆ ಸುಮಾರಿಗೆ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ, ಬೆರಳಚ್ಚು ತಜ್ಞರು ಸ್ಥಳಕ್ಕೆ ಧಾವಿಸಿ ರಾಜಭವನದ ಸುತ್ತಮುತ್ತ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಯಾವುದೇ ಅನುಮಾನಾಸ್ಪದ ವಸ್ತುಗಳು ದೊರೆತಿಲ್ಲ. ಹೀಗಾಗಿ, ಇದೊಂದು ಹುಸಿ ಬಾಂಬ್ ಕರೆ ಎಂಬುದು ತಿಳಿದುಬಂದಿತ್ತು.

ಈ ಸುದ್ದಿ ಓದಿದ್ದೀರಾ? ಡಿಸೆಂಬರ್ 14 ರಿಂದ 22 ರವರೆಗೆ ಬೆಂಗಳೂರು-ಮಂಗಳೂರು ರೈಲು ಸಂಚಾರ ರದ್ದು

ಬೆಂಗಳೂರಿನಿಂದ ಆಂಧ್ರದ ಚಿತ್ತೂರಿನ ದೇವಸ್ಥಾನವೊಂದಕ್ಕೆ ತೆರಳಿದ್ದ ಆರೋಪಿಯ ಫೋನ್ ನಂಬರ್‌ ನೆಟ್ವರ್ಕ್ ಟ್ರ್ಯಾಕ್ ಮಾಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಈ ಸಂಬಂಧ ವಿಧಾನಸೌಧ ಠಾಣೆ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ರಾಯಚೂರು | ಕಾಲೇಜಿನಲ್ಲಿ ಶೌಚಾಲಯವಿದೆ, ನೀರಿಲ್ಲ: 400 ಮಂದಿ ವಿದ್ಯಾರ್ಥಿನಿಯರ ಪರದಾಟ

ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡುವುದಷ್ಟೇ ಸಾಲದು; ಅವರು ಸುರಕ್ಷಿತ, ಗೌರವಯುತ ಹಾಗೂ ಸ್ವಚ್ಛ...