ಶಾಲೆಗಳಿಗೆ ಬಾಂಬ್ ಬೆದರಿಕೆ | ಮಾಹಿತಿ ಕೋರಿ ಇಂಟರ್‍‌ಪೋಲ್‌ಗೆ ಪತ್ರ: ಪೊಲೀಸ್‌ ಆಯುಕ್ತ ಬಿ. ದಯಾನಂದ

Date:

“ರಾಜ್ಯ ರಾಜಧಾನಿ ಬೆಂಗಳೂರಿನ 60ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ, ಒಟ್ಟು 27 ಪ್ರಕರಣ ದಾಖಲಾಗಿದ್ದು, ಕಳೆದ ವರ್ಷ ಏಪ್ರಿಲ್‌ನಲ್ಲಿ ಇದೇ ರೀತಿಯ 6 ಪ್ರಕರಣ ದಾಖಲಾಗಿದ್ದವು. ಆಗ ಕೆಲವು ಬಾಲಾಪರಾಧಿಗಳನ್ನು ಬಂಧಿಸಲಾಗಿತ್ತು. ಈ ಪ್ರಕರಣಗಳ ನಡುವಿನ ಸಾಮ್ಯತೆ ಬಗ್ಗೆ ತನಿಖಾಧಿಕಾರಿಗಳ ಜತೆಗೆ ಸಭೆ ನಡೆಸಿ ತನಿಖೆಯ ಪ್ರಗತಿಯ ಕುರಿತು ಚರ್ಚಿಸಿದ್ದೇವೆ” ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ಹೇಳಿದರು.

- Advertisement -

ಈ ಕುರಿತು ಮಂಗಳವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, “ಮುಂದಿನ ದಿನಗಳಲ್ಲಿ ಆಯಾ ಸರ್ವಿಸ್​​ ಪ್ರೊವೈಡರ್ ಕಂಪನಿಗಳಿಂದ ಮಾಹಿತಿ ಕೇಳಲಿದ್ದೇವೆ. ಸಿಬಿಐ, ಇಂಟರ್ಪೋಲ್​ಗಳಿಗೂ ಈ ಕುರಿತು ಮಾಹಿತಿ ನೀಡಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಶಾಲೆಗಳಿಗೆ ಬಂದ ಇಮೇಲ್ ಬೆದರಿಕೆ ಎಲ್ಲಿಂದ ಬಂದಿದೆ ಎಂದು ಈಗಲೇ ಕಂಡು ಹಿಡಿಯುವುದು ಕಷ್ಟ. ಹಾಗಾಗಿ ತಜ್ಞರುಗಳನ್ನೊಳಗೊಂಡು ವಿಶ್ಲೇಷಣೆ ಮಾಡಿಸುವ ಕೆಲಸ ಮಾಡುತ್ತಿದ್ದೇವೆ. ಇಂತಹ ಇಮೇಲ್ ಬೆದರಿಕೆಗಳು ಯುನೈಟೆಡ್ ಸ್ಟೇಟ್ಸ್, ಜರ್ಮನಿ, ಜಮೈಕಾ, ಮಲೇಷ್ಯಾ ಸೇರಿದಂತೆ ನಾನಾ ರಾಷ್ಟ್ರಗಳಲ್ಲಿ ವರದಿಯಾಗಿವೆ” ಎಂದು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪೊಲೀಸ್ ವೇಷ ಧರಿಸಿ ಉದ್ಯಮಿ ಮನೆಯಲ್ಲಿ ದರೋಡೆ: ದೂರು ದಾಖಲು

“beeble.comನ ನಾನಾ ಇಮೇಲ್ ಐಡಿಗಳಿಂದ ಬೆದರಿಕೆ ಸಂದೇಶ ಕಳುಹಿಸಲಾಗಿದೆ. ಪ್ರಕರಣದ ಬಗ್ಗೆ ಮಾಹಿತಿ ಕೋರಿ ಸಿಬಿಐನ ಇಂಟರ್‌ಪೋಲ್ ವಿಭಾಗಕ್ಕೆ ಪತ್ರ ಬರೆಯಲಾಗಿದೆ. ಡಿಸೆಂಬರ್ 1 ರಂದು ಬೆಂಗಳೂರಿನ 48 ಶಾಲೆಗಳು ಮತ್ತು ನೆರೆಯ ತಾಲೂಕುಗಳ 20 ಶಾಲೆಗಳಿಗೆ ಬೆದರಿಕೆ ಇಮೇಲ್‌ಗಳು ಬಂದಿದ್ದವು” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...