ಬೆಂಗಳೂರು | ನಿರ್ವಾಹಕನಿಗೆ ಗುದ್ದಿದ ಬಿಎಂಟಿಸಿ ಬಸ್; ಸಾವು

Date:

  • ಮೇ 9ರಂದು ಸಾಯಂಕಾಲ ನಿಲ್ದಾಣದಲ್ಲಿ ನಿರ್ವಾಹಕನಿಗೆ ಬಸ್‌ ಗುದ್ದಿದೆ
  • ಯಲಹಂಕ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ

ರಾಜ್ಯ ರಾಜಧಾನಿ ಬೆಂಗಳೂರಿನ ಯಲಹಂಕ ನಾಲ್ಕನೇ ಹಂತದ ಬಸ್‌ ನಿಲ್ದಾಣದಲ್ಲಿ ನಿರ್ವಾಹಕನಿಗೆ ಬಸ್‌ ಗುದ್ದಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೇ 9ರಂದು ಸಾಯಂಕಾಲ ಈ ಘಟನೆ ನಡೆದಿದೆ.

ಸೋಮಣ್ಣ ಸಾವನ್ನಪ್ಪಿದ ವ್ಯಕ್ತಿ. ಇವರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಘಟಕ 30ರಲ್ಲಿ ನಿರ್ವಾಹಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಯಲಹಂಕ ನಾಲ್ಕನೇ ಹಂತದ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ.

ಬಸ್‌ ನಿಲ್ದಾಣದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಿಎಂಟಿಸಿ ಬಸ್‌ ವೇಗವಾಗಿ ಕಟ್ಟಡದ ಗೋಡೆಗೆ ಗುದ್ದಿದೆ. ಇದರಿಂದ ಬಸ್‌ ಮತ್ತು ಗೋಡೆಯ ಮಧ್ಯೆ ಸಿಲುಕಿ ಕಂಡಕ್ಟರ್‌ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ. ಬಸ್‌ನಲ್ಲಿ ಇದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಬಸ್‌ ಗುದ್ದಿದ ರಭಸಕ್ಕೆ ಬಸ್‌ ನಿಲ್ದಾಣದ ಬಳಿ ಇದ್ದ ಕಟ್ಟಡದ ಗೋಡೆ ಬಿದ್ದಿದೆ ಎಂದು ತಿಳಿದುಬಂದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಮತ ಹಾಕಲು ಊರಿಗೆ ತೆರಳುವವರಿಗೆ ಎದುರಾದ ಬಸ್‌ ಕೊರತೆ

ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಬಿಎಂಟಿಸಿ ಉತ್ತರ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಮತ್ತು ಡಿಪೋ ವ್ಯವಸ್ಥಾಪಕರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದರು. ಯಲಹಂಕ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಬಿಜೆಪಿ ಭದ್ರಕೋಟೆ ಬೆಂ. ದಕ್ಷಿಣದ ಮತದಾರರು ಹೇಳುತ್ತಿರೋದೇನು?

ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಏ.26 ರಂದು...

ವಿಶೇಷ ಜಾತ್ರೆ | ತಲೆ ಮೇಲೆ ತೆಂಗಿನಕಾಯಿ ಒಡೆದುಕೊಂಡು ಮಳೆಗಾಗಿ ಪ್ರಾರ್ಥನೆ ಮಾಡಿದ ಖಾಜಿಸೊನ್ನೇನಹಳ್ಳಿ ಗ್ರಾಮಸ್ಥರು

ಅಕಾಲಿಕ ಮಳೆಯಿಂದ ರಾಜ್ಯದಲ್ಲಿ ಬಿರು ಬೇಸಿಗೆ ವಾತಾವರಣ ಸೃಷ್ಟಿಯಾಗಿದೆ. ದಿನದಿಂದ ದಿನಕ್ಕೆ...

ನೇಹಾ ಹತ್ಯೆ | ನನ್ನೊಂದಿಗೆ ಮಾತನಾಡಲು ನಿರಾಕರಿಸಿದ್ದಕ್ಕೆ ಕೊಲೆ ಮಾಡಿದೆ ಎಂದ ಆರೋಪಿ ಫಯಾಜ್ – ವರದಿ

ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ....

ಬೆಂಗಳೂರು | ಗನ್ ಇಟ್ಕೊಂಡು ಸಿಎಂಗೆ ಹಾರ : ಪಿಎಸ್​ಐ ಸೇರಿ ನಾಲ್ವರು ಅಮಾನತು

ಪ್ರಚಾರದ ವೇಳೆ ಓರ್ವ ಗನ ಇಟ್ಟುಕೊಂಡು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಹಾರ...