ಬೆಂಗಳೂರು | ಟ್ರಾಫಿಕ್ ಕುಂದುಕೊರತೆಗಳನ್ನು ಪರಿಹರಿಸಲು ಇನ್ಮುಂದೆ 112 ಗೆ ಕರೆ ಮಾಡಿ

Date:

ಬೆಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಚಟುವಟಿಕೆ ನಡೆದರೂ ಅದಕ್ಕೆ ಸಂಬಂಧಿಸಿದಂತೆ ತತ್‌ಕ್ಷಣ ದೂರು ನೀಡಲು ಪೊಲೀಸ್‌ ನಿಯಂತ್ರಣ ಕೊಠಡಿಯ ಸಹಾಯವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದಿತ್ತು. ಇದೀಗ, ಸಂಚಾರ ನಿಯಮದಲ್ಲಿ ಉಂಟಾಗುವ ಕುಂದುಕೊರತೆಗಳಿಗೂ 112ಗೆ ಕರೆ ಮಾಡಿ ದೂರು ನೀಡಬಹುದು.

ಈ ಬಗ್ಗೆ ಶುಕ್ರವಾರ ಟ್ವೀಟ್‌ ಮಾಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ, “ಸಾರ್ವಜನಿಕರು ಟ್ರಾಫಿಕ್ ಸಂಬಂಧಿತ ಸಮಸ್ಯೆಗಳನ್ನು ಈಗ 112ಗೆ ಕರೆ ಮಾಡಿದರೆ ಸೇವೆಯ ಮೂಲಕ ಪರಿಹರಿಸಲಾಗುವುದು” ಎಂದು ತಿಳಿಸಿದ್ದಾರೆ.

“ಸಭೆಯಲ್ಲಿ ನಾಗರಿಕರೊಬ್ಬರು ಸೂಚಿಸಿದಂತೆ, ಈಗ ಸಂಚಾರ ವಿಭಾಗದ ಸಮಸ್ಯೆಗಳನ್ನು ಕೂಡ ನಮ್ಮ112 ಮೂಲಕ ದಾಖಲಿಸಲು ಮತ್ತು ಪರಿಹಾರ ಕಂಡುಕೊಳ್ಳಲು ಅನುವು ಮಾಡಲಾಗಿದೆ. ಈ ರೀತಿಯ ಸಂಚಾರ ಸಮಸ್ಯೆಗಳನ್ನು ಹೊಯ್ಸಳ ಬದಲಾಗಿ ದ್ವಿಚಕ್ರ ವಾಹನ ಮೇಲಿನ ಸಂಚಾರ ವಿಭಾಗದ ಸಿಬ್ಬಂದಿ ನಿರ್ವಹಿಸಲಿದ್ದಾರೆ” ಎಂದು ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಹಿಂದೆ ‘ಮಾಸಿಕ ಜನಸಂಪರ್ಕ’ದಲ್ಲಿ ಸಂಚಾರ ವಿಭಾಗದವರು ಸಾಮಾನ್ಯವಾಗಿ ಎದುರಿಸುವ ಸಮಸ್ಯೆಗಳಿಗೆ 112 ಸೇವೆಯನ್ನು ತೆರೆಯುವ ಆಲೋಚನೆಯನ್ನು ನಾಗರಿಕರೊಬ್ಬರು ಸೂಚಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಬಿಎಂಪಿ | ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಾಲೀಕರ ಹೆಸರು ಪ್ರಕಟ

ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರ ಸುಸ್ತಿದಾರರ ಪಟ್ಟಿಯನ್ನು ಬೃಹತ್ ಬೆಂಗಳೂರು ಮಹಾನಗರ...

ಅನ್ನ, ಆರೋಗ್ಯ, ಆಶ್ರಯ, ಅಕ್ಷರವೇ ನಮ್ಮ ಸರ್ಕಾರದ ಮೂಲಮಂತ್ರ: ಸಿಎಂ ಸಿದ್ಧರಾಮಯ್ಯ

“ಅನ್ನ, ಆರೋಗ್ಯ, ಆಶ್ರಯ, ಅಕ್ಷರ ಇದೇ ನಮ್ಮ ಸರ್ಕಾರದ ಮೂಲಮಂತ್ರವಾಗಿದ್ದು, ಬಡವರ...

ಮಾರ್ಚ್ 14ರ ನಂತರವೂ 60% ಕನ್ನಡವುಳ್ಳ ನಾಮಫಲಕ ಹಾಕದಿದ್ರೆ ಮತ್ತೆ ಹೋರಾಟ; ಕರವೇ ಎಚ್ಚರಿಕೆ

ಮಳಿಗೆಗಳು, ವಾಣಿಜ್ಯ ಕಟ್ಟಡಗಳಲ್ಲಿ ಶೇ.60ರಷ್ಟು ಕನ್ನಡವುಳ್ಳ ನಾಮಫಲಕ ಅಳವಡಿಸಿಕೊಳ್ಳಲು ನೀಡಿದ್ದ ಗಡುವನ್ನ...

ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ಪ್ರಕರಣ: ಸಿಸಿಬಿ ತನಿಖೆಗೆ ವರ್ಗಾಯಿಸಿ ಆದೇಶ

ಬೆಂಗಳೂರಿನ ಕುಂದಲಹಳ್ಳಿ ಬಳಿಯ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಪೋಟ ಪ್ರಕರಣದ ತನಿಖೆಯನ್ನು...