ಬೆಂಗಳೂರು | ₹30 ಲಕ್ಷ ಮೌಲ್ಯದ ಗಾಂಜಾ ವಶ ; ಓರ್ವನ ಬಂಧನ

Date:

Advertisements
  • ₹30 ಲಕ್ಷ ಮೌಲ್ಯದ 70 ಕೆಜಿ ಗಾಂಜಾವನ್ನು ಸಾಗಿಸುತ್ತಿದ್ದರು
  • ಸಹಾನಿ ವಿರುದ್ಧ ಎನ್‌ಡಿಪಿಎಸ್‌ ಅಡಿಯಲ್ಲಿ ಪ್ರಕರಣ ದಾಖಲು

ರಾಜಧಾನಿ ಬೆಂಗಳೂರಿನ ಸಾರ್ವಜನಿಕ ಸ್ಥಳಗಳಲ್ಲಿ ಮಾರಾಟ ಮಾಡುತ್ತಿದ್ದ ₹30 ಲಕ್ಷ ಮೌಲ್ಯದ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದು, 26 ವರ್ಷದ ಯುವಕನನ್ನು ಬಂಧಿಸಿದ್ದಾರೆ.

ಒಡಿಶಾದ ಕಂಧಮಾಲ್ ಜಿಲ್ಲೆಯ ರಾಜ್ ಕಿಶೋರ್ ಸಹಾನಿ ಬಂಧಿತ ಆರೋಪಿ. ಏಪ್ರಿಲ್ 19 ರಂದು ಸಂಜೆ 4.30 ರ ಸುಮಾರಿಗೆ ಕಾಟನ್‌ಪೇಟೆಯ ಬಾಳೆಹಣ್ಣು ಮಾರ್ಕೆಟ್ ಪಾರ್ಕಿಂಗ್ ಸ್ಥಳದಲ್ಲಿ ಓಡಿಶಾದಿಂದ ಗಾಂಜಾವನ್ನು ಅಕ್ರಮವಾಗಿ ತಂದು ಮಾರಾಟ ಮಾಡಲಾಗುತ್ತಿತ್ತು. ಈ ವೇಳೆ ಪೊಲೀಸರು ಆರೋಪಿಗಳನ್ನು ಮತ್ತು ಗಾಂಜಾವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

“₹30 ಲಕ್ಷ ಮೌಲ್ಯದ 70 ಕೆಜಿ ಗಾಂಜಾವನ್ನು ಸಾಗಿಸುತ್ತಿದ್ದರು. ನಿಷಿದ್ಧ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಹಾನಿ ವಿರುದ್ಧ ಎನ್‌ಡಿಪಿಎಸ್‌ (ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ‘ಗಾಲ್ಫ್ ಬಾಲ್’; ಚಾಲಕನಿಗೆ ಗಾಯ

ಬೆಂಗಳೂರಿನಲ್ಲಿ ಮಾದಕ ವ್ಯಸನಿಗಳಿಗೆ ನಿಯಮಿತವಾಗಿ ಗಾಂಜಾ ಸರಬರಾಜು ಮಾಡುತ್ತಿದ್ದರು. ಏ. 15ರಂದು ಗಾಂಜಾ ಸೇವನೆಯಿಂದ ಬಂಧಿತನಾದ ಮತ್ತಿಕೆರೆ ನಿವಾಸಿ ಸುಭಾಷ್ ಎನ್ (26) ಎಂಬುವರಿಂದ ಮಾಹಿತಿ ಪಡೆದು ನಂತರ ಪೊಲೀಸರು ಆರೋಪಿಗಾಗಿ ಶೋಧ ನಡೆಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X