ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ 553 ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ಸಿಸಿಬಿ ಪೊಲೀಸರು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ಡಿಸಿಪಿ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, 553 ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್‌ಗಳ ಪೈಕಿ 131 ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳ ಮಾಲೀಕರು ನಿಯಮಗಳನ್ನು ಉಲ್ಲಂಘಿಸಿ ವ್ಯವಹಾರ ನಡೆಸುತ್ತಿರುವುದು ಸಿಸಿಬಿ ದಾಳಿ ವೇಳೆ ಪತ್ತೆಯಾಗಿದೆ.
ನಿಯಮ ಉಲ್ಲಂಘಿಸಿದ ಹೋಟೆಲ್, ರೆಸ್ಟೋರೆಂಟ್ ಹಾಗೂ ಬಾರ್ಗಳ ವಿರುದ್ಧ ಕೋಟ್ಪಾ, ಜೆಜೆ ಆ್ಯಕ್ಟ್ ಅಡಿ 2,300ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.