ಬೆಂಗಳೂರು | ರೌಡಿಶೀಟರ್​, ಮೀಟರ್​ ಬಡ್ಡಿ ದಂಧೆ ನಡೆಸುತ್ತಿದ್ದವರ ಮನೆ ಮೇಲೆ ಸಿಸಿಬಿ ದಾಳಿ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎಗ್ಗಿಲ್ಲದೇ ಮೀಟರ್ ಬಡ್ಡಿ ದಂಧೆ ನಡೆಯುತ್ತಿದೆ. ಈ ನಡುವೆ ಸಿಸಿಬಿ ಪೊಲೀಸರು ರೌಡಿಶೀಟರ್ ಮತ್ತು ಮೀಟರ್‌ ಬಡ್ಡಿ ದಂಧೆ ನಡೆಸುತ್ತಿದ್ದವರ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಅಮಾಯಕರಿಗೆ ಹೆದರಿಸಿ, ಬೆದರಿಸಿ ನಿವೇಶನ ಕಬಳಿಸುವುದು, ಮೀಟರ್ ಬಡ್ಡಿ ದಂಧೆ ನಡೆಸುವುದು ಸೇರಿದಂತೆ ಹಲವಾರು ಆರೋಪಗಳು ಅನ್ನಪೂರ್ಣೇಶ್ವರಿ ನಗರ ರೌಡಿಶೀಟರ್ ಬೋರ್ ವೆಲ್ ಅನಿಲ್ ಮೇಲೆ ಕೇಳಿಬಂದಿದ್ದವು. ಈ ಹಿನ್ನೆಲೆ, ಅನಿಲ್ ಮನೆ ಮೇಲೆ ಸಿಸಿಬಿ ತಂಡ ದಾಳಿ ನಡೆಸಿದೆ. ಅಲ್ಲದೇ, ದಾಳಿ ವೇಳೆ, ಅನಿಲ್ ಮನೆಯಲ್ಲಿ ತಕರಾರು ಆಸ್ತಿಪತ್ರ, ಹಲವು ಚೆಕ್​ಗಳು ಪತ್ತೆಯಾಗಿವೆ. ಸದ್ಯ ಸಿಸಿಬಿ ಪೊಲೀಸರು ಅನಿಲ್​ ಮನೆಯಲ್ಲಿ ಸಿಕ್ಕಿರುವ ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಸಣ ಕಾರ್ಮಿಕರ ಬೇಡಿಕೆಗಳನ್ನು ಸರ್ಕಾರ ಈಡೇರಿಸಲಿ: ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಜತೆಗೆ, ಯಶವಂತಪುರ ರೌಡಿಶೀಟರ್ ಗಿರೀಶ್ ಅಲಿಯಾಸ್​​​ ರಾಬರಿ ಗಿರಿ, ವಿವೇಕನಗರ ರೌಡಿಶೀಟರ್​ಗಳಾದ ನಾರಾಯಣ, ಹೇಮಂತ್, ರಾಮು, ಸೋಲದೇವನಹಳ್ಳಿ ರೌಡಿಶೀಟರ್ ತಿಮ್ಮ ಸೇರಿ ಅನೇಕರ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ದಿನದ ಲೆಕ್ಕದಲ್ಲಿ ಬಡ್ಡಿ ವ್ಯವಹಾರ ನಡೆಸುತ್ತಿದ್ದ ಕೃಷ್ಣೇಗೌಡ ಕಚೇರಿ ಮೇಲೂ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಅಗ್ರಿಮೆಂಟ್ ಪೇಪರ್ ಮತ್ತು ಚೆಕ್​ಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

545 ಪಿಎಸ್‌ಐ ಮರುಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟ

545 ಪಿಎಸ್‌ಐ ಹುದ್ದೆಗಳಿಗೆ ನಡೆಸಲಾಗಿದ್ದ ಮರುಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಮಾರ್ಚ್‌ 1...

ದ್ವಿತೀಯ ಪಿಯುಸಿ | ಮೊದಲ ದಿನ 18,231 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು

ರಾಜ್ಯಾದ್ಯಂತ ಮಾರ್ಚ್‌ 1ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಮೊದಲ ದಿನ...

ಬಿಬಿಎಂಪಿ | ನೀರಿನ ಟ್ಯಾಂಕರ್ ಸ್ವಯಂ ನೋಂದಣಿಗೆ ಮಾರ್ಚ್‌ 7 ಕೊನೆ ದಿನ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ನೀರು ಪೂರೈಕೆ ಮಾಡುವ...

ರಾಮೇಶ್ವರಂ ಕೆಫೆ | ಎನ್‌ಐಎ, ಐಬಿಗೆ ಸ್ಪೋಟದ ಬಗ್ಗೆ ಮಾಹಿತಿ: ಅಲೋಕ್​ ಮೋಹನ್

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಪೋಟದಲ್ಲಿ ಒಟ್ಟು 9 ಮಂದಿ ಗಂಭೀರವಾಗಿ...