ಬೆಂಗಳೂರು | ಇನ್ನೂ ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ

Date:

Advertisements
  • ಬೆಂಗಳೂರಿನಲ್ಲಿ ಏ.3ರ ರಾತ್ರಿ ಧಾರಾಕಾರ ಮಳೆಯಾಗಿದೆ
  • ಕಲಬುರಗಿಯಲ್ಲಿ 39.4ಡಿ.ಸೆ​ ಅತಿ ಗರಿಷ್ಠ ಉಷ್ಣಾಂಶ ದಾಖಲು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ನಾಲ್ಕು ದಿನಗಳಿಂದ ಮೋಡ ಕವಿದ ವಾತಾವರಣವಿದ್ದು, ಏ.3ರ ರಾತ್ರಿ ಧಾರಾಕಾರ ಮಳೆಯಾಗಿದೆ. ಇನ್ನೂ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸೋಮವಾರ ಶಿವಾನಂದ ಸರ್ಕಲ್, ಮಲ್ಲೇಶ್ವರಂ, ವಿದ್ಯಾರಣ್ಯಪುರ, ಯಶವಂತಪುರ, ಕುರುಬರಹಳ್ಳಿ, ಮಹಾಲಕ್ಷ್ಮಿ ಲೇಔಟ್, ಯಶವಂತಪುರ, ಕೆ ಆರ್ ಮಾರ್ಕೆಟ್, ವಿಜಯನಗರ, ಪ್ರಕಾಶನಗರ, ರಾಜಾಜಿನಗರ, ಮಾಗಡಿ ರೋಡ್, ಗೋವಿಂದರಾಜ ನಗರ, ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಜೋರು ಮಳೆಯಾಗಿದೆ.

ದಕ್ಷಿಣ ಒಳನಾಡು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ಕಲಬುರಗಿಯಲ್ಲಿ 39.4 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ಹೇಳಿದೆ.

Advertisements
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪೊಲೀಸರ ಬಂಧನದ ಭೀತಿ; ಮೇಲ್ಸೇತುವೆಯಿಂದ ಬಿದ್ದು ವ್ಯಕ್ತಿ ಸಾವು!

ಎಚ್​ಎಎಲ್​ನಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನಲ್ಲಿ ರಾತ್ರಿ 9 ಗಂಟೆಯ ಸುಮಾರಿಗೆ ದಿಢೀರ್ ಮಳೆ ಪ್ರಾರಂಭವಾಯಿತು. ಇದರಿಂದ ಕಚೇರಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವಾಹನ ಸವಾರರು ಕೆಲಕಾಲ ಪರದಾಡುವಂತಾಯಿತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

ಬೆಂಗಳೂರು ಮೆಟ್ರೋ: ನಾಳೆ ಹಳದಿ ಮಾರ್ಗದಲ್ಲಿ ಬೆಳಿಗ್ಗೆ 5ಕ್ಕೆ ಸಂಚಾರ ಆರಂಭ

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್‌ ಲಿಮಿಟೆಡ್‌ (ಬಿಎಂಆರ್‌ಸಿಎಲ್‌) ಹಳದಿ ಮಾರ್ಗದಲ್ಲಿ ಸೋಮವಾರ...

Download Eedina App Android / iOS

X