ಬೆಂಗಳೂರು | ಕಸ ಸುರಿವ ‘ತೊಟ್ಟಿ’ಯಾದ ಚಿಕ್ಕಪೇಟೆ ಮುಖ್ಯ ರಸ್ತೆ!

Date:

ಬೆಂಗಳೂರಿನ ಅತಿ ಹೆಚ್ಚು ಜನನಿಬಿಡ ಪ್ರದೇಶಗಳಲ್ಲಿ ಒಂದಾದ, ವ್ಯಾಪಾರ ಚಟುವಟಿಕೆ ತಾಣವಾಗಿರುವ ಚಿಕ್ಕಪೇಟೆಯಲ್ಲಿ ರಾಶಿ ರಾಶಿ ಕಸ ಬಿದ್ದಿದೆ. ಚಿಕ್ಕಪೇಟೆಯ ಮುಖ್ಯರಸ್ತೆಯು ಕಸ ಹಾಕುವ ‘ಡಂಪಿಂಗ್ ಯಾರ್ಡ್‌’ಆಗಿ ಬದಲಾಗಿದೆ.

- Advertisement -

ಚಿಕ್ಕಪೇಟೆ ಮುಖ್ಯರಸ್ತೆಯನ್ನು ದುರಸ್ತಿ ಮಾಡಲು, ಒಂದು ಬದಿಯ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಸುಮಾರು ಮೂರು ತಿಂಗಳೇ ಕಳೆದಿವೆ. ರಸ್ತೆಯನ್ನು ಕಿತ್ತು, ಸಮತಟ್ಟು ಮಾಡಲಾಗಿದೆ. ಈ ನಡುವೆ ಕಾಮಗಾರಿ ಸ್ಥಗಿತಗೊಂಡಿದ್ದು, ಕೆಲಸಗಳು ನಡೆಯುತ್ತಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದೇ ಸಮಯದಲ್ಲಿ ಮಳೆಯೂ ಸುರಿಯುತ್ತಿದ್ದು, ವ್ಯಾಪಾರಿಗಳಿಗೆ ರಸ್ತೆಯೇ ಕಸದ ಸುರಿಯುವ ತಾಣವಾಗಿದೆ. ಹಲವಾರು ದಿನಗಳಿಂದ ರಸ್ತೆಯಲ್ಲಿ ಕಸ ಸುರಿಯಲಾಗಿದ್ದು, ಈಗ ರಸ್ತೆ ಕಸದ ತೊಟ್ಟಿಯಾಗಿ ಮಾರ್ಪಟ್ಟಿದೆ. ಮಳೆನೀರಿನಲ್ಲಿ ತ್ಯಾಜ್ಯ ಕೊಳೆದು ವಾಸನೆ ಹರಡಲಾರಂಭಿಸಿದ. ಜೊತೆಗೆ, ಸೊಳ್ಳೆಗಳ ಹಾವಳಿಯೂ ಹೆಚ್ಚುತ್ತಿದೆ.

ಈಗಾಗಲೇ, ಡೆಂಗ್ಯೂ ಜ್ವರದ ಹಾವಳಿ ಬೆಂಗಳೂರಿನಲ್ಲಿ ಹೆಚ್ಚಾಗಿದ್ದು, ಜನರಲ್ಲಿ ಆತಂಕ ಹೆಚ್ಚಿಸಿದೆ. ಇಂತಹ ಸಮಯದಲ್ಲಿ ಹೆಚ್ಚು ಜನರು ಓಡಾಡುವ ಸ್ಥಳದಲ್ಲಿ ರಾಶಿ-ರಾಶಿ ಕಸ ಬಿದ್ದಿದ್ದರೂ ಅಧಿಕಾರಿಗಳು ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ಧೋರಣೆ ತಳೆದಿದ್ದಾರೆ.

ಚಿಕ್ಕಪೇಟೆಯಲ್ಲಿ ಕಸದ ರಾಶಿ ಬಿದ್ದಿರುವ ವಿಡಿಯೋವನ್ನು ಆಮ್ ಆದ್ಮಿ ಪಕ್ಷ (ಎಎಪಿ) ಹಂಚಿಕೊಂಡಿದೆ. “ಬೆಂಗಳೂರಿನ ಜನನಿಬಿಡ ಪ್ರದೇಶವಾದ ಚಿಕ್ಕಪೇಟೆಯಲ್ಲಿ ಕಸದ ರಾಶಿ ಹೀಗೆ ರಸ್ತೆ ಮೇಲೆ ಹರಡಿರುವುದಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಮತ್ತು ಬಿಬಿಎಂಪಿಗೆ ಧನ್ಯವಾದಗಳು. ಮಾನ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರೇ ಚಿಕ್ಕಪೇಟೆ ಖಾಯಿಲೆಗಳ ಗೂಡಾಗುವುದರಲ್ಲಿದೆ, ಬಿಜೆಪಿ ಎಂಎಲ್‌ಎ ಉದಯ್ ಗರುಡಾಚಾರ್ ಅವರೇ ಮನೆ ಬಿಟ್ಟು ಹೊರಗೆ ಬನ್ನಿ ಇನ್ನಾದರು ಕಾರ್ಯಪ್ರವೃತ್ತರಾಗಿ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋಮನಹಳ್ಳಿಯ ಸುಷ್ಮಗೆ ಸಂದ ಡಾಕ್ಟರೇಟ್ ಗೌರವ

ಬೆಂಗಳೂರು ವಿಶ್ವವಿದ್ಯಾಲಯದ ಗ್ರಾಮೀಣ ಅಭಿವೃದ್ಧಿ ಅಧ್ಯಯನ ಕೇಂದ್ರದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ...

ಬಿಡದಿ ಟೌನ್‌ಶಿಪ್ ವಿರುದ್ಧ ಹೋರಾಟ: ಉಪವಾಸನಿರತ ಮೂವರು ರೈತರು ತೀವ್ರ ಅಸ್ವಸ್ಥ

ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ – ಬಿಡದಿ ಟೌನ್‌ಶಿಪ್‌) ಯೋಜನೆ...

ಗುತ್ತಿಗೆ ಪದ್ಧತಿ ರದ್ದತಿಗೆ ಆಗ್ರಹ: ಸೆ. 23ಕ್ಕೆ ಫ್ರೀಡಂ ಪಾರ್ಕ್‌ನಲ್ಲಿ BWSSB ಕಾರ್ಮಿಕರ ಬೃಹತ್ ಹೋರಾಟ

ಬೆಂಗಳೂರು ನಗರದ ಕೋಟ್ಯಂತರ ಜನರಿಗೆ ಕುಡಿಯುವ ನೀರು ಪೂರೈಕೆ ಹಾಗೂ ಒಳಚರಂಡಿ...

ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ: ವಾಹನ ಸವಾರರ ಪರದಾಟ

ರಾಜಧಾನಿ ಬೆಂಗಳೂರಿನ ವಿವಿಧೆಡೆ ಸೋಮವಾರ ಸಂಜೆ ಏಕಾಏಕಿ ಹಠಾತ್‌ ಧಾರಾಕಾರ ಮಳೆಯಾಗಿದ್ದು,...