ಬೆಂಗಳೂರು | ಫುಟ್‌ಪಾತ್‌ನಲ್ಲಿದ್ದ ಅಂಗಡಿಗಳ ತೆರವು; ಬೀದಿ ಬದಿ ವ್ಯಾಪಾರಿಗಳ ಆಕ್ರಂದನ

Date:

ಬೆಂಗಳೂರಿನಲ್ಲಿ ಬೀದಿ ಬದಿ ವ್ಯಾಪಾರಿಗಳ ಮೇಲೆ ಬಿಬಿಎಂಪಿ ಬುಲ್ಡೋಜರ್‌ಗಳು ಮತ್ತೆ ಸದ್ದು ಮಾಡುತ್ತಿವೆ. ಜಯನಗರದಲ್ಲಿ ಫುಟ್‌ಪಾತ್‌ನಲ್ಲಿ ಬಟ್ಟೆ ಸೇರಿದಂತೆ ವಿವಿಧ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಬೀದಿ ಬದಿ ವ್ಯಾಪಾರಿಗಳ ಅಂಗಡಿಗಳನ್ನು ಬಿಬಿಎಂಪಿ ತೆರವುಗೊಳಿಸಿದೆ. ಪರಿಣಾಮ, ಬೀದಿ ಬದಿ ವ್ಯಾಪಾರಿಗಳು ಬೀದಿ ಪಾಲಾಗಿದ್ದು, ಭವಿಷ್ಯದ ಕುರಿತು ಕಂಗಾಲಾಗಿದ್ದಾರೆ.

- Advertisement -

ಜಯನಗರದ ಬಿಡಿಎ ಕಾಂಪ್ಲೆಕ್ಸ್ ಬಳಿ ಬೀದಿಬದಿ ವ್ಯಾಪಾರಿಗಳ ಅಂಗಡಿಗಳನ್ನು ಅಧಿಕಾರಿಗಳು ತೆರವುಗೊಳಿಸಿದ್ದಾರೆ. ಈ ವೇಳೆ, ಬಿಬಿಎಂಪಿ ಅಧಿಕಾರಿಗಳ ವಿರುದ್ದ ವ್ಯಾಪಾರಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜಕೀಯದಲ್ಲಿ ಮಹಿಳೆಯರ ಮೇಲೆ ಗಂಡಾಳ್ವಿಕೆಯ ಸಾಂಸ್ಕೃತಿಕ ರಾಜಕಾರಣ

ರಾಜಕೀಯದ ಮೇಲೆ ಪುರುಷ ಪ್ರಧಾನ ಹಿಡಿತ ಹೇಗೆ ನಿರ್ಮಾಣವಾಯಿತು? ರಾಜಕೀಯವೆಂದರೆ, ಜನರ ಬದುಕಿನ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾರ್ವಜನಿಕ ಕ್ಷೇತ್ರ. ಆದರೆ ಶತಮಾನಗಳ ಕಾಲ ನಮ್ಮ ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆ ಅದನ್ನು...

ಅಂಗಡಿ ತರವಿನಿಂದ ಕಂಗಾಲಾಗಿರುವ ವ್ಯಾಪಾರಿಯೊಬ್ಬರು, “ನಾನೊಬ್ಬ ಅಂಗವಿಕಲ. ಗಂಧದ ಕಟ್ಟಿ ವ್ಯಾಪಾರ ಮಾಡಿಕೊಂಡು ಜೀವನ ಮಾಡುತ್ತಿದೆ. ಆದರೆ, ಇವತ್ತು ನನ್ನ ಅಂಗಡಿಯನ್ನ ತೆರವು ಮಾಡಿದ್ದಾರೆ. ಮುಂದೆ ನನ್ನ ಜೀವನದ ಗತಿ ಏನು. ಏನು ಮಾಡಬೇಕೆಂಬುದೇ ತೋಚುತ್ತಿಲ್ಲ” ಎಂದು ಅಳಲು ತೋಡಿಸಿದ್ದಾರೆ.

“ಫುಟ್‌ಪಾತ್‌ನಲ್ಲಿ ಹಲವಾರು ವ್ಯಾಪಾರಿಗಳು ಅಕ್ರಮವಾಗಿ ಅಂಗಡಿ ಹಾಕಿಕೊಂಡು ವ್ಯಾಪಾರ ಮಾಡುತ್ತಿದ್ದರು. ಅವರನ್ನು ತೆರವುಗೊಳಿಸಲು ಈ ಹಿಂದೆಯೇ ತಿಳಿಸಲಾಗಿತ್ತು. ಮೂರು ತಿಂಗಳ ಹಿಂದೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸೂಚಿಸಲಾಗಿತ್ತು. ಇದೀಗ, ಸುಮಾರು 200 ಅನಧಿಕೃತ ಮಳಿಗೆಗಳನ್ನು ತೆರವುಗೊಳಿಸಲಾಗಿದೆ” ಎಂದು ಅಧಿಕಾರಿ ಸೋಮಶೇಖರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಪ್ರಮುಖ ರಾಜಕಾಲುವೆಗಳು ಸೇರಿದಂತೆ ಸರ್ಕಾರಿ ಭೂಮಿಯನ್ನು ಹಲವರು ಒತ್ತುವರಿ ಮಾಡಿಕೊಂಡಿದ್ದಾರೆ. ಅವುಗಳನ್ನು ತೆರವುಗೊಳಿಸುವಂತೆ ನಗರವಾಸಿಗಳು ಒತ್ತಾಯಿಸುತ್ತಿದ್ದಾರೆ. ಆದರೆ, ಉಳ್ಳವರ ಮನೆಯ ಕಾಂಪೌಂಡ್‌ ದಾಟದ ಅಧಿಕಾರಿಗಳು ಬೀದಿ ಬದಿ ವ್ಯಾಪಾರಿಗಳ ಬೆನ್ನತ್ತಿದ್ದಾರೆಂದು ಆಕ್ರೋಶ ವ್ಯಕ್ತವಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೊನ್ನಾವರ | ಬಂಗಾರಮಕ್ಕಿಯಲ್ಲಿ ಶ್ರೀ ವೀರಾಂಜನೇಯ ಸ್ವಾಮಿ ದರ್ಶನ ಪಡೆದ ಸ್ಮೃತಿ ಮಂಧಾನ

ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಹಾಗೂ ಖ್ಯಾತ ಕ್ರಿಕೆಟರ್ ಸ್ಮೃತಿ...

ಜಿಲ್ಲಾ ಕಾಂಗ್ರೆಸ್‌ನಿಂದ ಅ.5ಕ್ಕೆ ಬೃಹತ್ ಪ್ರತಿಭಟನಾ ಮೆರವಣಿಗೆ: ಜಿಲ್ಲಾ‌ಧ್ಯಕ್ಷ ಮ್ಯಾಕಲ ನಾರಾಯಣಸ್ವಾಮಿ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಅವೈಜ್ಞಾನಿಕವಾಗಿದ್ದು, ಮತದಾರರ ಹೆಸರನ್ನು...

ಶಿವಮೊಗ್ಗ | ಬ್ಯಾಟರಿ, ಕಾಪರ್ ವೈರ್‌ ಕಳವು: ಆರೋಪಿಗೆ 3 ತಿಂಗಳ ಸಜೆ 25,000 ರೂ. ದಂಡ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಬೊಮ್ಮಕಟ್ಟೆ ವನ್ಯ ವೃಕ್ಷೋದ್ಯಾನವನದ ರಸ್ತೆ ಸಮೀಪ ಕೆ.ಇ.ಬಿ....

ಶಿವಮೊಗ್ಗ | ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು, ಚಾಲಕನ ಸಮಯಪ್ರಜ್ಞೆಯಿಂದಾಗಿ ಭಾರಿ...