ಬೆಂಗಳೂರು | ದೆಹಲಿಗೆ ಅಕ್ರಮವಾಗಿ ಸಾಗಿಸುತ್ತಿದ್ದ ₹26 ಕೋಟಿ ಮೌಲ್ಯದ ಕೊಕೇನ್ ವಶ

Date:

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಅಕ್ರಮವಾಗಿ ಸಾಗಿಸುತ್ತಿದ್ದ ₹26 ಕೋಟಿ ಮೌಲ್ಯದ 2.6 ಕೆಜಿ ಕೊಕೇನ್ ಅನ್ನು ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್‌ಐ) ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

- Advertisement -

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡಿಆರ್‌ಐ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಕೀನ್ಯಾ ಮೂಲದ 36 ವರ್ಷದ ಮಹಿಳೆಯೊಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಪ್ರವಾಸಿ ವೀಸಾ ಮೇರೆಗೆ ಕೀನ್ಯಾ ಮೂಲದ ಆ ಮಹಿಳೆ ದೇಶಕ್ಕೆ ಬಂದಿದ್ದರು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

ಮಹಿಳೆ ಲಗೇಜ್ ಬ್ಯಾಗ್‌ನಲ್ಲಿ ಕೊಕೇನ್ ಅನ್ನು ಮರೆಮಾಚಿ ಬೆಂಗಳೂರಿನಿಂದ ದೆಹಲಿಗೆ ಸಾಗಿಸಲು ಯತ್ನಿಸುತ್ತಿದ್ದಳು. ಇಂಡಿಗೋ ವಿಮಾನದಲ್ಲಿ ದೆಹಲಿಗೆ ತೆರಳಲು ಚೆಕ್ ಇನ್ ಆಗುತ್ತಿದ್ದ ವೇಳೆ ಅಧಿಕಾರಿಗಳ ಕೈಗೆ ಆರೋಪಿ ಸಿಕ್ಕಿಬಿದ್ದಿದ್ದಾಳೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರಿನ 8 ವಲಯಗಳಲ್ಲಿ ಮರಗಳ ಗಣತಿಗೆ ಮುಂದಾದ ಬಿಬಿಎಂಪಿ

ಅಕ್ರಮವಾಗಿ ಸಾಗಿಸುತ್ತಿದ್ದ 2.6 ಕೆಜಿ ಕೊಕೇನ್ ಜತೆಗೆ ಡಿಆರ್‌ಐ ಅಧಿಕಾರಿಗಳು ಮಹಿಳೆಯನ್ನು ವಶಕ್ಕೆ ಪಡೆದು ಬೆಂಗಳೂರಿನ ಡಿಆರ್‌ಐ ಕಚೇರಿಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾರಕಾಸ್ತ್ರಗಳಿಂದ ವ್ಯಕ್ತಿ ಕೊಲೆ

ಮಾರಕಾಸ್ತ್ರಗಳಿಂದ ಇರ್ಫಾನ್ ಮಲ್ಲಿಕ್‌ ಸಾಬ್ ತಹಶೀಲ್ದಾರ್ (34) ಎಂಭ ವ್ಯಕ್ತಿಯನ್ನು ಕೊಲೆ...

ಧಾರವಾಡ | ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ: ಎಸ್.ಎಫ್. ಸಿದ್ದನಗೌಡರ

"ಇಂದಿನ ಒತ್ತಡದ ಜೀವನಶೈಲಿಯಲ್ಲಿ ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ...

ಧಾರವಾಡ | ಅಕ್ಟೋಬರ್ 23ರಂದು ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ

ಚುನಾವಣಾ ಆಯೋಗವು ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ ವೇಳಾಪಟ್ಟಿ ಪ್ರಕಟಿಸಿದ್ದು ಅಕ್ಟೋಬರ್...

ಹಾವೇರಿ | ಸತ್ತಳೆಂದು ಅಂತ್ಯಕ್ರಿಯೆ ಸಿದ್ದತೆ ವೇಳೆ, ಸಾವಿನಂಚಿನಿಂದ ಪಾರಾದ ಅಜ್ಜಿ

ಅಜ್ಜಿ ಸತ್ತಳೆಂದು ಕುಟುಂಬಸ್ಥರೆಲ್ಲಾ ಅಂತ್ಯಸಂಸ್ಕಾರಕ್ಕೆ ಮುಂದಾಗಿದ್ರು. ಕೊನೇ ಕ್ಷಣದಲ್ಲಿ ಜೀವಂತ ಇದ್ದ ಮಹಿಳೆ...