ಬೆಂಗಳೂರು | ಕಲುಷಿತ ನೀರು ಪೂರೈಕೆ; ಶುದ್ಧ ನೀರಿಗಾಗಿ ಮೈಕಲ್ ಪಾಳ್ಯ ನಿವಾಸಿಗಳ ಪರದಾಟ

Date:

  • ನೀರು ಕಲುಷಿತವಾಗುತ್ತಿರುವ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳದ ಬಿಡಬ್ಲೂಎಸ್‌ಎಸ್‌ಬಿ
  • ಇನ್ನೆರಡು ದಿನಗಳಲ್ಲಿ ಕಲುಷಿತ ನೀರಿನ ಸಮಸ್ಯೆ ಪರಿಹರಿಸಲಾಗುವುದು ಎಂದ ಅಧಿಕಾರಿ

ರಾಜ್ಯ ರಾಜಧಾನಿ ಬೆಂಗಳೂರಿನ ಇಂದಿರಾನಗರದ ಮೈಕೆಲ್ ಪಾಳ್ಯದ ನಿವಾಸಿಗಳಿಗೆ ಕಳೆದ ಮೂರು ತಿಂಗಳಿನಿಂದ ಕಲುಷಿತ ನೀರು ಸರಬರಾಜು ಆಗುತ್ತಿದ್ದು, ಈ ನೀರು ಸೇವನೆಯಿಂದ ಹಲವು ಜನರು ಅನಾರೋಗ್ಯಕ್ಕೀಡಾಗಿದ್ದಾರೆ.

- Advertisement -

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲೂಎಸ್‌ಎಸ್‌ಬಿ) ನೀರು ಕಲುಷಿತವಾಗುತ್ತಿರುವ ಸಮಸ್ಯೆ ಪರಿಹರಿಸಲು ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ನಿವಾಸಿಗಳು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹವ್ಯಾಸದಿಂದ ಉದ್ಯಮದತ್ತ: ಶಿರಸಿ ಮಹಿಳೆಯರ ʻಡೇರೆʼ ಕೃಷಿಗೆ ಸ್ವಾವಲಂಬನೆಯ...

ಮನೆಯಂಗಳದ ಅಂದ ಹೆಚ್ಚಿಸುವ ಹೂವಷ್ಟೇ ಆಗಿದ್ದ ಡೇರೆ ಹೂವು (ಡೇಲಿಯಾ), ಇದೀಗ ಮಲೆನಾಡಿನ ಮಹಿಳೆಯರ ಪಾಲಿಗೆ ಹೊಸ ಆದಾಯದ ಸಾಧ್ಯತೆಗಳನ್ನು ತೆರೆದಿಡುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ ಹಾಗೂ ಶಿವಮೊಗ್ಗ...

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

“ಸುಮಾರು 200 ಮನೆಗಳ ಮೇಲೆ ಈ ಕಲುಷಿತ ನೀರು ಪರಿಣಾಮ ಬೀರಿದೆ. ಈ ನೀರು ಕುಡಿದು ಕೆಲವು ನಿವಾಸಿಗಳು ಅನಾರೋಗ್ಯಕ್ಕೀಡಾಗಿದ್ದಾರೆ. ಈ ಬಗ್ಗೆ ಬಿಡಬ್ಲೂಎಸ್‌ಎಸ್‌ಬಿಗೆ ಪ್ರತಿ ಬಾರಿ ದೂರು ನೀಡಿದಾಗ, ಅಧಿಕಾರಿಗಳು ಬಂದು ಸಮಸ್ಯೆಯನ್ನು ಪರಿಹರಿಸಲಾಗಿದೆ ಎನ್ನುತ್ತಾರೆ. ಆದರೆ, ಮುಂದಿನ ಮೂರು ದಿನಗಳಲ್ಲಿ ಮತ್ತೆ ಸಮಸ್ಯೆ ಮರುಕಳಿಸುತ್ತದೆ. ನಿವಾಸಿಗಳು ಮತ್ತೆ ಸಂಪ್ ಮತ್ತು ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸಬೇಕಾಗಿದೆ. ಸಮಸ್ಯೆ ಬಗೆಹರಿದಿದೆ ಎಂದು ಭಾವಿಸಿ ಹಲವರು ನೀರು ಸೇವಿಸಿ ಅಸ್ವಸ್ಥರಾಗಿದ್ದಾರೆ” ಎಂದು ಸ್ಥಳೀಯ ನಿವಾಸಿ ಅಲೆಕ್ಸಾಂಡರ್ ಪಿಜೆ ಹೇಳಿದರು.

“ಬಿಎಬ್ಲೂಎಸ್‌ಎಸ್‌ಬಿ ಕೇವಲ ತಾತ್ಕಾಲಿಕ ಕ್ರಮಗಳನ್ನು ತೆಗೆದುಕೊಂಡಿದೆ. ಮಾಲಿನ್ಯದ ಮೂಲವನ್ನು ಗುರುತಿಸಲು ವಿಫಲವಾಗಿದೆ. ಆದರೆ, ಬಿಡಬ್ಲ್ಯುಎಸ್‌ಎಸ್‌ಬಿ ಅಧಿಕಾರಿಗಳು ಈ ಬಗ್ಗೆ ಪರಿಶೀಲನೆ ನಡೆಸುತ್ತಿದ್ದು, ಎರಡು ದಿನಗಳಲ್ಲಿ ಸಮಸ್ಯೆ ಬಗೆಹರಿಸಲಾಗುವುದು ಎಂದು ತಿಳಿಸಿದ್ದಾರೆ” ಎಂದು ಮತ್ತೊಬ್ಬ ನಿವಾಸಿ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ | ಜುಲೈನಿಂದ ದ್ವಿಚಕ್ರ ವಾಹನ, ಆಟೋ ಸಂಚಾರ ನಿಷೇಧ!

“ಕಳೆದ ಮೂರು ತಿಂಗಳ ಹಿಂದೆ ಒಮ್ಮೆ ಮಾತ್ರ ಕಲುಷಿತ ನೀರು ಸರಬರಾಜು ಆಗುತ್ತಿರುವ ಬಗ್ಗೆ ವರದಿಯಾಗಿದೆ. ನಾವು ಅದನ್ನು ಸರಿಪಡಿಸಿದ್ದೇವೆ. ಇದು ಎರಡನೇ ಬಾರಿಗೆ ಸಂಭವಿಸಿದೆ. ನಾವು ಸಮಸ್ಯೆಯ ಮೂಲವನ್ನು ಗುರುತಿಸಲು ಪ್ರಯತ್ನಿಸುತ್ತಿದ್ದೇವೆ. ಇನ್ನೆರಡು ದಿನಗಳಲ್ಲಿ ಶುದ್ಧ ನೀರು ಪೂರೈಕೆಯಾಗಲಿದೆ” ಎಂದು ಬಿಡಬ್ಲ್ಯುಎಸ್‌ಎಸ್‌ಬಿ ಎಂಜಿನಿಯರ್ ಕುಮಾರ್ ನಾಯಕ್ ಎಲ್ ಹೇಳಿದರು.

“ನಿವಾಸಿಗಳಿಗೆ ಅನಾನುಕೂಲವಾಗದಂತೆ ನೋಡಿಕೊಳ್ಳಲು ಬಿಡಬ್ಲ್ಯುಎಸ್‌ಎಸ್‌ಬಿ ಟ್ಯಾಂಕರ್‌ಗಳಲ್ಲಿ ನೀರು ಸರಬರಾಜು ಮಾಡಲಾಗುತ್ತಿದೆ” ಎಂದು ಅವರು ಹೇಳಿದರು.

ಕಳೆದ ವಾರ ಇಂದಿರಾನಗರ 1ನೇ ಹಂತದಿಂದ ಇದೇ ರೀತಿಯ ಕಲುಷಿತ ನೀರಿನ ಘಟನೆಗಳು ವರದಿಯಾಗಿದ್ದವು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...

ಕಲೆ ಉಳಿಯಲಿ, ಕೌಶಲ್ಯ ಬೆಳೆಯಲಿ: ಕರ್ನಾಟಕ ಪರ್ವ 2026ಕ್ಕೆ ಡಿ.ಕೆ ಶಿವಕುಮಾರ್ ಚಾಲನೆ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ವೈವಿಧ್ಯತೆಯಲ್ಲಿ ಏಕತೆ, ಕೌಶಲ್ಯದಲ್ಲಿ ಸ್ವಾವಲಂಬನೆ ಎಂಬ...

‘ಅಟ್ಟಿಕಾ ಗೋಲ್ಡ್’ ಕಚೇರಿಗಳ ಮೇಲೆ ದಾಳಿ: ನಗದು, ಆಭರಣ ಜಪ್ತಿ

ಕಳ್ಳತನವಾದ ಚಿನ್ನಾಭರಣಗಳನ್ನು ಖರೀದಿಸಿ, ಆ ಮೂಲಕ ಅಕ್ರಮವಾಗಿ ಹಣ ಸಂಪಾದಿಸಿದ ಆರೋಪದ...

ಸೌಜನ್ಯ ಪ್ರಕರಣ ಮರುತನಿಖೆ | SIT ಪುನರ್‌ ರಚಿಸುವಂತೆ ಕೊಂದವರು ಯಾರು? ಆಂದೋಲನ ಒತ್ತಾಯ

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ರಚಿಸಲಾಗಿರುವ ವಿಶೇಷ...