ಬೆಂಗಳೂರು | ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ₹1.26 ಕೋಟಿ ಮೌಲ್ಯದ ಚಿನ್ನ ವಶ

Date:

  • ಕಸ್ಟಮ್ಸ್‌ ಅಧಿಕಾರಿಗಳಿಂದ ಚಿನ್ನ ವಶ
  • ಮೂರು ಪ್ರತ್ಯೇಕ ಪ್ರಕರಣ ದಾಖಲು

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ₹1,26,58, 618 ಮೌಲ್ಯದ 2 ಕೆಜಿ 79 ಗ್ರಾಂ ಚಿನ್ನವನ್ನು ಕಸ್ಟಮ್ಸ್‌ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

- Advertisement -

ಬ್ಯಾಂಕಾಕ್, ಕೊಲಂಬೋ ಮತ್ತು ಮಸ್ಕಟ್​​ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಮೂರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ನ.17 ರಂದು ಮಸ್ಕತ್‌ನಿಂದ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಏರ್ ಕಸ್ಟಮ್ಸ್‌ ಅಧಿಕಾರಿಗಳು ತಡೆಹಿಡಿದು ಸುಮಾರು ₹68,18,812 ಮೌಲ್ಯದ 1113.07 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಪ್ರಯಾಣಿಕ ಸೊಂಟದ ಬೆಲ್ಟ್ ಪೌಚ್‌ನಲ್ಲಿ ಚಿನ್ನವನ್ನು ಕಳ್ಳಸಾಗಣೆ ಮಾಡಲು ಪ್ರಯತ್ನಿಸುತ್ತಿದ್ದನು.

ಬೆಂಗಳೂರು ಏರ್ ಕಸ್ಟಮ್ಸ್ ಅಧಿಕಾರಿಗಳು ನ.16 ರಂದು ಬ್ಯಾಂಕಾಕ್‌ನಿಂದ ಆಗಮಿಸುತ್ತಿದ್ದ ಮೂರು ಜನರನ್ನು ತಡೆದು ತಪಾಸಣೆ ನಡೆಸಿದ್ದಾರೆ. ಕೊಲಂಬೊದಿಂದ ಬಂದ ಇಬ್ಬರು ಮಹಿಳೆಯರಿಂದ ಸುಮಾರು ₹58,39,806 ಮೌಲ್ಯದ 966 ಗ್ರಾಂ ಚಿನ್ನದ ಸರಗಳನ್ನು ವಶಪಡಿಸಿಕೊಂಡಿದ್ದಾರೆ. ಚಿನ್ನವನ್ನು ಮಹಿಳಾ ಪ್ರಯಾಣಿಕರು ಶರ್ಟ್‌ಗಳು ಮತ್ತು ಒಳ ಉಡುಪುಗಳಲ್ಲಿ ಚಿನ್ನದ ಸರದ ಪೀಸ್‌ಗಳನ್ನು ಕಳ್ಳಸಾಗಣೆ ಮಾಡಲು ಪ್ರಯತ್ನಿಸುತ್ತಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಳ್ಳಾರಿಯ ಬಿಜೆಪಿ ಸಂಸದ ದೇವೆಂದ್ರಪ್ಪ ಪುತ್ರನ ಪ್ರಕರಣ ಮೈಸೂರಿಗೆ ವರ್ಗಾವಣೆ?

‌ಕಸ್ಟಮ್ಸ್​​ ಅಧಿಕಾರಿಗಳು ತಪಾಸಣೆ ವೇಳೆ ಮೂರು ಪ್ರಕರಣಗಳಿಂದ ₹1,26,58, 618 ಮೌಲ್ಯದ 2 ಕೆಜಿ 79 ಗ್ರಾಂ ತೂಕದ ಚಿನ್ನ ಪತ್ತೆಯಾಗಿದೆ. ಮೂರು ಪ್ರಕರಣಕ್ಕೆ ಸಂಬಂಧಿಸಿದಂತೆ ಕಸ್ಟಮ್ಸ್‌ ಅಧಿಕಾರಿಗಳು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...