ಬೆಂಗಳೂರು | ಹಸಿರು ಮಾರ್ಗದಲ್ಲಿ ಹಳಿ ತಪ್ಪಿದ ರೀ ರೈಲ್; ಮೆಟ್ರೋ ಸಂಚಾರದಲ್ಲಿ ಭಾರೀ ವ್ಯತ್ಯಯ

Date:

ಬೆಂಗಳೂರಿನ ರಾಜಾಜಿನಗರದ ಮೆಟ್ರೋ ನಿಲ್ದಾಣದ ಸಮೀಪ ಮಂಗಳವಾರ ಬೆಳ್ಳಂಬೆಳಗ್ಗೆ ರೀ ರೈಲ್ ಹಳಿ ತಪ್ಪಿದ ಕಾರಣ ಹಸಿರು ಮಾರ್ಗದ ಮೆಟ್ರೋ ಸಂಚಾರದಲ್ಲಿ ಭಾರೀ ವ್ಯತ್ಯಯವಾಗಿದೆ. ಇದರಿಂದ ಪ್ರಯಾಣಿಕರು ಪರದಾಡುವಂತಾಗಿದೆ.

- Advertisement -

ಮೆಟ್ರೋ ರೈಲುಗಳಲ್ಲಿ ತಾಂತ್ರಿಕ ತೊಂದರೆಯಾದಾಗ ಅದನ್ನು ಸರಿಪಡಿಸಲು ರೀ ರೈಲ್ ಬಳಸಲಾಗುತ್ತದೆ. ಇದೀಗ ರೀ ರೈಲ್ ಹಳಿತಪ್ಪಿದೆ. ರಾಜಾಜಿನಗರ ಮೆಟ್ರೋ ನಿಲ್ದಾಣ ಸಮೀಪದ ಕರ್ವ್‌ನಲ್ಲಿ ಈ ಘಟನೆ ನಡೆದಿದೆ. ಇದರಿಂದ ಹಸಿರು ಮಾರ್ಗದ ಮೆಟ್ರೋ ಸಂಚಾರದಲ್ಲೀ ಭಾರೀ ವ್ಯತ್ಯಯವಾಗಿದೆ. ಇನ್ನು ಹಸಿರು ಮಾರ್ಗದಲ್ಲಿ ನಮ್ಮ ಮೆಟ್ರೋ ಏಕಮುಖವಾಗಿ ಮಾತ್ರ ಸಂಚರಿಸುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಸೋಮವಾರ ಮಧ್ಯರಾತ್ರಿ ಸಂಚರಿಸುತ್ತಿದ್ದಾಗ ಈ ರೀ ರೈಲು ಹಳಿ ತಪ್ಪಿದೆ. ಸದ್ಯ ಬೆಂಗಳೂರು ಮೆಟ್ರೋ ರೈಲು ನಿಗಮ(ಬಿಎಂಆರ್‌ಸಿಎಲ್) ಸಿಬ್ಬಂದಿ ರೀ ರೈಲು ಅನ್ನು ಹಳಿಗೆ ತರಲು ಪ್ರಯತ್ನಿಸುತ್ತಿದ್ದಾರೆ. ಮಧ್ಯಾಹ್ನದವರೆಗೂ ಈ ಸಮಸ್ಯೆ ಇರಲಿದೆ ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗಾಂಜಾ ಮಾರಾಟ ಆರೋಪ; ಮಾಜಿ ಸಚಿವ ಮುನಿರತ್ನ ವಿರುದ್ಧ ದೂರು

ರೀ ರೈಲ್ ಹಳಿ ತಪ್ಪಿದ ಕಾರಣ ಶ್ರೀರಾಮಂಪುರ, ಕುವೆಂಪು, ರಾಜಾಜಿನಗರ, ಮಹಾಲಕ್ಷ್ಮೀ ಲೇಔಟ್, ಸ್ಯಾಂಡಲ್​ ಸೋಪ್ ಫ್ಯಾಕ್ಟರಿ ನಡುವೆ ಮೆಟ್ರೋ ಸಂಚಾರ ನಿಂತಿದೆ. ನಾಗಸಂದ್ರದಿಂದ ಯಶವಂತಪುರ ಮತ್ತು ಮಂತ್ರಿ ಸ್ಕ್ವೇರ್ ಸಂಪಿಗೆ ರಸ್ತೆಯಿಂದ ರೇಷ್ಮೆ ಸಂಸ್ಥೆ ಮೆಟ್ರೊ ನಿಲ್ದಾಣದ ನಡುವೆ ಮಾತ್ರ ರೈಲು ಸೇವೆಗಳು ಲಭ್ಯವಿರುತ್ತವೆ. ಎಲ್ಲಿಯೂ ನಿಗದಿತ ಸಮಯಕ್ಕೆ ಮೆಟ್ರೋ ಸಂಚಾರ ನಡೆಸುತ್ತಿಲ್ಲ. ಮಂತ್ರಿ ಸ್ಕ್ವೇರ್‌ನಿಂದ ಯಶವಂತಪುರದ ತನಕ ಒಂದು ಮಾರ್ಗದಲ್ಲಿ ಅರ್ಧ ತಾಸಿಗೆ ಒಂದು ಮೆಟ್ರೋ ಸಂಚರಿಸುತ್ತಿದೆ. ನಾಗಸಂದ್ರದಿಂದ ರೇಷ್ಮೆ ಸಂಸ್ಥೆವರೆಗಿನ ಟ್ರ್ಯಾಕ್‌ನಲ್ಲಿ ಸಂಚಾರಕ್ಕೆ ತೊಂದರೆಯಾಗಿದೆ. ಹೀಗಾಗಿ, ಮೆಟ್ರೋ ಪ್ರಯಾಣಿಕರು ಸಹಕರಿಸುವಂತೆ ಬಿಎಂಆರ್​ಸಿಎಲ್​ ಮನವಿ ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಪತ್ನಿ ಮೇಲೆ ಆಸಿಡ್ ಸುರಿದು, ಮಚ್ಚಿನಿಂದ ಹಲ್ಲೆಗೈದ ವಿಕೃತ ಪತಿ

ನಡುರಸ್ತೆಯಲ್ಲೇ ಪತಿಯೊಬ್ಬ ತನ್ನ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಹೃದಯವಿದ್ರಾವಕ...

ಬೆಂಗಳೂರಿನಿಂದ ಕುಣಿಗಲ್‌ಗೆ ಎಸಿ ಬಸ್ ಸೇವೆ : ಸಚಿವ ಬೈರತಿ ಸುರೇಶ್ ಹಸಿರು ನಿಶಾನೆ

 ರಾಜಧಾನಿ ಬೆಂಗಳೂರಿನಿಂದ ಜಿಲ್ಲೆಯ ಕುಣಿಗಲ್‌ಗೆ 8 ಬಿಎಂಟಿಸಿ ಹವಾನಿಯಂತ್ರಿತ (ಎಸಿ) ‘ವಜ್ರ’...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಕೋಮು ಸೌಹಾರ್ದತೆಗೆ ಕನ್ನಡಿ: ಕಗ್ಗಲೀಪುರದಲ್ಲಿ ಮಹಿಳೆಯರಿಗೆ ಬಾಗಿನ ಅರ್ಪಿಸಿದ ಮುಸ್ಲಿಂ ದಂಪತಿ

ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಗ್ಗಲೀಪುರದಲ್ಲಿ ಮುಸ್ಲಿಂ...