ಬೆಂಗಳೂರು | ಬಿಎಂಟಿಸಿ ಬಸ್‌ಗೆ ವಿಶೇಷಚೇತನ ಬಲಿ

Date:

ಬಿಎಂಟಿಸಿ ಬಸ್‌ ಹರದು ವಿಶೇಷಚೇತನ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಬೆಂಗಳೂರಿನ ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಬಸ್ ಚಾಲನೆ ಮಾಡುತ್ತಿದ್ದ ಚಾಲಕ ಗೋಪಾಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಬುಧವಾರ ತಡರಾತ್ರಿ 12;30ರ ಸುಮಾರಿಗೆ ವಿಶೇಷಚೇತನ ಯುವಕ ಬುಸ್‌ ನಿಲ್ದಾಣದಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ, ಹಿಂದಿನಿಂದ ವೇಗವಾಗಿ ಬಂದ ಬಸ್‌, ಆತನ ಮೇಲೆ ಹರಿದಿದೆ ಎಂದು ತಿಳಿದುಬಂದಿದೆ. ದುರ್ಘಟನೆಯಲ್ಲಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಅಪಘಾತ ಎಸಗಿದ ಚಾಲಕ ಪರಾರಿಯಾಗಲು ಯತ್ನಿಸಿದ್ದು, ಆತನನ್ನು ಸ್ಥಳದಲ್ಲಿದ್ದವರು ಚಾಲಕನನ್ನು ಹಿಡಿದಿದ್ದಾರೆ. ಪೊಲೀಸರಿಗೆ ಕರೆ ಮಾಡಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ಉಪ್ಪಾರಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಯುವಕನ ಗುರುತು ಪತ್ತೆಗೆ ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

ಬಸ್‌ ನಿಲ್ದಾಣಗಳಲ್ಲಿಯೂ ಚಾಲಕರು ವೇಗವಾಗಿ ಬಸ್ ಚಾಲನೆ ಮಾಡುತ್ತಾರೆ. ನಿಲ್ದಾಣದಲ್ಲಿ ಪ್ರಯಾಣಿಕರ ಸುರಕ್ಷತೆ ಬಗ್ಗೆ ಎಚ್ಚರವಹಿಸುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...