ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯೊಬ್ಬರ ಶವ ಪತ್ತೆಯಾಗಿದೆ. ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ರಾಧಾ ಮೃತಪಟ್ಟಿರುವ ಗೃಹಿಣಿ. ಇವರು ಮೂಲತಃ ರಾಮನಗರದವರು. ಕಳೆದ ಎರಡು ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ನಲೆಸಿರುವ ರವಿ ಎಂಬಾತನ ಜೊತೆಗೆ ಹಿರಿಯರು ನಿಶ್ಚಯ ಮಾಡಿದಂತೆ ಮದುವೆ ಮಾಡಲಾಗಿತ್ತು.
ಮದುವೆಯಾದ ಆರಂಭದಲ್ಲಿ ದಂಪತಿ ಅನ್ಯೋನ್ಯವಾಗಿದ್ದರು. ಕಾಲಕ್ರಮೇಣ ಇಬ್ಬರ ನಡುವೆ ವೈಮನಸ್ಸು ಉಂಟಾಗಿತ್ತು ಎಂದು ತಿಳಿದುಬಂದಿದೆ.
ವರದಕ್ಷಿಣೆ ಕಿರುಕುಳ ಹಿನ್ನೆಲೆಯಲ್ಲಿ ಗೃಹಿಣಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ.
ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆಯಾಗಿದೆ. ಮಾಹಿತಿ ತಿಳಿದು ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ‘ಸಾಧು ವಾಸವಾನಿ ಜಯಂತಿ’ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ
ಘಟನೆ ಬಗ್ಗೆ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.