ಬೆಂಗಳೂರು | ದೇವಾಲಯಗಳಲ್ಲಿ ಜ.10 ರಿಂದ ವಸ್ತ್ರಸಂಹಿತೆ ಜಾರಿ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನ ದೇವಾಲಯಗಳಲ್ಲಿ ಇನ್ನುಮುಂದೆ ಅರೆಬಟ್ಟೆ ಧರಿಸಿ ಬರುವವರಿಗೆ ಪ್ರವೇಶ ನಿರ್ಬಂಧಿಸಲಾಗಿದ್ದು, ಜನವರಿ 10 ರಿಂದ ಈ ವಸ್ತ್ರಸಂಹಿತೆ ಜಾರಿಯಾಗಲಿದೆ ಎಂದು ಕರ್ನಾಟಕ ದೇವಸ್ಥಾನ ಮಹಾಸಂಘ ಹೇಳಿದೆ.

ಈ ಕುರಿತು ಕರ್ನಾಟಕ ದೇವಸ್ಥಾನ-ಮಠ, ಧಾರ್ಮಿಕ ಸಂಸ್ಥೆಗಳ ಮಹಾಸಂಘ ಜನವರಿ 10 ರಿಂದ ಅಭಿಯಾನ ನಡೆಸಲಿದೆ. ಇಂದು ಮಧ್ಯಾಹ್ನ 12 ಗಂಟೆಗೆ ವಸಂತನಗರದ ಶ್ರೀ ವೆಂಕಟರಮಣ ದೇವಾಲಯದಲ್ಲಿ ವಸ್ತ್ರ ಸಂಹಿತೆ ಬೋರ್ಡ್‌ ಹಾಕುವ ಮೂಲಕ ಈ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.

ಇನ್ನುಮುಂದೆ ಬೆಂಗಳೂರಿನಲ್ಲಿರುವ ದೇವಸ್ಥಾನಗಳಿಗೆ ತೆರಳುವವರು ಭಾರತೀಯ ಉಡುಪು ಧರಿಸಿ ಬಂದರೆ ಮಾತ್ರ ಅವಕಾಶ ನೀಡಲಾಗುತ್ತದೆ. ಅರೆಬಟ್ಟೆ ಧರಿಸಿದವರಿಗೆ ದೇವಸ್ಥಾನಗಳಿಗೆ ಪ್ರವೇಶವಿಲ್ಲವೆಂದು ದೇವಾಲಯಗಳ ಮುಂದೆ ಬೋರ್ಡ್‌ ನೇತುಹಾಕಲಾಗುತ್ತದೆ.

Advertisements

ಈ ಹಿಂದೆಯೇ ಈ ನೀತಿ ಜಾರಿ ತರುವಂತೆ ಕರ್ನಾಟಕ ದೇವಸ್ಥಾನ, ಮಠ ಹಾಗೂ ಧಾರ್ಮಿಕ ಸಂಸ್ಥೆಗಳ ಮಹಾಸಂಘ ಒತ್ತಾಯಿಸಿದ್ದವು. ಈ ಹಿನ್ನೆಲೆ, ಕಳೆದ ತಿಂಗಳು ನಡೆಸಿದ ಸಭೆಯಲ್ಲಿ ರಾಜ್ಯದ ಎಲ್ಲ ಅರ್ಚಕರು ಹಾಗೂ ಟ್ರಸ್ಟಿಗಳು ಜನವರಿಯಿಂದ ಈ ನಿಯಮವನ್ನು ಜಾರಿ ಮಾಡಬೇಕೆಂದು ತೀರ್ಮಾನ ಮಾಡಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಜೈಲಿನಿಂದ ಬಿಡುಗಡೆ ಬೆನ್ನಲ್ಲೇ ಮತ್ತೆ ಜೈಲು ಸೇರಿದ ಕರವೇ ಅಧ್ಯಕ್ಷ

ಪುರುಷರು ಚಡ್ಡಿ, ಬರ್ಮುಡಾ, ಹರಿದ ಜೀನ್ಸ್​, ಎದೆ ಕಾಣುವ ಟಿಶರ್ಟ್​ ಧರಿಸಿಕೊಂಡು ದೇವಾಲಯಕ್ಕೆ ಬರುವಹಾಗಿಲ್ಲ. ಇನ್ನು ಮಹಿಳೆಯರು ಸ್ಕರ್ಟ್, ಮಿಡಿ, ಹರಿದ ಜೀನ್ಸ್, ಶಾರ್ಟ್ಸ್ ಹಾಕಿಕೊಂಡು ಬರುವಂತಿಲ್ಲ ಎಂದು ಹೇಳಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

Download Eedina App Android / iOS

X