ಬೆಂಗಳೂರು ಜಿಲ್ಲೆಯ ಆನೇಕಲ್ ತಾಲೂಕಿನ ಹೆಬ್ಬಗೋಡಿ ಬಳಿ ಟ್ಯಾಂಕರ್ ವಾಹನ ಹರಿದು ಇಬ್ಬರು ಪಾದಚಾರಿಗಳು ಸಾವನ್ನಪ್ಪಿದ ಘಟನೆ ನಡೆದಿದೆ.
ಆಶಿಕ್ (28), ಮನೋಜ್ ಕುಮಾರ್(30) ಮೃತ ದುರ್ದೈವಿಗಳು. ಟ್ಯಾಂಕರ್ ವಾಹನ ಚಾಲನೆ ಮಾಡುವ ವೇಳೆ ಚಾಲಕ ಮದ್ಯದ ಅಮಲಿನಲ್ಲಿದ್ದನು. ಈ ವೇಳೆ, ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸಿ ಬಯೋಕಾನ್ ಕಂಪನಿ ಮುಂಭಾಗದಲ್ಲಿ ಇಬ್ಬರು ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದ್ದಾನೆ. ಬಳಿಕ ಟ್ಯಾಂಕರ್ ಹೆದ್ದಾರಿಯಲ್ಲಿದ್ದ ಬ್ಯಾರಿಕೇಡ್ಗೆ ಡಿಕ್ಕಿ ಹೊಡೆದು ಉರುಳಿ ಬಿದ್ದಿದೆ.
ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ ಹೆಬ್ಬಗೋಡಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಟ್ಯಾಂಕರ್ ಚಾಲಕ ಹಾಗೂ ಕ್ಲೀನರ್ನನ್ನು ವಶಕ್ಕೆ ಪಡೆದಿದ್ದಾರೆ.