ಬೆಂಗಳೂರು | ಮದ್ಯಪಾನ ಮಾಡಿ ಶಾಲಾ ವಾಹನ ಓಡಿಸಿದ ಚಾಲಕರು; ಡಿಎಲ್ ಅಮಾನತಿಗೆ ಸೂಚನೆ

Date:

Advertisements

ಮಕ್ಕಳನ್ನು ಸುರಕ್ಷಿತವಾಗಿ ಶಾಲೆಯಿಂದ ಮನೆಗೆ, ಮನೆಯಿಂದ ಶಾಲೆಗೆ ತಲುಪಿಸಬೇಕಾದ ಶಾಲಾ ಬಸ್‌ ಚಾಲಕರು ವಾಹನ ಚಾಲನೆ ಮಾಡುವಾಗ ಮದ್ಯಪಾನ ಮಾಡಿ ಸಿಕ್ಕಿಬಿದ್ದ ಘಟನೆ ಮಂಗಳವಾರ ಬೆಂಗಳೂರಿನಲ್ಲಿ ನಡೆದಿದೆ.

ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ-2024 ರ ಅಂಗವಾಗಿ ಶಾಲಾ ವಾಹನ ಚಾಲಕರ ವಿರುದ್ಧ ಬೆಂಗಳೂರು ಸಂಚಾರ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಬೆಳಗ್ಗೆ 7ರಿಂದ 9.30ರವರೆಗೆ ಶಾಲಾ ವಾಹನಗಳ ತಪಾಸಣೆ ನಡೆಸಿದ್ದು, ಮದ್ಯಪಾನ ಮಾಡಿ ಶಾಲಾ ವಾಹನ ಓಡಿಸುತ್ತಿದ್ದ ಚಾಲಕರು ಸಂಚಾರ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಇದೀಗ ಮದ್ಯಪಾನ ಮಾಡಿ ಶಾಲಾ ವಾಹನ ಚಲಾಯಿಸುತ್ತಿದ್ದವರ ವಿರುದ್ಧ ದೂರು ದಾಖಲಾಗಿದೆ.


“ಶಾಲಾ ವಾಹನ ಚಾಲಕರ ವಿರುದ್ಧ ಬೆಳಗ್ಗೆ 7 ರಿಂದ ಬೆಳಿಗ್ಗೆ 9:30ರ ನಡುವೆ ವಿಶೇಷ ಕಾರ್ಯಾಚರಣೆ ನಡೆಸಲಾಯಿತು. ಒಟ್ಟು 3,414 ವಾಹನ ತಪಾಸಣೆ ನಡೆಸಲಾಗಿದ್ದು, 16 ಚಾಲಕರು ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿರುವುದು ಪತ್ತೆಯಾಗಿದೆ. ಅಂತಹ ಚಾಲಕರ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿದೆ. ಅವರ ಡಿಎಲ್ ಅನ್ನು ಅಮಾನತುಗೊಳಿಸಲು ಆರ್‌ಟಿಒಗೆ ಕಳುಹಿಸಲಾಗಿದೆ” ಎಂದು ಬೆಂಗಳೂರು ಜಂಟಿ ಪೊಲೀಸ್ ಆಯುಕ್ತ ಎಂಎನ್ ಅನುಚೇತ್ ಅವರು ಟ್ವೀಟ್ ಮಾಡಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ | 2024-25ನೇ ಸಾಲಿನ ಆಯವ್ಯಯಕ್ಕೆ ಸಾರ್ವಜನಿಕರು ಸಲಹೆ, ಸೂಚನೆ ಸಲ್ಲಿಸಲು ಅವಕಾಶ

ಇತ್ತೀಚೆಗೆ, ಶಿಕ್ಷಣ ಇಲಾಖೆ ಶಾಲಾ ಮಕ್ಕಳನ್ನು ಕರೆತರುವ ಎಲ್ಲ ಬಗೆಯ ವಾಹನಗಳ ಚಾಲಕರು ಮತ್ತು ಸಹಾಯಕರು ಪೊಲೀಸರಿಂದ ಪಡೆದ ಸನ್ನಡತೆಯ ಪ್ರಮಾಣಪತ್ರವನ್ನು ಶಾಲಾ ಆಡಳಿತ ಮಂಡಳಿಗಳಿಗೆ ಸಲ್ಲಿಸುವುದು ಕಡ್ಡಾಯ ಎಂದು ಹೇಳಿತ್ತು.

ಹಾಗೆಯೇ, ಶಾಲಾ ಆಡಳಿತ ಮಂಡಳಿ ಮತ್ತು ಮುಖ್ಯಸ್ಥರಿಗೆ ಮಕ್ಕಳ ಸುರಕ್ಷತೆಯ ನಿಯಮ ಉಲ್ಲಂಘಿಸಿದರೆ ಶಿಸ್ತು ಕ್ರಮಕ್ಕೆ ಹಿಂದೆ ಶಿಕ್ಷಣ ಇಲಾಖೆ ಮಕ್ಕಳ ಸುರಕ್ಷತೆ ನಿಟ್ಟಿನಲ್ಲಿ ಹೊಸ ಸುತ್ತೋಲೆ ಹೊರಡಿಸಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

Download Eedina App Android / iOS

X