ಬೆಂಗಳೂರು | ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ; 100ಕ್ಕೂ ಹೆಚ್ಚು ಚಾಲಕರ ವಿರುದ್ಧ ಪ್ರಕರಣ ದಾಖಲು

Date:

ಬೆಂಗಳೂರಿನಲ್ಲಿ ಶಾಲಾ ವಾಹನ ಚಾಲಕರು ಮದ್ಯ ಸೇವಿಸಿ ಚಾಲನೆ ಮಾಡುತ್ತಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ಪೊಲೀಸರು ಅಂತಹ ಚಾಲಕರನ್ನ ಗುರುತಿಸುತ್ತಿದ್ದು, ಬರೋಬ್ಬರಿ 108 ಚಾಲಕ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

- Advertisement -

ಮದ್ಯಪಾನ ಮಾಡಿ ಶಾಲಾ ವಾಹನ ಚಲಾಯಿಸುವವರನ್ನು ಪತ್ತೆ ಹಚ್ಚಲು ಸಂಚಾರಿ ಪೊಲೀಸರು ಹಲವು ದಿನಗಳಿಂದ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕಳೆದ 9 ತಿಂಗಳಲ್ಲಿ 108 ಮಂದಿ ಶಾಲಾ ವಾಹನ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಅಂತಹ ಚಾಲಕರ ಚಾಲನಾ ಪರವಾನಗಿ (ಡಿ.ಎಲ್‌) ಅಮಾನತು ಮಾಡುವಂತೆ ಸಾರಿಗೆ ಇಲಾಖೆಗೆ ಶಿಫಾರಸು ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

“ಶಾಲಾ ಮಕ್ಕಳನ್ನು ಸಾಗಿಸುವ ಕೆಲಸದ ಅವಧಿಯಲ್ಲಿ ನಿಯಮಿತ ತಪಾಸಣೆ ನಡೆಸಲಾಗಿದೆ. ಕೆಲ ಶಾಲಾ ವಾಹನ ಚಾಲಕರು ಮದ್ಯ ಸೇವಿಸಿ ಸಿಕ್ಕಿಬಿದ್ದಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಆರೋಪಿ ಚಾಲಕರಿಗೆ ತಲಾ 10,000 ರೂ. ದಂಡ ವಿಧಿಸಲಾಗಿದೆ. ಅಲ್ಲದೆ, ಕೆಲವು ಚಾಲಕರ ‘ಡಿಎಲ್‌’ಅನ್ನು ಸಾರಿಗೆ ಇಲಾಖೆ ಅಮಾನತು ಮಾಡಿದ್ದರೂ, ಮದ್ಯ ಸೇವಿಸಿ, ಚಾಲನೆ ಮಾಡುವುದು ಕಂಡುಬಂದಿದೆ. ಅಂತಹ ಚಾಲಕರ ಪರವಾನಗಿಯನ್ನು ಅಮಾನತು ಮಾಡುವ ಬದಲು, ರದ್ದುಗೊಳಿಸಬೇಕೆಂದು ಚಾರಿಗೆ ಇಲಾಖೆಗೆ ಮನವಿ ಮಾಡಿದ್ದೇವೆ” ಎಂದು ಸಂಚಾರ ವಿಭಾಗದ ಡಿಸಿಪಿ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ.

ಈ ವರದಿ ಓದಿದ್ದೀರಾ?: ರೈತ ವಿರೋಧಿ ಯಾರು- ಬಿಜೆಪಿಯೇ ಅಥವಾ ವಕ್ಫ್‌ ಮಂಡಳಿಯೇ? ಇಲ್ಲಿದೆ ಕಂಪ್ಲೀಟ್‌ ಡೀಟೇಲ್ಸ್‌

ಮದ್ಯ ಸೇವಿಸಿ ಚಾಲನೆ ಮಾಡುವುದು ಒಂದೆಡೆಯಾದರೆ, ಸಿಗ್ನಲ್ ಜಂಪ್, ಅತಿವೇಗದ ಆರೋಪಗಳೂ ಶಾಲಾ ವಾಹನ ಚಾಲಕರ ವಿರುದ್ಧ ಕೇಳಿಬಂದಿವೆ. ಅಲ್ಲದೆ, ಬರೋಬ್ಬರಿ 679  ಶಾಲಾ ವಾಹನಗಳು ನಿಗದಿತ ಸಾಮರ್ಥ್ಯಕ್ಕಿಂತ ಹೆಚ್ಚು ಮಕ್ಕಳನ್ನು ಕೊಂಡೊಯ್ಯುವುದು ಕೂಡ ಕಂಡುಬಂದಿದೆ. ಅಂತಹ ವಾಹನಗಳ ಮಾಲೀಕರು ಮತ್ತು ಬಸ್‌ಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನ’ ಆಚರಣೆ

ಜಗತ್ತಿನ ಯಾವುದೇ ಭಾಷೆಯನ್ನು ಬ್ಯಾರಿ ಸಮುದಾಯದ ಮಕ್ಕಳು ಕಲಿಯಲಿ. ಆದರೆ, ಮನೆಯಲ್ಲಿ...

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...