ಬೆಂಗಳೂರು | ಮಾದಕ ವ್ಯಸನ ಮುಕ್ತಿ ಕೇಂದ್ರದ ಮುಖ್ಯಸ್ಥನಿಂದಲೇ ಡ್ರಗ್ಸ್‌ ಮಾರಾಟ!

Date:

  • ಹೊಸಕೆರೆಹಳ್ಳಿ ಬಳಿ ಎಂಡಿಎಂಎ ಎಕ್ಸ್’ಟೆಸಿ ಪಿಲ್ಸ್ ಮಾರಾಟ ಮಾಡುವಾಗ ಬಂಧನ
  • ಆರೋಪಿಯಿಂದ ₹1.25 ಲಕ್ಷ ಮೌಲ್ಯದ ಎಂಡಿಎಂಎ ವಶಕ್ಕೆ ಪಡೆದ ಪೊಲೀಸರು

ಕೆಂಗೇರಿ ಬಳಿ ಪೂರ್ಣ ಪ್ರಜ್ಞಾ ಫೌಂಡೇಶನ್‌ನ ಹೆಸರಿನಲ್ಲಿ ಮದ್ಯ ಮತ್ತು ಮಾದಕ ವ್ಯಸನ ಮುಕ್ತ ಕೇಂದ್ರ ನಡೆಸುತ್ತಿದ್ದ ಮುಖ್ಯಸ್ಥ ಸ್ವತಃ ತಾನೇ ಮಾದಕ ವ್ಯಸನಕ್ಕೆ ದಾಸನಾಗಿದ್ದು, ಜತೆಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಗಿರಿನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಪದವೀಧರನಾಗಿದ್ದ ಸೂರಜ್ ಗೌಡ ಬಂಧಿತ ಆರೋಪಿ. ಹೊಸಕೆರೆಹಳ್ಳಿ ಬಳಿ ಎಂಡಿಎಂಎ ಎಕ್ಸ್’ಟೆಸಿ ಪಿಲ್ಸ್ ಮಾರಾಟ ಮಾಡುತ್ತಿದ್ದಾಗ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈತ ಸ್ವತಃ ತಾನೇ ಮಾದಕ ವ್ಯಸನಕ್ಕೆ ತುತ್ತಾಗಿದ್ದನು. ಈ ಹಿಂದೆ ಆತ್ಮಹತ್ಯೆಗೂ ಕೂಡ ಪ್ರಯತ್ನಿಸಿದ್ದನು. ಬಳಿಕ ಮಾದಕ ವ್ಯಸನದಿಂದ ಮುಕ್ತಿಯನ್ನು ಹೊಂದಲು ಸ್ವತಃ ತಾನೇ ಮದ್ಯ ಮತ್ತು ಮಾದಕ ವ್ಯಸನ ಮುಕ್ತ ಕೇಂದ್ರವನ್ನು ನಡೆಸುತ್ತಿದ್ದನು ಎಂದು ಪೊಲೀಸ್‌ ತನಿಖೆ ವೇಳೆ ತಿಳಿದುಬಂದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮಾದಕ ವ್ಯಸನದಿಂದ ಹೊರಬರಲಾರದೇ ತಾನು ಮಾದಕ ಪದಾರ್ಥಗಳನ್ನ ಸೇವಿಸುವುದಲ್ಲದೇ, ವ್ಯಸನದಿಂದ ಮುಕ್ತರಾಗಲು ದಾಖಲಾಗಿದ್ದವರಿಗೂ ಸಹ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದನು ಎಂದು ತಿಳಿದು ಬಂದಿದೆ.

ಈ ಸುದ್ದಿ ಓದಿದ್ದೀರಾ? ಕೆಐಎನಲ್ಲಿ ಪ್ರಯಾಣಿಕರೊಬ್ಬರ ಎರಡು ಐಫೋನ್‌ ಕದ್ದ ಸಿಬ್ಬಂದಿ

ಬೆಂಗಳೂರಿನಲ್ಲಿ ಮಾದಕ ಪದಾರ್ಥಗಳಿಗೆ ಕಡಿವಾಣ ಹಾಕಲು ಬೆಂಗಳೂರು ನಗರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಬಂಧಿತ ಆರೋಪಿಯಿಂದ ಪೊಲೀಸರು ₹1.25 ಲಕ್ಷ ಮೌಲ್ಯದ ಎಂಡಿಎಂಎ ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೇವನಹಳ್ಳಿ | ಕೆಐಎಡಿಬಿ ಭೂಸ್ವಾಧೀನಕ್ಕೆ ವಿರೋಧ: ‘ಬೇಡಿಕೆ ಈಡೇರುವವರೆಗೂ ಹೋರಾಟ ನಿಲ್ಲಲ್ಲ’ ಎಂದ ರೈತ ಮುಖಂಡರು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಕಳೆದ 842 ದಿನಗಳಿಂದ ಹೋರಾಟ ನಡೆಸುತ್ತಿದ್ದ...

ರಾಮನಗರ | 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ; ಆರೋಪಿ ಬಂಧನ

ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಂದ ಘಟನೆ ಬೆಂಗಳೂರು...

ವಿಪಕ್ಷಗಳಿಗೆ ದಃಸ್ವಪ್ನವಾಗಿದ್ದ ‘ಇ.ಡಿ’ ಮೇಲೆಯೇ ಎಫ್ಐಆರ್

ಮೋದಿ ಸರ್ಕಾರ ಆಡಳಿತಕ್ಕೆ ಬಂದು ಹತ್ತು ವರ್ಷಗಳು ಕಳೆದಿವೆ. ಇದೀಗ, ಮೂರನೇ...

ಕರ್ತವ್ಯ ಸಂಬಂಧಿತ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವಂತಿಲ್ಲ; ಪೊಲೀಸರಿಗೆ ಆಯುಕ್ತರ ಎಚ್ಚರಿಕೆ

ಪೊಲೀಸ್‌ ಸಿಬ್ಬಂದಿಗಳು ಸಮವಸ್ತ್ರದಲ್ಲಿರುವ ತಮ್ಮ ಫೋಟೋ, ವಿಡಿಯೋ, ರೀಲ್ಸ್‌ ಸೇರಿದಂತೆ ಕರ್ತವ್ಯಕ್ಕೆ...