ಬೆಂಗಳೂರು | ನೀತಿ ಸಂಹಿತೆ ಜಾರಿಯಾದರೂ ರಾರಾಜಿಸುತ್ತಿವೆ ಫೋಟೊ-ಬ್ಯಾನರ್ ಗಳು: ದಂಡದ ಎಚ್ಚರಿಕೆ

Date:

  • ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ನೀತಿ ಸಂಹಿತೆ ಜಾರಿಯಲ್ಲಿದೆ
  • ವಿಧಾನಸಭೆ ಚುನಾವಣೆಗೆ ಮೇ 10ರಂದು ಮತದಾನ ನಡೆಯಲಿದೆ

ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ನೀತಿ ಸಂಹಿತೆ ಜಾರಿಯಲ್ಲಿದೆ. ಆದರೂ, ವಾಹನ ಹಾಗೂ ಆಟೋಗಳ ಮೇಲೆ ರಾಜಕೀಯ ನಾಯಕರ ಭಾವಚಿತ್ರ ಮತ್ತು ಪಕ್ಷಗಳ ಚಿಹ್ನೆ ಇರುವ ವಾಹನಗಳ ಮೇಲೆ ಆರ್‌ಟಿಐ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದು, ರಾಜಕೀಯ ಪ್ರೇರಿತ ಭಾವಚಿತ್ರ ಅಥವಾ ಚಿಹ್ನೆ ಇದ್ದರೆ ₹5 ಸಾವಿರ ದಂಡ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಚುನಾವಣೆ ದಿನಾಂಕ ಘೋಷಣೆಯಾದಾಗಿನಿಂದ ಪೊಲೀಸ್‌ ಅಧಿಕಾರಿಗಳು ಮತ್ತು ಚುನಾವಣಾ ಅಧಿಕಾರಿಗಳು ಕಾರ್ಯೋನ್ಮುಖರಾಗಿದ್ದಾರೆ. ಹಾಗೆಯೇ, ಚುನಾವಣಾ ಆಯೋಗದ ಸೂಚನೆಯಂತೆ ಮೆಜೆಸ್ಟಿಕ್ ಬಳಿ ಇರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದ ಬಳಿ ಆರ್‌ಟಿಓ ಅಧಿಕಾರಿಗಳು ಮಂಗಳವಾರ ಕಾರ್ಯಾಚರಣೆ ನಡೆಸಿದರು.

ಆರ್‌ಟಿಓ ಜಂಟಿ ಆಯುಕ್ತ ಹಾಲಸ್ವಾಮಿ, ರಾಜಾಜಿನಗರ ಆರ್‌ಟಿಓ ಅಧಿಕಾರಿ ಶ್ರೀನಿವಾಸ್ ಪ್ರಸಾದ್ ನೇತೃತ್ವದಲ್ಲಿ ಪರಿಶೀಲನೆ ನಡೆಯಿತು.

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ರಾಜಕೀಯ ಪಕ್ಷಗಳು ಹಾಗೂ ಚುನಾವಣಾ ಅಭ್ಯರ್ಥಿಗಳು ಯಾವುದೇ ವ್ಯಕ್ತಿಯ ಜಮೀನು, ಕಟ್ಟಡದಲ್ಲಿ ಅನುಮತಿಯಿಲ್ಲದೆ ಪಕ್ಷದ ಧ್ವಜಗಳು, ಬ್ಯಾನರ್‌ಗಳು, ಸೂಚನೆಗಳು ಮತ್ತು ಘೋಷಣೆಗಳನ್ನು ಬರೆಯಲು ಅನುಮತಿ ಇರುವುದಿಲ್ಲ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮತದಾನ ಪ್ರಮಾಣ ಶೇ. 75ಕ್ಕೆ ಏರಿಸುವ ಗುರಿ ಹೊಂದಲಾಗಿದೆ: ಜಿಲ್ಲಾ ಚುನಾವಣಾಧಿಕಾರಿ

ಪಕ್ಷದ ಚಿಹ್ನೆ, ಧ್ವಜ ಹಾಗೂ ಅಭ್ಯರ್ಥಿಗಳ ಭಾವಚಿತ್ರ, ಹೆಸರನ್ನು ವಾಹನದ ಮೇಲೆ ಹಾಕುವಂತಿಲ್ಲ. ಒಂದು ವೇಳೆ ವಾಹನದ ಮೇಲೆ ಹೆಸರನ್ನು ಹಾಕಬೇಕಾದರೆ, ಆಯಾ ಕ್ಷೇತ್ರದ ಚುನಾವಣಾಧಿಕಾರಿಗಳಿಂದ ವಾಹನಗಳ ಸಂಖ್ಯೆ ನೀಡಿ ಪರವಾನಿಗೆ ಪಡೆದುಕೊಳ್ಳುವುದು ಕಡ್ಡಾಯವಾಗಿದೆ.

ಯಾವುದೇ ಪರವಾನಿಗೆ ಇಲ್ಲದೇ ವಾಹನಗಳ ಮೇಲೆ ಅಭ್ಯರ್ಥಿಗಳ ಫೋಟೋ ಹಾಕಿದ್ದರೆ, ಅದು ನೀತಿ ಸಂಹಿತೆ ಉಲ್ಲಂಘನೆ ಅಡಿಯಲ್ಲಿ ಅಪರಾಧವಾಗುತ್ತದೆ. ಆ ವಾಹನವನ್ನು ಪೊಲೀಸರು ಅಥವಾ ಚುನಾವಣಾಧಿಕಾರಿಗಳು ಸೀಜ್ ಮಾಡುವ ಅಧಿಕಾರ ಹೊಂದಿರುತ್ತಾರೆ. ದಂಡವನ್ನು ವಿಧಿಸಬಹುದು.

ಕರ್ನಾಟಕ ವಿಧಾನಸಭೆ ಚುನಾವಣೆಗೆ ಮೇ 10ರಂದು ಮತದಾನ ನಡೆಯಲಿದೆ. ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ನ. 29ರಂದು ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ ಪ್ರದಾನ; ಕನ್ನಡ-ಉರ್ದು ಕವಿಗೋಷ್ಠಿ

ಕನ್ನಡದಲ್ಲಿ ಪ್ರಕಟಿತ ಮುಸ್ಲಿಮ್ ಬರಹಗಾರರ ಅತ್ಯುತ್ತಮ ಕೃತಿಗೆ ಕರ್ನಾಟಕ ಮುಸ್ಲಿಮ್ ಲೇಖಕರ...

ಬೆಂಗಳೂರು | 20 ದಿನದ ಹಸುಗೂಸು ಮಾರಾಟ; ಸಿಸಿಬಿ ಪೊಲೀಸರ ಕಾರ್ಯಾಚರಣೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಹಸುಗೂಸು ಮಾರಾಟ ದಂಧೆ ಮತ್ತೆ ಬೆಳಕಿಗೆ...

‘ಮಂತ್ರ ಮಾಂಗಲ್ಯ’ದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಡಲಿರುವ ನಟಿ ಪೂಜಾ ಗಾಂಧಿ

'ಮುಂಗಾರು ಮಳೆ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ನಟಿ...

ಬೆಂಗಳೂರು | ಮತ್ತೊಂದು ಬೆಂಕಿ ಅವಘಡ; ಹೊತ್ತಿ ಉರಿದ ಶೂ, ಬಟ್ಟೆ ಗೋದಾಮು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಲು ಸಾಲು ಅಗ್ನಿ ಅವಘಡಗಳು ಸಂಭವಿಸುತ್ತಿವೆ. ಕಳೆದ...