ಬೆಂಗಳೂರು | ಎಲ್ಲವನ್ನೂ ಪುಕ್ಸಟೆ ಕೊಡಲಾಗದು, ತೆರಿಗೆ ಪಾವತಿಸಲೇಬೇಕು: ಡಿ ಕೆ ಶಿವಕುಮಾರ್

Date:

“ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿರುವ ಆಸ್ತಿ ತೆರಿಗೆ ವಿಚಾರದಲ್ಲಿರುವ ಕೆಲವು ಸಮಸ್ಯೆಗಳು ಗಮನಕ್ಕೆ ಬಂದಿವೆ. ಕೂಡಲೇ ಆ ಎಲ್ಲ ಸಮಸ್ಯೆಗಳನ್ನು ಬಗೆಹರಿಸಲಾಗುವುದು. ಕಾನೂನು ಪರಿಮಿತಿಯೊಳಗೆ ಎಷ್ಟು ತೆರಿಗೆ ಕಡಿಮೆ ಮಾಡಲು ಸಾಧ್ಯವೋ ಅಷ್ಟು ತೆರಿಗೆ ಕಡಿಮೆ ಮಾಡುತ್ತೇವೆ. ಎಲ್ಲವನ್ನೂ ಪುಕ್ಸಟೆ ಕೊಡಲು ಆಗುವುದಿಲ್ಲ. ಕೊಟ್ಟರೆ, ಅದಕ್ಕೆ ಅರ್ಥವೂ ಇರುವುದಿಲ್ಲ” ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

- Advertisement -

ಪಾಲಿಕೆ ವ್ಯಾಪ್ತಿಯಲ್ಲಿ ನಾಗರಿಕರ ಅಹವಾಲು, ಕುಂದು-ಕೊರತೆಗಳನ್ನು ಆಲಿಸುವ ಸಲುವಾಗಿ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಪಶ್ಚಿಮ ವಲಯದ ಗಾಂಧಿನಗರ, ಮಲ್ಲೇಶ್ವರ ಹಾಗೂ ಚಾಮರಾಜಪೇಟೆ ವಿಧಾನಸಭೆ ಕ್ಷೇತ್ರಗಳನ್ನು ಒಟ್ಟುಗೂಡಿಸಿ ಶೇಷಾದ್ರಿಪುರಂನ ಶಿರೂರ್ ಆಟದ ಮೈದಾ‌ನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮಕ್ಕೆ ಚಾಲನೆ ನೀಡಿ ವಿಕಲ‌ ಚೇತನರು ಹಾಗೂ ಹಿರಿಯ ನಾಗರಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

18 ವರ್ಷಗಳಲ್ಲೇ ಗರಿಷ್ಠ ಏರಿಕೆ ಕಂಡ ಸಾಂಬಾರ್ ಈರುಳ್ಳಿ;‌...

ಕರ್ನಾಟಕದ ಮಾರುಕಟ್ಟೆಗಳಲ್ಲಿ ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವ ಬೆನ್ನಲ್ಲೇ ಇದೀಗ ಅಡುಗೆ ಮನೆಯ ಪ್ರಮುಖ ಪದಾರ್ಥವಾದ ಸಾಂಬಾರ್ ಈರುಳ್ಳಿ (ಸಣ್ಣ ಈರುಳ್ಳಿ) ಬೆಲೆ ಗ್ರಾಹಕರಿಗೆ ದೊಡ್ಡ ಆಘಾತ ನೀಡಿದೆ. ಚಿಲ್ಲರೆ...

ಮಹಿಳಾ ಮೀಸಲಾತಿ ಮರೆಯಲ್ಲಿ ಕ್ಷೇತ್ರ ಮರುವಿಂಗಡಣೆ: ವಿರೋಧ ಪಕ್ಷಗಳ...

2023ರ ಮಹಿಳಾ ಮೀಸಲಾತಿ ಕಾಯ್ದೆಯನ್ನು ಅನಗತ್ಯವಾಗಿ ಕ್ಷೇತ್ರ ಪುನರ್ವಿಂಗಡಣೆಯೊಂದಿಗೆ ತಳುಕು ಹಾಕಿರುವ ಮೋದಿ ಸರ್ಕಾರದ ನಡೆ, ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂಸದೀಯ ಇತಿಹಾಸದಲ್ಲಿಯೇ ಒಂದು ಅಪರೂಪದ ರಾಜಕೀಯ ಹಾಗೂ ಸಾಂವಿಧಾನಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ....

ಖಾಸಗಿ ವೈದ್ಯರ ಎಡವಟ್ಟು; ಬಡ ಕುಟುಂಬದ ಆಧಾರ ಸ್ತಂಭ...

ಆತ ಕೂಲಿ‌ ಕೆಲಸ ಮಾಡಿಕೊಂಡು ಹಂಗೊ ಹೆಂಗೋ ಜೀವನ‌ ನಡೆಸಿಕೊಂಡು ಬಂದಿದ್ದ ಚಿರ ಯೌವ್ವನದ ಯುವಕ. ತನ್ನ ಮನೆ ಜವಾಬ್ದಾರಿಯನ್ನು ತನ್ನದೇ ಹೆಗಲ ಮೇಲೆರಿಸಿ ಕಷ್ಟಪಟ್ಟು ದುಡಿದು ತನ್ನ ಇಬ್ಬರು ಸಹೋದರಿಯರಿಗೆ ಮದುವೆಯನ್ನೂ...

ಈ ವೇಳೆ ಮಾತನಾಡಿದ ಅವರು, “ಬೆಂಗಳೂರು ದಕ್ಷಿಣ, ಹೆಬ್ಬಾಳದಲ್ಲಿ ತೆರಿಗೆ ಸಮಸ್ಯೆ ಇದೆ ಎಂದು ಸಚಿವ ರಾಮಲಿಂಗಾರೆಡ್ಡಿ ಅವರು ಪತ್ರ ಬರೆದಿದ್ದಾರೆ. 2020ರಲ್ಲಿ ಬಿಬಿಎಂಪಿ ಏನು ಕಾಯಿದೆ ಮಾಡಿದೆ ಎಂಬ ಬಗ್ಗೆ ಗಮನಿಸುತ್ತೇನೆ. ಈ ಬಗ್ಗೆ ಪುನರ್ ಪರಿಶೀಲನೆ ಮಾಡುತ್ತೇವೆ. ತೆರಿಗೆ ಕಡಿಮೆ ಮಾಡಲು ಎಷ್ಟು ಸಾಧ್ಯವೋ ಅಷ್ಟು ತೆರಿಗೆ ಕಡಿಮೆ ಮಾಡುತ್ತೇವೆ. 30–40 ಸೈಟ್ ಇರುವವರಿಗೆ, ಬಡವರಿಗೆ ರಿಯಾಯಿತಿ ಕೊಡಬೇಕೆಂಬ ಚಿಂತನೆ ಇದೆ. ಹಾಗೆಯೇ, ನಿಯಮದಲ್ಲಿ ಸ್ವಲ್ಪ ಸಡಿಲಿಕೆ ನೀಡಬೇಕು ಎಂದುಕೊಂಡಿದ್ದೇವೆ” ಎಂದರು.

“ಯಾರೂ ಕೂಡ ತೆರಿಗೆ ಬಗ್ಗೆ ಗಾಬರಿಯಾಗಬೇಡಿ. ಶೆಡ್, ಶೀಟ್ ಕಟ್ಟಿಕೊಟ್ಟಿರುವವರ ಬಗ್ಗೆ ಗಮನ ಹರಿಸುತ್ತೇವೆ. ಕಾನೂನು ಪರಿಮಿತಿಯೊಳಗೆ ತೆರಿಗೆ ಕಡಿಮೆ ಮಾಡಲು ಎಷ್ಟು ಸಾಧ್ಯವೋ ಅಷ್ಟು ಕಡಿಮೆ ಮಾಡುತ್ತೇವೆ” ಎಂದರು.

“ಕೆಲವು ಜನ ಒಂದು ಅಂತಸ್ತು ಮನೆ ಕಟ್ಟುವುದಾಗಿ ಹೇಳಿ, ಮೂರು ಅಂತಸ್ತು ಮನೆ ಕಟ್ಟಿಸುತ್ತಿದ್ದಾರೆ. ಸರ್ಕಾರಕ್ಕೆ ತೆರಿಗೆ ಕಟ್ಟದೇ ಇರುವುದು ತಪ್ಪು. ಖಾತೆ ಯಾರ ಹೆಸರಲ್ಲಿದೆಯೇ ಅವರಿಗೆ ಉಚಿತವಾಗಿ ದಾಖಲೆಗಳನ್ನು ನೀಡಲು ಮುಂದಾಗುತ್ತೇವೆ. ಹಿಂದಿನ‌ ಸರ್ಕಾರ 1 ಲಕ್ಷ ವಸತಿ ಮನೆಗಳನ್ನು ಘೋಷಿಸಿ ಕೊಟ್ಟಿಲ್ಲ” ಎಂದು ಡಿಕೆ ಶಿವಕುಮಾರ್ ಹೇಳಿದರು.

“ರಾತ್ರಿ 10 ಗಂಟೆಯಾದರೂ ನಿಮ್ಮ ಎಲ್ಲರ ಸಮಸ್ಯೆಗಳನ್ನು ಕೇಳಿಯೇ ಹೋಗುತ್ತೇನೆ. ನಿಮ್ಮ ಸಮಸ್ಯೆಗಳನ್ನು ನೋಂದಾಯಿಸಿಕೊಳ್ಳಿ” ಎಂದು ಜನರಿಗೆ ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪೊಲೀಸರ ಸಮ್ಮುಖದಲ್ಲಿಯೇ ಕೊಲೆ ಆರೋಪಿಯ ಮನೆಗೆ ಬೆಂಕಿ

ಈ ವೇಳೆ ಸಚಿವರು ಹಾಗೂ ಸ್ಥಳೀಯ ಶಾಸಕ ದಿನೇಶ್ ಗುಂಡೂರಾವ್, ಬಿ.ಝಡ್ ಜಮೀರ್ ಅಹ್ಮದ್ ಖಾನ್, ಮಲ್ಲೇಶ್ವರಂ ಶಾಸಕ ಡಾ. ಸಿ.ಎನ್ ಅಶ್ವತ್ಥ ನಾರಾಯಣ್, ಮಾಜಿ ರಾಜ್ಯಸಭಾ ಸದಸ್ಯ ರಾಜೀವ್ ಗೌಡ, ಆಡಳಿತಗಾರ ರಾಕೇಶ್ ಸಿಂಗ್, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬಿಡಿಎ ಆಯುಕ್ತ ಜಯರಾಮ್, ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಹಾಗೂ ನಾನಾ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಹಕಾರಿ ಸಂಘಗಳು ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು: ಎಚ್.ಡಿ.ಕುಮಾರಸ್ವಾಮಿ

ಸಹಕಾರಿ ಸಂಘಗಳು ರೈತರ ಆರ್ಥಿಕ ಭದ್ರತೆ ಹಾಗೂ ಗ್ರಾಮೀಣ ಅಭಿವೃದ್ಧಿಯ ಪ್ರಮುಖ...

ಅಪ್ರಾಪ್ತ ಬಾಲಕಿಯ ಕೊಲೆ ಪ್ರಕರಣ: ಅಪರಾಧಿಗೆ ಮರಣದಂಡನೆ

ಎರಡು ವರ್ಷಗಳ ಹಿಂದೆ ಕೊಡಗು ಜಿಲ್ಲೆಯಲ್ಲಿ ಭಾರಿ ಸಂಚಲನ ಮೂಡಿಸಿದ್ದ ಕುಂಬಾರಗಡಿಗೆ...

ಬೈಲಹೊಂಗಲ |ಕೆಆರ್‌ಡಿಸಿಎಲ್ ಅಧ್ಯಕ್ಷರಾಗಿ ಶಾಸಕ ಮಹಾಂತೇಶ ಕೌಜಲಗಿ ನೇಮಕ

ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ (ಕೆಆರ್‌ಡಿಸಿಎಲ್) ಅಧ್ಯಕ್ಷರಾಗಿ ಬೈಲಹೊಂಗಲ ಶಾಸಕ...