ಬೆಂಗಳೂರು | ಟ್ರಾಫಿಕ್ ಪೊಲೀಸರಿಂದ ಬೀದಿಬದಿ ವ್ಯಾಪಾರಿಗಳ ತೆರವು; ಆಕ್ರೋಶ

Date:

  • 2017ರಲ್ಲಿ ನಡೆದಿದ್ದ ಬೀದಿಬದಿ ವ್ಯಾಪಾರಿಗಳ ಸಮೀಕ್ಷೆ
  • ಬೀದಿ ವ್ಯಾಪಾರಿಗಳ ಕಾಯ್ದೆ ಉಲ್ಲಂಘಿಸಿ ವ್ಯಾಪಾರಿಗಳ ತೆರವು

ರಾಜ್ಯ ರಾಜಧಾನಿ ಬೆಂಗಳೂರಿನ ಫುಟ್‌ಪಾತ್‌ಗಳನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡ ಹಿನ್ನೆಲೆ, ‘ಮುಕ್ತ ಕಾಲುದಾರಿ’ ಅಭಿಯಾನದಡಿ ನಗರ ಸಂಚಾರ ಪೊಲೀಸರು ಸೋಮವಾರ ತೆರುವು ಕಾರ್ಯಾಚರಣೆ ನಡೆಸಿದ್ದರು. ಇದೀಗ, ಕೆಲವು ಬೀದಿಬದಿ ವ್ಯಾಪಾರಿಗಳನ್ನು ತೆಗೆದುಹಾಕಿದ್ದು, ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಸೋಮವಾರ ನಗರದ 48 ಸಂಚಾರ ಪೊಲೀಸ್ ಠಾಣೆಗಳು ತಮ್ಮ ವ್ಯಾಪ್ತಿಯ ಮುಖ್ಯ ರಸ್ತೆ ಹಾಗೂ ಸರ್ವಿಸ್‌ ರಸ್ತೆ ಸೇರಿದಂತೆ ಅಕ್ರಮವಾಗಿ ಫುಟ್‌ಪಾತ್‌ ಒತ್ತುವರಿ ಮಾಡಿಕೊಂಡಿದ್ದನ್ನು ತೆರವುಗೊಳಿಸಿದ್ದಾರೆ. ಹಾಗೆಯೇ, ಅಕ್ರಮವಾಗಿ ವಾಹನ ನಿಲುಗಡೆ ಮಾಡಿದನ್ನು ತೆರವು ಮಾಡಿದ್ದಾರೆ. ಇದಕ್ಕೆ ಬೀದಿಬದಿ ವ್ಯಾಪಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ಬೀದಿ ವ್ಯಾಪಾರಿಗಳ ಕಾಯ್ದೆ ಉಲ್ಲಂಘಿಸಿ ಕೆಲವು ಸ್ಥಳಗಳಿಂದ ವ್ಯಾಪಾರಿಗಳನ್ನು ತೆರವುಗೊಳಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಟೌನ್ ವೆಂಡಿಂಗ್ ಕಮಿಟಿ (ಟಿವಿಸಿ) ಸದಸ್ಯ ಹಾಗೂ ಕೆಪಿಸಿಸಿ ಬೀದಿಬದಿ ವ್ಯಾಪಾರಿಗಳ ಸಮಿತಿ ರಾಜ್ಯಾಧ್ಯಕ್ಷ ರಂಗಸ್ವಾಮಿ ಮಾತನಾಡಿ, “ಈ ಅಭಿಯಾನ ಆರಂಭಿಸುವ ಮುನ್ನ ಬೀದಿಬದಿ ವ್ಯಾಪಾರಿಗಳೊಂದಿಗೆ ಸಂಪರ್ಕಿಸಿ ತಿರ್ಮಾನಿಸಬೇಕಿತ್ತು. ಮಾರಾಟ ಸಮಿತಿಯನ್ನು ಸಂಪರ್ಕಿಸದೇ ಈ ರೀತಿ ಮಾಡುವುದು ತಪ್ಪು. ಇದು ಮುಂದುವರೆದರೆ ನಾವು ಎದುರಿಸಲು ಸಿದ್ಧರಿದ್ದೇವೆ” ಎಂದರು.

ಬೆಂಗಳೂರು ಜಿಲ್ಲಾ ಬೀದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಸದಸ್ಯ ವಿನಯ್ ಶ್ರೀನಿವಾಸ ಮಾತನಾಡಿ, “ಇದು ಕಾನೂನು ನಿಯಮದ ಉಲ್ಲಂಘನೆ. ಬಿಬಿಎಂಪಿ ಸಮೀಕ್ಷೆ ನಡೆಸದೆ ಮಾರಾಟಗಾರರನ್ನು ಹೊರಹಾಕುವುದು. ಮಾರಾಟ ವಲಯಗಳನ್ನು ರಚಿಸುವುದು ಸರಿಯಲ್ಲ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮುಂದಿನ ಐದು ದಿನ ಸಾಧಾರಣ ಮಳೆ ಸಾಧ್ಯತೆ : ಹವಾಮಾನ ಇಲಾಖೆ

“ಬೀದಿ ಬದಿ ವ್ಯಾಪಾರಿಗಳ ಕೊನೆಯ ಸಮೀಕ್ಷೆಯನ್ನು 2017ರಲ್ಲಿ ನಡೆಸಲಾಗಿತ್ತು. ಇಷ್ಟು ವರ್ಷ ಕಳೆದರೂ ಬಿಬಿಎಂಪಿ ಇನ್ನೂ ಸಮೀಕ್ಷೆ ಆರಂಭಿಸುತ್ತಿಲ್ಲ. ಯಾವುದೇ ಸೂಚನೆ ನೀಡದೆ ಬೀದಿಬದಿ ವ್ಯಾಪಾರಿಗಳನ್ನು ಹೊರಹಾಕಲು ಸಂಚಾರ ಪೊಲೀಸರು ಸೇರಿದಂತೆ ಯಾರಿಗೂ ಅವಕಾಶವಿಲ್ಲ” ಎಂದು ಹೇಳಿದರು.

ಜಂಟಿ ಪೊಲೀಸ್ ಆಯುಕ್ತ (ಸಂಚಾರ) ಎಂ.ಎನ್.ಅನುಚೇತ್ ಮಾತನಾಡಿ, “ಅಕ್ರಮವಾಗಿ ನಿಲುಗಡೆ ಮಾಡಿರುವ ವಾಹನಗಳು ಮತ್ತು ಫುಟ್‌ಪಾತ್‌ಗಳನ್ನು ಅತಿಕ್ರಮಿಸಿರುವವರನ್ನು ಮಾತ್ರ ತೆಗೆದುಹಾಕುತ್ತಿದ್ದೇವೆ. ಡ್ರೈವ್ ಸಮಯದಲ್ಲಿ ನಾವು ಎಲ್ಲೆಲ್ಲಿ ಮಾರಾಟಗಾರರನ್ನು ಕಂಡುಕೊಂಡಿದ್ದೇವೆ. ಅವರನ್ನು ಬಿಬಿಎಂಪಿಯ ಅನುಮತಿಯೊಂದಿಗೆ ಬೇರೆ ಸ್ಥಳಕ್ಕೆ ಸ್ಥಳಾಂತರಿಸಿದ್ದೇವೆ. ಆದ್ದರಿಂದ ಪಾದಚಾರಿಗಳ ಚಲನೆಗೆ ತೊಂದರೆಯಾಗುವುದಿಲ್ಲ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...