ಬೆಂಗಳೂರು | ಕನ್ನಡ ಯೂಟ್ಯೂಬ್ ಚಾನೆಲ್ ಹೆಸರಿನಲ್ಲಿ ಬೆದರಿಸಿ ಹಣ ವಸೂಲಿ

Date:

  • ಸುದ್ದಿ ಬಿತ್ತರಿಸುವುದಾಗಿ ಬೆದರಿಕೆ ಹಾಕಿ ಹಣ ಸುಲಿಗೆ
  • ಆರೋಪಿ ತಂಡದ ಬಲೆಗೆ ಬಿದ್ದ 10ಕ್ಕೂ ಹೆಚ್ಚು ಬಲಿಪಶುಗಳು

ಯೂಟ್ಯೂಬ್ ಚಾನೆಲ್ ಹೆಸರಿನಲ್ಲಿ ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ನಾಲ್ವರನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.

- Advertisement -

ಆನಂದ್ ಅಲಿಯಾಸ್ ಫಿಗರ್, ಆತ್ಮಾನಂದ ಅಲಿಯಾಸ್ ಕೃಷ್ಣೇಗೌಡ, ಶ್ರೀನಿವಾಸ ಅಲಿಯಾಸ್ ರೇಷ್ಮೆನಾಡು ಶ್ರೀನಿವಾಸ ಹಾಗೂ ಕೇಶವಮೂರ್ತಿ ಬಂಧಿತರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಬಂಧಿತರು ಕಳೆದ ನಾಲ್ಕು ವರ್ಷಗಳಿಂದ ‘ಎಕೆ ನ್ಯೂಸ್’ ಎಂಬ ಕನ್ನಡ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದರು. ಚಾನೆಲ್ ಜನಪ್ರಿಯವಾಗುತ್ತಿದ್ದಂತೆ, ಪರವಾನಗಿ ರಹಿತರು ಹಾಗೂ ಅಕ್ರಮ ಮಾರಾಟಗಾರರನ್ನು ಗುರಿಯಾಗಿಸಿಕೊಂಡು, ಅವರ ವಿರುದ್ದ ಸುದ್ದಿ ಬಿತ್ತರಿಸುವುದಾಗಿ ಬೆದರಿಕೆ ಹಾಕಿ ಹಣ ಸುಲಿಗೆ ಮಾಡುತ್ತಿದ್ದರು. ಪೊಲೀಸರ ಕ್ರಮಕ್ಕೆ ಹೆದರಿ ಹಲವು ಅಂಗಡಿ ಮಾಲೀಕರು ಈ ಆರೋಪಿ ತಂಡಕ್ಕೆ ಭಾರಿ ಮೊತ್ತದ ಹಣ ನೀಡಿದ್ದಾರೆ.

ಸಿಸಿಬಿ ಈ ಆರೋಪಿ ತಂಡದ ಚಟುವಟಿಕೆ ಮೇಲೆ ನಿಗಾ ಇರಿಸಿದೆ. ಆದರೆ, ಯಾವುದೇ ಸಂತ್ರಸ್ತರು ದೂರು ನೀಡಲು ಮುಂದೆ ಬಂದಿಲ್ಲ. ಕೆ.ಆರ್.ಪುರದಲ್ಲಿ ಮಾಂಸದ ಅಂಗಡಿ ನಡೆಸುತ್ತಿರುವ ಸಾದಿಕ್ ಖಾನ್ ದೂರು ನೀಡಲು ಮುಂದಾಗಿದ್ದು, ಆರೋಪಿ ತಂಡದ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಿಸಿಬಿ ಸೂಚಿಸಿದೆ.

“ಈ ಆರೋಪಿ ತಂಡದ ಬಗ್ಗೆ ನಮಗೆ ಸ್ಪಷ್ಟ ಮಾಹಿತಿ ಇದೆ. ಆದರೆ, ಯಾವುದೇ ದೂರುಗಳು ದಾಖಲಾಗಿಲ್ಲ. ದೂರು ದಾಖಲಿಸಲು ಸಂತ್ರಸ್ತರನ್ನು ಸಂಪರ್ಕಿಸಿದರೂ, ಹಲವಾರು ಸಂತ್ರಸ್ತರು ದೂರು ನೀಡಲು ನಿರಾಕರಿಸಿದರು. 10ಕ್ಕೂ ಹೆಚ್ಚು ಬಲಿಪಶುಗಳು ಈ ಆರೋಪಿ ತಂಡ ಬೀಸಿದ ಬಲೆಗೆ ಬಿದ್ದಿದ್ದಾರೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕಳ್ಳತನಕ್ಕೆ ಸಂಚು ರೂಪಿಸಿದ್ದ ನೋಕಿಯಾ ಮಾಜಿ ಎಂಜಿನಿಯರ್ ಬಂಧನ

“ಎಸ್‌ಪಿ ರಸ್ತೆಯಲ್ಲಿರುವ ಅನೇಕ ಅಂಗಡಿಗಳ ಮಾಲೀಕರು ನಕಲಿ ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ ಹಣ ಸುಲಿಗೆ ಮಾಡಿದ್ದಾರೆ. ಈ ಸಂತ್ರಸ್ತರು ಕೂಡ ಪೊಲೀಸ್ ಠಾಣೆಗೆ ದೂರು ನೀಡಲು ನಿರಾಕರಿಸಿದ್ದಾರೆ. ಆರೋಪಿಗಳಿಂದ ಒಂದು ಕಾರು, ಮೊಬೈಲ್ ಫೋನ್‌ಗಳು ಮತ್ತು 13,000 ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸದ್ಯ ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...