ಬೆಂಗಳೂರು | ಡೇಟಿಂಗ್ ಆ್ಯಪ್ ಬಳಸಿ ಹುಡುಗರಿಂದ ಸುಲಿಗೆ; ಇಬ್ಬರ ಬಂಧನ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಜೀವನ ಸಂಗಾತಿಯನ್ನು ಹುಡುಕಲು ಡೇಟಿಂಗ್ ಆ್ಯಪ್‌ಗಳ ಮೊರೆ ಹೋಗುತ್ತಿರುವುದು ಹೆಚ್ಚಳವಾಗಿದೆ. ಗುರುತು ಇಲ್ಲದವರ ಜತೆಗೆ ಸಲುಗೆ ಬೆಳೆಸಿ, ಹಣವನ್ನು ಕಳೆದುಕೊಳ್ಳುವಂತಹ ಪ್ರಕರಣಗಳು ಕೆಲವು ದಿನಗಳ ಹಿಂದಿನಿಂದ ಅಧಿಕವಾಗಿವೆ. ಇದೀಗ ಇಬ್ಬರು ಆರೋಪಿಗಳು ಹುಡುಗಿ ಹೆಸರಿನಲ್ಲಿ ಕರೆ ಮಾಡಿ ವಂಚನೆ ಎಸಗುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.

- Advertisement -

ಲೊಕ್ಯಾಂಟೋ ಆ್ಯಪ್ ಮೂಲಕ ಇಬ್ಬರು ಆರೋಪಿಗಳು ಹುಡುಗಿಯ ಹೆಸರಿನಲ್ಲಿ ಫೇಕ್‌ ಅಕೌಂಟ್ ಕ್ರಿಯೇಟ್ ಮಾಡಿ ಅಪರಿಚಿತ ಯುವತಿಯ ಫೋಟೋ ಹಾಕುತ್ತಿದ್ದರು. ಈ ಫೇಕ್ ಅಕೌಂಟ್‌ನಿಂದ ಹುಡುಗರಿಗೆ ಮೆಸೇಜ್ ಮಾಡಿ ಸಲುಗೆ ಬೆಳೆಸುತ್ತಿದ್ದರು. ಹುಡುಗರು ಮರುಳಾಗುತ್ತಿದ್ದಾರೆ ಎಂದು ತಿಳಿಯುತ್ತಿದ್ದಂತೆ ಅವರಿಗೆ ಭೇಟಿ ಆಗುವಂತೆ ತಿಳಿಸಿ ಲೋಕೇಶನ್ ಕಳಿಸುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ತಾವು ಕಳಿಸಿದ ಲೊಕೇಶನ್‌ಗೆ ಬಂದ ವ್ಯಕ್ತಿ ಲೊಕ್ಯಾಂಟೋ ಆ್ಯಪ್ ಮೂಲಕ ಪರಿಚಿತನಾದವನಾ ಎಂಬ ಬಗ್ಗೆ ಖಾತ್ರಿ ಪಡಿಸಿಕೊಂಡು ಬಳಿಕ ಚಾಕು ತೋರಿಸಿ ಆಟೋದಲ್ಲಿ ಕಿಡ್ನಾಪ್ ಮಾಡುತ್ತಿದ್ದರು. ಅವರಿಂದ ಹಣ ಚಿನ್ನಾಭರಣ ಸುಲಿಗೆ ಮಾಡುವ ಜತೆಗೆ ಗೂಗಲ್ ಪೇ ಮತ್ತು ಪೋನ್ ಪೇ ಮೂಲಕ ಹಣ ವರ್ಗಾವಣೆ ಮಾಡಿಸಿಕೊಳ್ಳುತ್ತಿದ್ದರು. ಇವರ ಬಳಿ ಹಣ ಇಲ್ಲದಿದ್ದರೆ ಸ್ನೇಹಿತರಿಗೆ ಕರೆ ಮಾಡಿಸಿ ಅವರಿಂದ ಗೂಗಲ್ ಪೇ, ಫೋನ್ ಪೇ ಕೂಡ ಮಾಡಿಸಿಕೊಳ್ಳುತ್ತಿದ್ದರು. ರಾತ್ರಿಯಿಡಿ ಬಂಧನದಲ್ಲಿ ಇರಿಸುತ್ತಿದ್ದರು. ಈ ಆರೋಪಿಗಳು 15ಕ್ಕೂ ಹೆಚ್ಚು ಜನರಿಗೆ ಹುಡುಗಿ ಹೆಸರಲ್ಲಿ ಮೆಸೇಜ್ ಮಾಡಿ ಅವರನ್ನು ನಿಗದಿತ ಸ್ಥಳಕ್ಕೆ ಕರೆಸಿ ಸುಲಿಗೆ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಖ್ಯಾತ ಕವಿ, ಪದ್ಮಶ್ರೀ ಪುರಸ್ಕೃತ ಜಯಂತ ಮಹಾಪಾತ್ರ ಇನ್ನಿಲ್ಲ

ಇತ್ತೀಚೆಗೆ ಹೆಚ್​ಎಸ್​ಆರ್ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಈ ಆರೋಪಿಗಳು ವ್ಯಕ್ತಿಯೊಬ್ಬನನ್ನು ಕರೆಸಿ 60 ಸಾವಿರ ಹಣ ಸುಲಿಗೆ ಮಾಡಿದ್ದರು. ಘಟನೆ ಸಂಬಂಧ ವಂಚನೆಗೊಳಗಾದವರು ದೂರು ನೀಡಿದ ಹಿನ್ನೆಲೆ, ಪ್ರಕರಣ ದಾಖಲಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲೆ ಉಳಿಯಲಿ, ಕೌಶಲ್ಯ ಬೆಳೆಯಲಿ: ಕರ್ನಾಟಕ ಪರ್ವ 2026ಕ್ಕೆ ಡಿ.ಕೆ ಶಿವಕುಮಾರ್ ಚಾಲನೆ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ವೈವಿಧ್ಯತೆಯಲ್ಲಿ ಏಕತೆ, ಕೌಶಲ್ಯದಲ್ಲಿ ಸ್ವಾವಲಂಬನೆ ಎಂಬ...

‘ಅಟ್ಟಿಕಾ ಗೋಲ್ಡ್’ ಕಚೇರಿಗಳ ಮೇಲೆ ದಾಳಿ: ನಗದು, ಆಭರಣ ಜಪ್ತಿ

ಕಳ್ಳತನವಾದ ಚಿನ್ನಾಭರಣಗಳನ್ನು ಖರೀದಿಸಿ, ಆ ಮೂಲಕ ಅಕ್ರಮವಾಗಿ ಹಣ ಸಂಪಾದಿಸಿದ ಆರೋಪದ...

ಸೌಜನ್ಯ ಪ್ರಕರಣ ಮರುತನಿಖೆ | SIT ಪುನರ್‌ ರಚಿಸುವಂತೆ ಕೊಂದವರು ಯಾರು? ಆಂದೋಲನ ಒತ್ತಾಯ

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ರಚಿಸಲಾಗಿರುವ ವಿಶೇಷ...

ಏಕಪಕ್ಷೀಯ ನಿರ್ಧಾರ; ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಬಿ ಕೆ ಹರಿಪ್ರಸಾದ್ ಆಗ್ರಹ: ನಾಳೆ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಆಯುಕ್ತರಾದ ಗ್ಯಾನೇಶ್ ಕುಮಾರ್ ಕಳೆದ 10 ತಿಂಗಳಲ್ಲಿ...