ಬೆಂಗಳೂರು | ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತ್ನಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ

Date:

  • ಪತಿ ಹಾಗೂ ಆತನ ಗರ್ಲ್‌ಫ್ರೆಂಡ್ ವಿರುದ್ಧ ಡೆತ್‌ನೋಟ್‌ ಬರೆದಿಟ್ಟ ಪವಿತ್ರಾ
  • ಪತಿ ಅನೈತಿಕ ಸಂಬಂಧ ಹೊಂದಿರುವುದು ತಿಳಿದು ಮನನೊಂದು ಆತ್ಮಹತ್ಯೆ

ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತ್ನಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

- Advertisement -

ಹೆಗ್ಗನಹಳ್ಳಿ‌ ನಿವಾಸಿ ಪವಿತ್ರಾ ಆತ್ಮಹತ್ಯೆ ಮಾಡಿಕೊಂಡ ಯುವತಿ. ಜುಲೈ 2ರಂದು ಬೆಳಗಿನ ಜಾವ 2 ಗಂಟೆಗೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಮೃತ ಯುವತಿ ಸಾಯುವುದಕ್ಕೂ ಮುನ್ನ ತನ್ನ ಪತಿ ಹಾಗೂ ಆತನ ಗರ್ಲ್‌ಫ್ರೆಂಡ್ ವಿರುದ್ಧ ಡೆತ್‌ನೋಟ್‌ ಬರೆದಿಟ್ಟು ವಾಟ್ಸ್‌ಆಪ್‌ನಲ್ಲಿ ಸ್ಟೇಟಸ್‌ ಹಾಕಿ ಬಳಿಕ ಸಾವಿಗೆ ಶರಣಾಗಿದ್ದಾರೆ.

ಮೃತ ಯುವತಿ ಪವಿತ್ರಾ ತನ್ನ ಮೊದಲ ಪತಿಗೆ ವಿಚ್ಛೇದನ ನೀಡಿ ಚೇತನ ಗೌಡ ಅವರನ್ನು ಎರಡನೇ ಮದುವೆಯಾಗಿದ್ದರು. ಈ ಚೇತನ್ ಗೌಡ ಎಂಬುವವರು ಸುಮುಖ ಮರ್ಚೆಂಟ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಮಾಲೀಕ.

ಪವಿತ್ರಾಗೆ ತನ್ನ ಗಂಡ ಬೇರೊಂದು ಯುವತಿ ಜತೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂದು ಗೊತ್ತಾಗಿದೆ. ಈ ಬಗ್ಗೆ ಪವಿತ್ರಾ ಹಾಗೂ ಚೇತನ್ ಗೌಡ ನಡುವೆ ಪದೇಪದೆ ಜಗಳವಾಗುತ್ತಿತ್ತು.

ಈ ವಿಚಾರದ ಬಗ್ಗೆ ಪವಿತ್ರಾ ತನ್ನ ತಾಯಿ ಪದ್ಮಮ್ಮ ಬಳಿ ಹೇಳಿಕೊಂಡಿದ್ದರು. ಗಂಡನ ಅಕ್ರಮ ಸಂಬಂಧಕ್ಕೆ ಮನನೊಂದು ಪವಿತ್ರಾ ಡೆತ್ ನೋಟ್ ವಾಟ್ಸ್‌ಆಪ್ ಸ್ಟೇಟಸ್ ಹಾಕಿ ನೇಣಿಗೆ ಶರಣಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಪಕ್ಷಗಳ ರಾಜಕೀಯ ಬ್ಲಾಕ್ ಮೇಲ್‌ಗಾಗಿ ಎಸ್ಐಟಿ ತನಿಖೆ ರಚನೆ : ಪೃಥ್ವಿ ರೆಡ್ಡಿ ಆರೋಪ

ಮಗಳ ವಾಟ್ಸಾಪ್​ ಸ್ಟೇಟಸ್‌ನಲ್ಲಿ ಡೆತ್ ನೋಟ್ ನೋಡಿ ತಾಯಿ ಮನೆ ಬಳಿ ಬಂದಾಗ ಪವಿತ್ರಾ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಚೇತನ್ ಗೌಡ ಹಾಗೂ ಮತ್ತೋರ್ವ ಯುವತಿ ವಿರುದ್ದ ಮೃತ ಪವಿತ್ರಾ ತಾಯಿ ಪದ್ಮಮ್ಮ ಕೆಂಗೇರಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಚೇತನ್ ಗೌಡ ಹಾಗೂ ಮತ್ತೋರ್ವ ಯುವತಿ ವಿರುದ್ದ ಕೆಂಗೇರಿ ಪೊಲೀಸ್‌ ಠಾಣೆಯಲ್ಲಿ ಐಪಿಸಿ 306 ಆತ್ಮಹತ್ಯೆ ಪ್ರಚೋದನೆ ಅಡಿ ಎಫ್‌ಐಆರ್ ದಾಖಲಾಗಿದೆ. ಪೊಲೀಸರು ಮೃತಳು ಬರೆದಿಟ್ಟಿರುವ ಡೆತ್‌ನೋಟ್‌ ಹಾಗೂ ಆಕೆಯ ಎರಡು ಫೋನ್ ವಶಕ್ಕೆ ಪಡೆದುಕೊಂಡು ತನಿಖೆ ಕೈಗೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...