ಬೆಂಗಳೂರು | ಪ್ರಿಯಕರನಿಂದ ಭ್ರೂಣ ಹತ್ಯೆ: ದೂರು ದಾಖಲಿಸಿದ ಯುವತಿ

Date:

ಭ್ರೂಣ ಹತ್ಯೆ ಪ್ರಕರಣಗಳು ಒಂದಾಂದ ಮೇಲೊಂದರಂತೆ ಬೆಳಕಿಗೆ ಬರುತ್ತಿರುವುದು ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಸದ್ಯ ರಾಜ್ಯದಲ್ಲಿ ಭ್ರೂಣ ಹತ್ಯೆಯ ಕೃತ್ಯದ ಬಗ್ಗೆ ಭಾರೀ ಸುದ್ದಿಯಾಗುತ್ತಿದೆ. ಈ ಪ್ರಕರಣದಲ್ಲಿ ಕೆಲ ವೈದ್ಯರು, ನರ್ಸ್‌ಗಳು ಬಂಧನವಾಗಿದ್ದಾರೆ. ಈ ನಡುವೆ, ತನ್ನ ಗರ್ಭದಲ್ಲಿ ಬೆಳೆಯುತ್ತಿದ್ದ ಭ್ರೂಣವನ್ನು ಪ್ರಿಯಕರ ಹತ್ಯೆ ಮಾಡಿಸಿದ್ದಾನೆ ಎಂದು ಯುವತಿಯೊಬ್ಬಳು ಆರೋಪಿಸಿದ್ದಾಳೆ.

ಫೇಸ್​ಬುಕ್‌ನಲ್ಲಿ ತನ್ನ ಪ್ರಿಯಕರ ಬಾಲಕೃಷ್ಣ ಸುನೀಲ್ ಎಂಬಾತನ ವಿರುದ್ಧ ಆರೋಪ ಮಾಡಿದ್ದಾರೆ. ಆತ ತನ್ನ ಗರ್ಭದಲ್ಲಿ ಭ್ರೂಣವನ್ನು ಹತ್ಯೆ ಮಾಡಿಸಿದ್ದಾನೆ ಎಂದು ಯುವತಿ ಆರೋಪಿಸಿದ್ದಾರೆ. ಹಾಸನ ಜಿಲ್ಲಾ ಪೊಲೀಸರು ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಟ್ಯಾಗ್ ಮಾಡಿ ಪ್ರಿಯಕರನ ವಿರುದ್ಧ ದೂರು ನೀಡಿದ್ದಾಳೆ.

ಈ ಸುದ್ದಿ ಓದಿದ್ದೀರಾ? ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಯುವತಿ ಪೋಸ್ಟ್‌ನಲ್ಲಿ ಏನಿದೆ?

ಬಾಲಕೃಷ್ಣ ಸುನೀಲ್ ಎಂಬಾತ ಕಳೆದ ಆರು ವರ್ಷಗಳಿಂದ ನನ್ನನ್ನು ಪ್ರೀತಿಸಿ, ಮದುವೆ ಆಗುತ್ತೀನಿ ಎಂದು ಮೋಸ ಮಾಡಿದ್ದಾನೆ. ಬೆಂಗಳೂರಿನಲ್ಲಿ ಗಂಡ ಹೆಂಡತಿಯರಂತೆ ಒಟ್ಟಿಗೆ ಇದ್ದೆವು. ಅಲ್ಲದೇ, ನನ್ನನ್ನು ಮದುವೆ ಆಗುವುದಾಗಿ ವಂಚಿಸಿ, ದೈಹಿಕವಾಗಿ ಬಳಸಿಕೊಂಡು ಗರ್ಭಿಣಿಯಾಗುವಂತೆ ಮಾಡಿ, ಕೊನೆಗೆ ಭ್ರೂಣ ಹತ್ಯೆ ಮಾಡಿದ್ದಾನೆ. ಇದರ ಜತೆಗೆ ನನ್ನಲ್ಲಿದ್ದ ಹಣವನ್ನೂ ದೋಚಿದ್ದಾನೆ.

ಇದೀಗ ಬೇರೊಬ್ಬ ಯುವತಿಯೊಂದಿಗೆ ಮದುವೆ ಮಾಡಿಕೊಂಡು ಹಾಸನದ ಸಕಲೇಶಪುರದ ಅಗಲಟ್ಟಿ ಎಂಬ ಊರಿನಲ್ಲಿ ತಲೆಮರೆಸಿಕೊಂಡು ಓಡಾಡುತ್ತಿದ್ದಾನೆ ಎಂದು ಯುವತಿ ಆರೋಪಿಸಿದ್ದು, ನ್ಯಾಯ ಕೊಡಿಸಿ ಎಂದು ಮನವಿ ಮಾಡಿಕೊಂಡಿದ್ದಾಳೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಂಡಿಯಾ ಒಕ್ಕೂಟಕ್ಕೆ ಹೆದರಿ ಅರವಿಂದ್ ಕೇಜ್ರಿವಾಲ್‌ ಬಂಧಿಸಲು ಕೇಂದ್ರದಿಂದ ಸಂಚು: ಮೋಹನ್ ದಾಸರಿ

"ಇಂಡಿಯಾ ಒಕ್ಕೂಟದಲ್ಲಿ ಎಎಪಿ-ಕಾಂಗ್ರೆಸ್ ನಡುವೆ ಲೋಕಸಭಾ ಚುನಾವಣೆಯಲ್ಲಿ ಸೀಟು ಹಂಚಿಕೆ ಪ್ರಕ್ರಿಯೆ...

ಮಂಡ್ಯ | ನನಗೆ ಬೇರೆಡೆ ಟಿಕೆಟ್​ ಪಡೆಯುವುದು ಕಷ್ಟವಲ್ಲ: ಸುಮಲತಾ ಅಂಬರೀಶ್

ನಿನ್ನೆ(ಫೆ.22) ದೆಹಲಿಯಲ್ಲಿ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ...

ರೈಲಿಗೆ ಬೆಂಕಿ ಹಚ್ಚಿ ಸುಡುತ್ತೇವೆ ಎಂದವರನ್ನು ಒದ್ದು ಒಳಗೆ ಹಾಕಬೇಕು: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಅಯೋಧ್ಯೆಯ ರಾಮ ಮಂದಿರಕ್ಕೆ ತೆರಳುತ್ತಿದ್ದ ರೈಲಿಗೆ ಹೊಸಪೇಟೆಯಲ್ಲಿ ಬೆಂಕಿ ಹಚ್ಚಿ ಸುಡುತ್ತೇವೆ...

ವಿಪಕ್ಷ ನಾಯಕ ಸ್ಥಾನದಿಂದ ಅಶೋಕ್‌ರನ್ನು ಕೆಳಗಿಳಿಸಿ: ಬಿಜೆಪಿ ರಾಜ್ಯಾಧ್ಯಕ್ಷರಿಗೆ ಬಜರಂಗದಳ ಒತ್ತಾಯ

ಬಜೆಟ್ ಅಧಿವೇಶನದ ವೇಳೆ ಮಾತನಾಡುತ್ತಿದ್ದ ಸಂದರ್ಭದಲ್ಲಿ ವಿಪಕ್ಷ ನಾಯಕ ಆರ್. ಅಶೋಕ್,...