ರಾಜ್ಯ ರಾಜಧಾನಿ ಬೆಂಗಳೂರಿನ ರಾಜಾಜಿನಗರದ ಮೆಟ್ರೋ ನಿಲ್ದಾಣದ ಬಳಿ ಮಂಗಳವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, 4 ಬೈಕ್‌ಗಳು ಸುಟ್ಟು ಕರಕಲಾಗಿವೆ.
ರಾಜಾಜಿನಗರದ ಮೆಟ್ರೋ ನಿಲ್ದಾಣದ ಬಳಿ ಪಾರ್ಕ್ ಮಾಡಲಾಗಿದ್ದ 3 ಸ್ಕೂಟಿ 1 ಬೈಕ್ಗೆ ಬೆಂಕಿ ತಗುಲಿದೆ. ಬೆಂಕಿ ಧಗಧಗ ಉರಿದಿದ್ದರಿಂದ ನಾಲ್ಕು ಬೈಕ್‌ಗಳು ಸುಟ್ಟು ಕರಕಲಾಗಿವೆ. ಆದರೆ, ಬೆಂಕಿ ಹೇಗೆ ಹೊತ್ತಿಕೊಂಡಿತು ಎನ್ನುವುದಕ್ಕೆ ಕಾರಣ ಇನ್ನು ತಿಳಿದು ಬಂದಿಲ್ಲ.
ಈ ಸುದ್ದಿ ಓದಿದ್ದೀರಾ? ಕೆಪಿಎಸ್‌ಸಿ | ಅನ್ಯಾಯ ಪ್ರಶ್ನಿಸಿದ ವಿದ್ಯಾರ್ಥಿನಾಯಕನ ಬಂಧನ ಖಂಡಿಸಿ ಸಿಎಂಗೆ ಪತ್ರ ಬರೆದ ಮುಖ್ಯಮಂತ್ರಿ ಚಂದ್ರು
ಮಾಹಿತಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ರಾಜಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ದ್ವಿಚಕ್ರ ವಾಹನಗಳು ಸುಟ್ಟು ಹೋದ ಕಾರಣ ಸವಾರರು ಕಂಗಾಲಾಗಿದ್ದಾರೆ.