- ಬೆಂಕಿ ಅವಘಡ ವೇಳೆ 10ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ
- 700 ಮೀಟರ್ ದಾರಿಯುದ್ದಕ್ಕೂ ಕರ್ಪೂರದ ಪೂಜೆ ನಡೆದಿದೆ
ರಾಜಧಾನಿ ಬೆಂಗಳೂರಿನಲ್ಲಿ ಕರಗ ಉತ್ಸವಕ್ಕೆ ಕ್ಷಣಗಣನೆ ಶುರುವಾಗಿದ್ದು, ಪೂಜಾ ಕೈಂಕರ್ಯಗಳು ಆರಂಭಗೊಂಡಿವೆ. ಆದರೆ, ಇದೇ ವೇಳೆ ಬೆಂಕಿ ಅವಘಡ ಸಂಭವಿಸಿದ್ದು, ಕರ್ಪೂರ ಪೂಜೆ ವೇಳೆ ರಸ್ತೆ ಬದಿ ನಿಲ್ಲಿಸಿದ್ದ 10ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿಯಾಗಿವೆ.
ಗುರುವಾರ ಮಧ್ಯರಾತ್ರಿ ಕರಗ ಉತ್ಸವ ನಡೆಯಲಿದೆ. ಈ ಹಿನ್ನಲೆಯಲ್ಲಿ, ಪೂಜಾ ವಿಧಿ ವಿಧಾನಗಳು ವಿಜೃಂಭನೆಯಿಂದ ನಡೆಯುತ್ತಿವೆ. ಎನ್ ಆರ್ ಸಿಂಗ್ನಲ್‌ನಿಂದ ಧರ್ಮರಾಯ ದೇವಸ್ಥಾನದವರೆಗೂ ಕರ್ಪೂರ ಹಚ್ಚಿ ಪೂಜೆ ಸಲ್ಲಿಸಲಾಗುತ್ತಿದೆ. ಸುಮಾರು 700 ಮೀಟರ್ ದಾರಿಯುದ್ದಕ್ಕೂ ಕರ್ಪೂರದ ಪೂಜೆ ನಡೆದಿದೆ. ಈ ವೇಳೆ ಬೆಂಕಿ ಅವಘಡ ಸಂಭವಿಸಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಏ.6ರ ಮಧ್ಯರಾತ್ರಿ ಐತಿಹಾಸಿಕ ಕರಗ ಉತ್ಸವ
ಕರ್ಪೂರ ಹಚ್ಚಲಿರುವ ಹಿನ್ನೆಲೆ, ಬೈಕ್ ಹಾಗೂ ಆಟೋ ಮಾಲೀಕರಿಗೆ ಅವುಗಳನ್ನು ತೆರವುಗೊಳಿಸುವಂತೆ ಮೈಕ್ನಲ್ಲಿ ಹೇಳಲಾಗಿತ್ತು. ಆದರೂ ಕೂಡ ಯಾರು ತೆರವು ಮಾಡಿರಲಿಲ್ಲ. ಬೈಕ್ ನಿಲ್ಲಿಸಿದ್ದ ಸ್ಥಳ ಬಳಿ ದೊಡ್ಡ ಪ್ರಮಾಣದಲ್ಲಿ ಕರ್ಪೂರ ಹಚ್ಚಲಾಗಿತ್ತು. ಅದರಿಂದ ಹಾರಿದ ಬೆಂಕಿಯ ಕಿಡಿ ದ್ವಿಚಕ್ರ ವಾಹನಗಳಿಗೆ ತಗುಲಿದೆ. ಪರಿಣಾಮ ಬೈಕ್ಗಳು ಹೊತ್ತಿ ಉರಿದಿವೆ.
ಕರಗ ಮಹೋತ್ಸವವು ಮಾರ್ಚ್ 29ರಿಂದ ಪ್ರಾರಂಭವಾಗಿದ್ದು, ಒಟ್ಟು 11 ದಿನಗಳ ಕಾಲ ನಡೆಯಲಿದೆ.