ಬೆಂಗಳೂರು | ಉದ್ಯಾನ್‌ ಎಕ್ಸ್‌ಪ್ರೆಸ್‌ ರೈಲಿನ 2 ಬೋಗಿಗಳಲ್ಲಿ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರೀ ಅನಾಹುತ

Date:

  • ಮೆಜೆಸ್ಟಿಕ್ ಸುತ್ತಮುತ್ತ ಆವರಿಸಿದ ದಟ್ಟಹೊಗೆ
  • ಮುಂಬೈನಿಂದ ಬೆಂಗಳೂರಿಗೆ ಬಂದಿದ್ದ ರೈಲು

ರಾಜ್ಯ ರಾಜಧಾನಿ ಬೆಂಗಳೂರಿನ ಮೆಜೆಸ್ಟಿಕ್ ಬಳಿಯ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಉದ್ಯಾನ್‌ ಎಕ್ಸ್‌ಪ್ರೆಸ್‌ ರೈಲಿಗೆ ಶನಿವಾರ ಬೆಳಗ್ಗೆ 7.30ಕ್ಕೆ ಅಗ್ನಿ ಅವಘಡ ಸಂಭವಿಸಿದೆ.

ತಾಂತ್ರಿಕ ಸಮಸ್ಯೆಯಿಂದ ರೈಲ್ವೆ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಂತರ ಬೆಂಕಿ ರೈಲಿನ ಎರಡು ಬೋಗಿಗಳಿಗೆ ಆವರಿಸಿದೆ. ಮೆಜೆಸ್ಟಿಕ್ ಸುತ್ತಮುತ್ತ ದಟ್ಟ ಹೊಗೆ ಆವರಿಸಿದೆ. ಈ ವೇಳೆ ಸ್ಥಳದಲ್ಲಿ ಇದ್ದ ಪ್ರಯಾಣಿಕರು ಇದನ್ನು ಕಂಡು ಗಾಬರಿಗೊಂಡಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ರೈಲ್ವೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಉದ್ಯಾನ್‌ ಎಕ್ಸ್‌ಪ್ರೆಸ್‌ ರೈಲು ಬೆಳಗ್ಗೆ 6 ಗಂಟೆಗೆ ಮುಂಬೈನಿಂದ ಕೆಎಸ್​ಆರ್​​ ರೈಲು ನಿಲ್ದಾಣಕ್ಕೆ ಆಗಮಿಸಿದೆ. ಬೆಳಗ್ಗೆ 7.30 ಕ್ಕೆ ಬೆಂಕಿ ಹೊತ್ತಿಕೊಂಡಿದೆ. ಸದ್ಯ ಬೆಂಕಿ ತಗುಲಿದ ಬೋಗಿಯಿಂದ ಉಳಿದ ಬೋಗಿಗಳನ್ನು ಬೇರ್ಪಡಿಸಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ

“ಉದ್ಯಾನ್ ಎಕ್ಸ್‌ಪ್ರೆಸ್ (ರೈಲು ನಂ. 11301) ರೈಲು 5.45 ಗಂಟೆಗೆ ಪ್ಲಾಟ್‌ಫಾರ್ಮ್ ಸಂಖ್ಯೆ 3 ರಲ್ಲಿ ಕೆಎಸ್‌ಆರ್ ಬೆಂಗಳೂರಿಗೆ ಆಗಮಿಸಿತು. ಸುಮಾರು 07.10ಗಂಟೆಗೆ 1 ಮತ್ತು 2 ಬೋಗಿಗಳಲ್ಲಿ ಹೊಗೆ ಕಾಣಿಸಿಕೊಂಡಿದೆ. ಈ ವೇಳೆ ತಕ್ಷಣ ಅಗ್ನಿಶಾಮಕ ದಳಕ್ಕೆ ಸಂದೇಶ ನೀಡಲಾಗಿದೆ. ಬೆಳಗ್ಗೆ 7.35ಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರು. ಈ ಹೊಗೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ತನಿಖೆ ನಡೆಯುತ್ತಿದೆ” ಎಂದು ರೈಲ್ವೆ ಇಲಾಖೆ ಸಾರ್ವಜನಿಕ ಸಂಪರ್ಕಾಧಿಕಾರಿ ಅನೀಶ್ ಹೆಗಡೆ ಹೇಳಿದರು.

ಈ ಸುದ್ದಿ ಓದಿದ್ದೀರಾ? ಚಿನ್ನದ ಕಳ್ಳಸಾಗಣೆ | ಸಿಂಥೆಟಿಕ್ ಬೆಲ್ಟ್‌ನಲ್ಲಿ ಬಚ್ಚಿಟ್ಟಿದ್ದ ₹ 1.59 ಕೋಟಿ ಮೌಲ್ಯದ ಚಿನ್ನದ ಸರ ವಶ; ಬಂಧನ

“ಘಟನಾ ಸಮಯದಲ್ಲಿ ಯಾವುದೇ ಪ್ರಯಾಣಿಕರಿಗೆ ಯಾವುದೇ ಗಾಯ ಹಾಗೂ ಅನಾಹುತವಾಗಿಲ್ಲ. ಘಟನೆಯ ವೇಳೆ ಎಲ್ಲ ಪ್ರಯಾಣಿಕರು ರೈಲಿನಿಂದ ಇಳಿದಿದ್ದರು. ರೈಲು ಬಂದ ಎರಡು ಗಂಟೆಗಳ ನಂತರ ಈ ಘಟನೆ ಸಂಭವಿಸಿದೆ. ಬೇರೆ ಯಾವುದೇ ರೈಲಿಗೆ ತೊಂದರೆಯಾಗಿಲ್ಲ” ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಕಾ.ತ. ಚಿಕ್ಕಣ್ಣನವರ ಸಮಗ್ರ ಸಾಹಿತ್ಯ ಸಂಪುಟ ಬಿಡುಗಡೆ

"ಅರವತ್ತು ವರ್ಷ ಮೀರಿದವರಿಗೆ ಕಾ.ತ. ಚಿಕ್ಕಣ್ಣ ನೆನಪಾಗುವುದು ಕನ್ನಡ- ಸಂಸ್ಕೃತಿ ಇಲಾಖೆಯ...

ಬೆಂ.ಗ್ರಾಮಾಂತರ | ಲಂಚ ಸ್ವೀಕಾರ; ಬೆಸ್ಕಾಂ ಎಇಇ, ಎಸ್‌ಒ ಲೋಕಾಯುಕ್ತ ಬಲೆಗೆ

ನೂತನ ಬಡಾವಣೆಗೆ ವಿದ್ಯುತ್‌ ಸಂಪರ್ಕ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬೆಸ್ಕಾಂ...

ಬೆಂಗಳೂರು | ಲಿಫ್ಟ್‌ ಗುಂಡಿಗೆ ಬಿದ್ದು 7 ವರ್ಷದ ಬಾಲಕ ಸಾವು

ಲಿಫ್ಟ್‌ಗೆಂದು ತೆಗೆದಿದ್ದ ಗುಂಡಿಗೆ ಬಿದ್ದು 7 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ...

ಬೆಂಗಳೂರು | ಕಸ ಸುರಿವ ‘ತೊಟ್ಟಿ’ಯಾದ ಚಿಕ್ಕಪೇಟೆ ಮುಖ್ಯ ರಸ್ತೆ!

ಬೆಂಗಳೂರಿನ ಅತಿ ಹೆಚ್ಚು ಜನನಿಬಿಡ ಪ್ರದೇಶಗಳಲ್ಲಿ ಒಂದಾದ, ವ್ಯಾಪಾರ ಚಟುವಟಿಕೆ ತಾಣವಾಗಿರುವ...