ಬೆಂಗಳೂರು | ಮಹಿಳೆಯ ಕೈ-ಕಾಲು ಕಟ್ಟಿಹಾಕಿ ದರೋಡೆ; ಐವರ ಬಂಧನ

Date:

ಹಣದ ಆಸೆಗೆ ಬಿದ್ದು ಸ್ನೇಹಿತೆಯ ಮನೆಯಲ್ಲಿ ಹಗಲು ಹೊತ್ತಲ್ಲೇ ಮಹಿಳೆಯ ಕೈ-ಕಾಲು ಕಟ್ಟಿ ಹಾಕಿ, ದರೋಡೆ ಮಾಡಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಕೊಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಗುರು, ರುದ್ರೇಶ್, ಸಂದೀಪ್, ಪ್ರಭಾವತಿ ಹಾಗೂ ರೇಣುಕಾ ಬಂಧಿತರು. ಗುರು ಮತ್ತು ರೇಣುಕಾ ಇಬ್ಬರು ಪತಿ-ಪತ್ನಿಯರಾಗಿದ್ದಾರೆ. ಆರೋಪಿಗಳು ಅನುಶ್ರೀ ಎಂಬ ಮಹಿಳೆಯನ್ನು ಕಟ್ಟಿ ಹಾಕಿ, ಆಕೆಯ ಮನೆಯಲ್ಲಿ ದರೋಡೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಏನಿದು ಪ್ರಕರಣ?   

ಮಾಡಿದ ಸಾಲ ತೀರಿಸೋಕೆ ಅಡ್ಡ ದಾರಿ ಹಿಡಿದ ರೇಣುಕಾ ಹಣದ ಆಸೆಗೆ ಬಿದ್ದು ತನ್ನ ಸ್ನೇಹಿತೆ ಬಳಿಯೇ ಹಣ ದೋಚಲು ಸಂಚು ರೂಪಿಸಿದ್ದಾಳೆ.

ತನ್ನ ಗ್ಯಾಂಗ್​ನೊಂದಿಗೆ ಜನವರಿ‌ 14ರ ಬೆಳಗ್ಗೆ 9.20 ಗಂಟೆ ಸುಮಾರಿಗೆ ಕೊಡಿಗೆಹಳ್ಳಿ ಸಮೀಪದ ತಿಂಡ್ಲು ಸರ್ಕಲ್​ನಲ್ಲಿ ಇರುವ ಗಂಗಾ ಆಯುರ್ವೇದಿಕ್ ಮಸಾಜ್ ಸೆಂಟರ್​ಗೆ ಮಸಾಜ್ ಥೆರಪಿಗೆಂದು ಬಂದಿದ್ದರು. ಬಳಿಕ ಅನುಶ್ರೀ ಎಂಬ ಮಹಿಳೆಯ ಮುಖಕ್ಕೆ ಕೆಮಿಕಲ್ ಇದ್ದ ಕರ್ಚಿಫ್ ಇಟ್ಟು, ಕೈ-ಕಾಲು ಕಟ್ಟಿ ಹಾಕಿ ಮಹಿಳೆಯ ಮಾಂಗಲ್ಯ ಸರ ಸೇರಿದಂತೆ ಚಿನ್ನಾಭರಣ ಕಸಿದು ಪರಾರಿಯಾಗಿದ್ದರು.

ರೇಣುಕಾ ಮತ್ತು ಆಕೆಯ ಪತಿ ದರೋಡೆ ಮಾಡಲು ಹಿಂದಿನ ದಿನವೇ ಮಸಾಜ್ ಸೆಂಟರ್‌ಗೆ ಬಂದು ಹೊಂಚು ಹಾಕಿದ್ದರು. ಮಸಾಜ್ ಸೆಂಟರ್‌ನಲ್ಲಿ ಥೆರಫಿಸ್ಟ್ ಒಬ್ಬಳೇ ಇದ್ದಾಗ ದರೋಡೆ ಮಾಡಲು ಬೆಳಗ್ಗೆ 8:30ರ ಸುಮಾರಿಗೆ ಮಸಾಜ್ ಸೆಂಟರ್‌ಗೆ ಎರಡು ಪಲ್ಸರ್ ಬೈಕ್‌ನಲ್ಲಿ ಗ್ಯಾಂಗ್ ಬಂದಿತ್ತು. ಗುರು, ಪ್ರಭಾವತಿ, ರುದ್ರೇಶ್, ಸಂದೀಪ್ ಗಂಗಾ ಆಯುರ್ವೇದಿಕ್ ಮಸಾಜ್ ಸೆಂಟರ್ ಬಳಿ ಗಾಡಿ ನಿಲ್ಲಿಸಿದರು. ಬಳಿಕ ಥೆರಫಿಸ್ಟ್ ಅನುಶ್ರೀ ಒಬ್ಬರೇ ಇದ್ದದನ್ನು ಗಮನಿಸಿ ಒಳಗೆ ಬಂದು ಮಸಾಜ್ ಮಾಡಿಸಿಕೊಳ್ಳಲು ದರದ ಮಾಹಿತಿ ನೀಡಿ ಎಂದು ಚರ್ಚಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚುನಾವಣೆ ಸಮಯದಲ್ಲಿ ಕೋಮುಗಲಭೆ ಆಗದಂತೆ ನೋಡಿಕೊ‌ಳ್ಳಿ: ಸಿದ್ದರಾಮಯ್ಯ ಖಡಕ್‌ ಸೂಚನೆ

ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಡಿಗೆಹಳ್ಳಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಸದ್ಯ ವಿಚಾರಣೆ ಮುಂದುವರೆದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...