ಬೆಂಗಳೂರು | ಗಣೇಶ ವಿಸರ್ಜನೆ ಮೆರವಣಿಗೆ; ಅ.1 ರವರೆಗೆ ಮದ್ಯ ಮಾರಾಟ ನಿಷೇಧ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಸೆಪ್ಟೆಂಬರ್ 21 ರಿಂದ ಅಕ್ಟೋಬರ್ 1 ರವರೆಗೆ ನಗರದ ನಾನಾ ಪೊಲೀಸ್ ವಿಭಾಗಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಬೆಂಗಳೂರು ನಗರ ಪೊಲೀಸ್ ಇಲಾಖೆ ಆದೇಶಿಸಿದೆ.

ಗಣೇಶ ಮೆರವಣಿಗೆ ಸಂದರ್ಭದಲ್ಲಿ ಕುಡಿದ ಅಮಲಿನಲ್ಲಿ ನಡೆಯುವ ಗಲಾಟೆಗಳನ್ನು ತಡೆಯಲು ಬೆಂಗಳೂರಿನ ಕೇಂದ್ರ, ಉತ್ತರ, ಪೂರ್ವ ಮತ್ತು ಈಶಾನ್ಯ ವಿಭಾಗದ ಪೊಲೀಸ್ ಠಾಣಾ ವ್ಯಾಪ್ತಿಯ ಎಲ್ಲ ಮದ್ಯದಂಗಡಿ, ಬಾರ್ ಮತ್ತು ರೆಸ್ಟೋರೆಂಟ್ ಮತ್ತು ವೈನ್ ಶಾಪ್ ​ಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಈ ನಿಟ್ಟಿನಲ್ಲಿ ಅಕ್ಟೋಬರ್ 1ರವರೆಗೆ ಬೆಂಗಳೂರಿನ ನಾನಾ ಪ್ರದೇಶಗಳಲ್ಲಿ ಪ್ರತಿಷ್ಠಾಪಿಸಿರುವ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡುವಂತೆ ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಇಎಸ್‌ಐ ಯೋಜನೆಗೆ ಕಾರ್ಮಿಕರ ವೇತನ ಮಿತಿ ₹21 ಸಾವಿರದಿಂದ ₹50 ಸಾವಿರಕ್ಕೆ ಏರಿಕೆ ಮಾಡಿ; ಕಾರ್ಮಿಕರ ಪ್ರತಿಭಟನೆ

  • ಬೆಂಗಳೂರು ಉತ್ತರ ವಿಭಾಗದ ಜೆ.ಸಿ.ನಗರ, ಆರ್.ಟಿ.ನಗರ, ಹೆಬ್ಬಾಳ, ಸಂಜಯ ನಗರದಲ್ಲಿ ಸೆಪ್ಟೆಂಬರ್ 21ರ ಬೆಳಗ್ಗೆ 6 ಗಂಟೆಯಿಂದ ಸೆಪ್ಟೆಂಬರ್ 22ರ ಬೆಳಗ್ಗೆ 6 ಗಂಟೆವರೆಗೆ ಮದ್ಯ ಮಾರಾಟದ ಮೇಲೆ ನಿಷೇಧ ಹೇರಲಾಗಿದೆ.
  • ಪೂರ್ವ ವಿಭಾಗದ ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ, ಗೋವಿಂದಪುರ, ಬಾಣಸವಾಡಿ, ರಾಮಮೂರ್ತಿ ನಗರ, ಹೆಣ್ಣೂರು, ಭಾರತಿನಗರ, ಪುಲಿಕೇಶಿನಗರ ಠಾಣಾ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 23ರ ಬೆಳಗ್ಗೆ 6 ರಿಂದ ಸೆ.24ರ ಬೆಳಗ್ಗೆ 6ರವರೆಗೆ ಮದ್ಯ ನಿಷೇಧಿಸಲಾಗಿದೆ.
  • ಸೆಪ್ಟೆಂಬರ್ 24ರ ಬೆಳಗ್ಗೆ 6ರಿಂದ ಸೆಪ್ಟೆಂಬರ್ 25ರ ಬೆಳಗ್ಗೆ 6 ಗಂಟೆವರೆಗೆ ಕಮರ್ಷಿಯಲ್ ಸ್ಟ್ರೀಟ್, ಶಿವಾಜಿನಗರ, ಹಲಸೂರು ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧವಿರಲಿದೆ.
  • ಸೆಪ್ಟೆಂಬರ್ 23ರ ಸಂಜೆ 6ರಿಂದ ಸೆ.25ರ ಬೆಳಗ್ಗೆ 6 ಗಂಟೆವರೆಗೆ ಬೆಂಗಳೂರಿನ ಈಶಾನ್ಯ ವಿಭಾಗದ ವಿದ್ಯಾರಣ್ಯಪುರ, ಯಲಹಂಕ, ಕೊಡಿಗೆಹಳ್ಳಿ, ಯಲಹಂಕ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ನಿಷೇಧ ಹೇರಲಾಗಿದೆ.
  • ಸೆ.30ರ ಬೆಳಗ್ಗೆ 6ರಿಂದ ಅಕ್ಟೋಬರ್ 1ರ ಬೆಳಗ್ಗೆ 6ರವರೆಗೆ ಕೇಂದ್ರ ವಿಭಾಗದ ಹೈಗ್ರೌಂಡ್ಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೇವನಹಳ್ಳಿ | ಕೆಐಎಡಿಬಿ ಭೂಸ್ವಾಧೀನಕ್ಕೆ ವಿರೋಧ: ‘ಬೇಡಿಕೆ ಈಡೇರುವವರೆಗೂ ಹೋರಾಟ ನಿಲ್ಲಲ್ಲ’ ಎಂದ ರೈತ ಮುಖಂಡರು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಕಳೆದ 842 ದಿನಗಳಿಂದ ಹೋರಾಟ ನಡೆಸುತ್ತಿದ್ದ...

ರಾಮನಗರ | 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ; ಆರೋಪಿ ಬಂಧನ

ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಂದ ಘಟನೆ ಬೆಂಗಳೂರು...

ವಿಪಕ್ಷಗಳಿಗೆ ದಃಸ್ವಪ್ನವಾಗಿದ್ದ ‘ಇ.ಡಿ’ ಮೇಲೆಯೇ ಎಫ್ಐಆರ್

ಮೋದಿ ಸರ್ಕಾರ ಆಡಳಿತಕ್ಕೆ ಬಂದು ಹತ್ತು ವರ್ಷಗಳು ಕಳೆದಿವೆ. ಇದೀಗ, ಮೂರನೇ...

ಕರ್ತವ್ಯ ಸಂಬಂಧಿತ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವಂತಿಲ್ಲ; ಪೊಲೀಸರಿಗೆ ಆಯುಕ್ತರ ಎಚ್ಚರಿಕೆ

ಪೊಲೀಸ್‌ ಸಿಬ್ಬಂದಿಗಳು ಸಮವಸ್ತ್ರದಲ್ಲಿರುವ ತಮ್ಮ ಫೋಟೋ, ವಿಡಿಯೋ, ರೀಲ್ಸ್‌ ಸೇರಿದಂತೆ ಕರ್ತವ್ಯಕ್ಕೆ...